ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೨೨
ಅನಿಲ್ ರಾಧಾಕೃಷ್ಣ ಕುಂಬ್ಳೆ (ಜನನ: ಅಕ್ಟೋಬರ್ ೧೭, ೧೯೭೦ ಬೆಂಗಳೂರಿನಲ್ಲಿ) - ಭಾರತದ ಕ್ರಿಕೆಟ್ ಆಟಗಾರ ಮತ್ತು ಭಾರತ ಕ್ರಿಕೆಟ್ ತಂಡದ ಸದಸ್ಯ ೧೯೯೦ರಿಂದ.
ಕುಂಬ್ಳೆ ಲೆಗ್ ಸ್ಪಿನ್ನರ್. ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿ, ಇವರ ಗೂಗ್ಲಿ ಕ್ರಿಕೆಟ್ ಜಗತ್ತಿನಲ್ಲಿ ಬಹಳ ಪ್ರಸಿದ್ಧ. ಇವರು ಮೊದಲು ಮಧ್ಯ ವೇಗದ ಬೌಲರ್ ಆಗಿ ಕ್ರಿಕೆಟ್ ಪ್ರವೇಶಿಸಿದ್ದು; ಇದು ಅವರಿಗೆ ಕೊಡುಗೆ ಎಂಬಂತೆ ವೇಗವಾಗಿ ಬೌಲ್ ಮಾಡಲು ಸಹಾಯಕವಾಗಿದೆ. ಸಾಧಾರಣವಾಗಿ ಸ್ಪಿನ್ ಬೌಲರ್ಗಳು ಬಾಲ್ ಹಾಕುವ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಬೌಲ್ ಮಾಡುವ ಅನಿಲ್ ಕುಂಬ್ಳೆ, ೫೩೦ಕ್ಕೂ ಹೆಚ್ಚು ಟೆಸ್ಟ್ ವಿಕೆಟ್ಗಳನ್ನು ಪಡೆದಿದ್ದಾರೆ. ಇವರು ಒಂದು ದಿನದ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದು ಏಪ್ರಿಲ್ ೨೫, ೧೯೯೦ ರಂದು, ಶ್ರೀಲಂಕಾ ಮೇಲಿನ ಪಂದ್ಯದಲ್ಲಿ. ಅದೇ ವರ್ಷ ಟೆಸ್ಟ್ ಕ್ರಿಕೆಟ್ಗೆ ಕಾಲಿಟ್ಟರು.
ಪಾಕಿಸ್ತಾನದ ವಿರುದ್ಧ ೧೯೯೯ರಲ್ಲಿ ನಡೆದ ಪಂದ್ಯದಲ್ಲಿನ ಎರಡನೇ ಇನ್ನಿಂಗ್ಸಿನಲ್ಲಿನ ಎಲ್ಲಾ ಹತ್ತು ವಿಕೆಟುಗಳನ್ನು ಪಡೆದು ಅನಿಲ್ ಕುಂಬ್ಳೆ ಒಬ್ಬರಾಗಿ ವಿಶ್ವದಾಖಲೆ ಸ್ಥಾಪಿಸಿದ್ದಾರೆ.