ಕ್ಷಯ
ಕ್ಷಯ ಮಾನವನಿಗೆ ಮತ್ತು ಹಲವು ಪ್ರಾಣಿಗಳಿಗೆ ಬರುವ ಒಂದು ಮಾರಕ ರೋಗ. ಈ ರೋಗವು ಮೈಕೊಬ್ಯಾಕ್ಟೀರಿಯಂ ಜಾತಿಯ ಹಲವು ಬ್ಯಾಕ್ಟೀರಿಯಗಳಿಂದ ಬರುತ್ತದೆ. ಪ್ರಮುಖವಾಗಿ ಪುಪ್ಪಸಗಳಿಗೆ ಹಾನಿ ಮಾಡುವ ಈ ರೋಗ ಮುಂದೆ ದೇಹದ ಹಲವು ಅಂಗಾಂಗಗಳ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ.
ಸೋಂಕು ಹರಡುವ ರೀತಿ
[ಬದಲಾಯಿಸಿ]ಕ್ಷಯ' ಮಾನವನಿಗೆ ಅದೇ ರೀತಿ ಹಲವು ಪ್ರಾಣಿಗಳಿಗೆ ಬರುವ ಒಂದು ಮಾರಕ ರೋಗ. ಈ ರೋಗವು ಮೈಕೊ 'ಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್' ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಪ್ರಮುಖವಾಗಿ ಪುಪ್ಪಸಗಳಿಗೆ ಹಾನಿ ಮಾಡುವ ಈ ರೋಗವು ದೇಹದ ಅಂಗಾಂಗಗಳ ಮೇಲೆ ಹಲವು ದುಷ್ಪರಿಣಾಮ ಬೀರುತ್ತದೆ.
ಕ್ಷಯ ರೋಗಕ್ಕೆ ಸಮಾರು ನೂರು ವರ್ಷಗಳ ಇತಿಹಾಸವಿದೆ. ಇದು ಸಂಪೂರ್ಣವಾಗಿ ಗುಣಪಡಿಸುಬಹುದಾದ ಕಾಯಿಲೆಯಾಗಿದೆ. ರೋಗಿಯೊಬ್ಬ ಕೆಮ್ಮಿದಾಗ ಕಫದಲ್ಲಿರುವ ರೋಗಾಣುವಿನಿಂದ ಈ ರೋಗ ಹರಡುತ್ತದೆ. ಕಾಯಿಲೆ ಇರುವವರು ಕೆಮ್ಮಿದಾಗ, ಸೀನಿದಾಗ ಅಥವಾ ಉಗುಳಿದಾಗ ತುಂತುರು ಹನಿಗಳ ಮೂಲಕ ಬೇರೊಬ್ಬ ವ್ಯಕ್ತಿಗೆ ರೋಗ ಹರಡಲು ಕಾರಣವಾಗುತ್ತದೆ. ಹೀಗಾಗಿ ಇದು ಗಾಳಿಯ ಮೂಲಕವೂ ಹರಡುತ್ತವೆ.
ಈ ಸೋಂಕು ತಗುಲಿದ ವ್ಯಕ್ತಿಯು ಒಂದು ವರ್ಷದಲ್ಲಿ ಹತ್ತು ಜನರಿಗೆ ಸೋಂಕು ತಗುಲಿಸಬಹುದು. ಇದು ಸಾಮಾನ್ಯವಾಗಿ 15ರಿಂದ 45 ವರ್ಷದೊಳಗಿನವರಿಗೆ ಹೆಚ್ಚಾಗಿ ತಗಲುತ್ತವೆ. ಕ್ಷಯರೋಗದ ಪ್ರಮುಖ ಲಕ್ಷ್ಮಣಗಳು- ಕೆಮ್ಮು, ರಾತ್ರಿಯಲ್ಲಿ ಜ್ವರ, ತೂಕ ಕಡಿಮೆಯಾಗುವುದು, ಅಶಕ್ತತೆ, ಕಫದಲ್ಲಿ ರಕ್ತ, ರಾತ್ರಿಯಲ್ಲಿ ಬೆವರು, ಎದೆನೋವು, ಹಸಿವಾಗದಿರುವುದು. ಎಚ್‌ಐವಿ, ಏಡ್ಸ್ ಮತ್ತು ಮಧುಮೇಹ ರೋಗಿಗಳಿಗೂ ಬೇಗನೇ ಸೋಂಕು ತಗಲುವ ಸಾಧ್ಯತೆ ಹೆಚ್ಚಿವೆ.
ಕ್ಷಯರೋಗ ನಿವಾರಣೆ
[ಬದಲಾಯಿಸಿ]- ಭಾರತವು ಸ್ವಚ್ಛ, ಸ್ವಸ್ಥ ಸಮಾಜದ ನಿರ್ಮಾಣಕ್ಕೆ ನೀಲನಕ್ಷೆ ಹಾಕಿಕೊಂಡಿದೆ. ಪೋಲಿಯೊ ನಿರ್ಮೂಲನೆಯ ನಂತರ ಇದೀಗ ದಢಾರ ಮತ್ತು ರುಬೆಲ್ಲಾ ನಿರ್ಮೂಲನೆಗೆ ರಾಷ್ಟ್ರವ್ಯಾಪಿ ಆಂದೋಲನ ನಡೆದಿದೆ. ಮುಂದಿನ ವರ್ಷದ ಕೊನೆಯೊಳಗೆ ಕುಷ್ಠರೋಗವನ್ನೂ 2020ರ ವೇಳೆಗೆ ದಢಾರವನ್ನೂ; 2025ರೊಳಗೆ ಕ್ಷಯರೋಗವನ್ನೂ ನಿರ್ಮೂಲನ ಮಾಡಿಸುವುದಾಗಿ ಪ್ರಧಾನಿ ಮೋದಿಯವರು ಈ ವರ್ಷದ ಸೈನ್ಸ್ ಕಾಂಗ್ರೆಸ್ ಮೇಳದಲ್ಲಿ ದೇಶಕ್ಕೆ ವಾಗ್ದಾನ ಮಾಡಿದ್ದಾರೆ. ಅದಕ್ಕೆಂದೇ ವಿತ್ತ ಸಚಿವ ಜೇಟ್ಲಿಯವರು ಈ ವರ್ಷದ ಮುಂಗಡ ಪತ್ರದಲ್ಲಿ ಸಾರ್ವಜನಿಕ ಸ್ವಾಸ್ಥ್ಯ ರಕ್ಷಣೆಗೆಂದೇ ಎಂದಿಗಿಂತ ಶೇ 23.5ರಷ್ಟು ಹೆಚ್ಚಿನ ಹಣವನ್ನು ಮೀಸಲಾಗಿಟ್ಟು ಭೇಷ್ ಎನ್ನಿಸಿಕೊಂಡಿದ್ದಾರೆ.
ಪ್ರಾಣಿಗಳಿಂದ ಸೋಂಕು
[ಬದಲಾಯಿಸಿ]- ದನಗಳಿಗೆ ಬರುವ ಕ್ಷಯವೇ ಹಾಲಿನ ಡೇರಿಯ ಕೆಲಸಗಾರರಿಗೆ, ಆ ಮೂಲಕ ಮನೆಯವರಿಗೆ, ಅವರ ಮೂಲಕ ಸಮಾಜದ ಇತರರಿಗೆ ಬರುತ್ತದೆ ಎಂಬುದು ಎಂದೋ ಪ್ರಮಾಣಿತವಾಗಿದೆ. ಮನುಷ್ಯರಿಂದ ಮನುಷ್ಯರಿಗೆ ಕ್ಷಯರೋಗ ಹಬ್ಬದ ಹಾಗೆ ಅದೆಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡರೂ ದನಗಳಿಗೆ ಕ್ಷಯರೋಗ ಬರುತ್ತಿದ್ದರೆ ಆ ಮೂಲಕ ಮತ್ತೆ ಮತ್ತೆ ಅದು ಮನುಷ್ಯರಿಗೂ ಬಂದೇ ಬರುತ್ತದೆ.
ಲಕ್ಷಣ
[ಬದಲಾಯಿಸಿ]- ಕ್ಷಯ (ಟಿ.ಬಿ) ರೋಗದ ಹಿನ್ನೆಲೆ ಇಷ್ಟು: ಅದು ಮೈಕೊಬ್ಯಾಕ್ಟೀರಿಯಂ ಟುಬರ್ಕುಲೊಸಿಸ್ (ಎಮ್‌ಟಿಬಿ) ಎಂಬ ಏಕಾಣು ಜೀವಿಯಿಂದ ಬರುತ್ತದೆ. ಪದೇಪದೇ ಕೆಮ್ಮು, ಕಫದಲ್ಲಿ ಆಗಾಗ ರಕ್ತ, ತೂಕದ ಸತತ ಇಳಿತ, ಆಗಾಗ ಜ್ವರ, ನಿರಂತರ ಅಶಕ್ತತೆ ಇವು ಅದರ ಮುಖ್ಯ ಲಕ್ಷಣಗಳು. ಹೆಚ್ಚಿನ ರೋಗಿಗಳಿಗೆ ಶ್ವಾಸಕೋಶದ ಟಿ.ಬಿ ಇರುತ್ತದೆ. ಅಪರೂಪಕ್ಕೆ ಮೂಳೆ ಟಿ.ಬಿ, ಸ್ನಾಯು ಟಿ.ಬಿ, ಹಾಲ್ರಸನಾಳದ ಟಿ.ಬಿ ಕೂಡ ಬರಬಹುದು. ಎದೆಯ ಎಕ್ಸ್-ರೇ ಮತ್ತು ಕಫದ ಪರೀಕ್ಷೆಯ ಮೂಲಕ ಶ್ವಾಸಕೋಶದ ಟಿ.ಬಿಯನ್ನು ಸುಲಭವಾಗಿ ಪತ್ತೆ ಮಾಡಬಹುದು. ದಿನಕ್ಕೆ ಮೂರು ಬಾರಿಯಂತೆ ಅತ್ಯಂತ ಕಟ್ಟುನಿಟ್ಟಾಗಿ ಆರುತಿಂಗಳ ಕಾಲ ಔಷಧ ಸೇವಿಸಬೇಕು. ಮಧ್ಯೆ ಒಮ್ಮೆ ತಪ್ಪಿದರೆ ಮತ್ತೆ ಆರಂಭದಿಂದ ಮಾತ್ರೆಗಳ ಸೇವನೆ ಮಾಡಬೇಕು.
ನಿರ್ಮೂಲನೆಯ ಸವಾಲು
[ಬದಲಾಯಿಸಿ]- ಆದರೂ ಕ್ಷಯರೋಗ ನಿರ್ಮೂಲನೆಯ ಪ್ರಶ್ನೆ ಬಂದಾಗ ಎನ್‌ಡಿಎ ಸರ್ಕಾರಕ್ಕೆ ಬಹುದೊಡ್ಡ ಸವಾಲು ಎದುರಾಗಲಿದೆ. ದನಗಳ ಮೇಲೆ ಪೂಜನೀಯ ಭಾವ, ಕರುಣೆ, ದಯೆದಾಕ್ಷಿಣ್ಯ ಇದ್ದಷ್ಟು ಕಾಲ ಕ್ಷಯರೋಗ ನಿರ್ಮೂಲನ ಸಾಧ್ಯವಿಲ್ಲ. ಏಕೆಂದರೆ ದನಗಳಿಗೆ ಬರುವ ಕ್ಷಯವೇ ಹಾಲಿನ ಡೇರಿಯ ಕೆಲಸಗಾರರಿಗೆ, ಆ ಮೂಲಕ ಮನೆಯವರಿಗೆ, ಅವರ ಮೂಲಕ ಸಮಾಜದ ಇತರರಿಗೆ ಬರುತ್ತದೆ ಎಂಬುದು ಎಂದೋ ಪ್ರಮಾಣಿತವಾಗಿದೆ.
ಪ್ರತಿ ದಿನ ಸರಾಸರಿ 960 ಜನರ ಸಾವು
[ಬದಲಾಯಿಸಿ]- ನಮ್ಮ ಬಹುತೇಕ ಎಲ್ಲರ ಶರೀರದಲ್ಲೂ ಕ್ಷಯದ ಏಕಾಣುಜೀವಿ ಇರುತ್ತದೆ. ಆದರೆ ರೋಗನಿರೋಧಕ ಶಕ್ತಿ ಗಟ್ಟಿ ಇದ್ದರೆ ಆ ರೋಗಾಣುವಿನ ಸುತ್ತ ಪೊರೆ ಕಟ್ಟಿ ಬಂಧಿತವಾಗಿರುತ್ತದೆ. ಬಂಧ ಗಟ್ಟಿಯಾಗಿದ್ದಷ್ಟು ದಿನ ರೋಗದ ಭಯವಿಲ್ಲ. ಸತತ ಧೂಮಪಾನ, ಏಡ್ಸ್ ಅಥವಾ ಕೆಲವರಿಗೆ ಸಕ್ಕರೆ ಕಾಯಿಲೆ ಇದ್ದರೂ ಬಂಧನ ಸಡಿಲವಾಗಿ ರೋಗ ಶರೀರಕ್ಕೆ ಹರಡುತ್ತದೆ. ಶ್ವಾಸದ ಮೂಲಕ, ದೇಹದ್ರವಗಳ ಮೂಲಕ ಆಸುಪಾಸಿನ ಇತರರಿಗೆ ಹರಡುತ್ತದೆ. ನಮ್ಮಲ್ಲಿ ರೋಗದ ಬಗೆಗಿನ ಅಜ್ಞಾನ, ಔಷಧ ಸೇವನೆಯಲ್ಲಿ ಅಶಿಸ್ತು, ಕಂಡಲ್ಲಿ ಉಗುಳುವ ಅಭ್ಯಾಸ ಈ ಎಲ್ಲ ಕಾರಣದಿಂದಾಗಿ ರೋಗನಿಯಂತ್ರಣ ದುಸ್ತರವಾಗಿದೆ. ಅಂದಾಜಿನ ಪ್ರಕಾರ, ಸುಮಾರು 22 ಲಕ್ಷ ರೋಗಿಗಳು ನಮ್ಮಲ್ಲಿದ್ದು ಪ್ರತಿ ದಿನವೂ ಸರಾಸರಿ 960 ಜನರು (ಪ್ರತಿ ಗಂಟೆಗೆ 90 ಜನ) ಈ ಕಾಯಿಲೆಯಿಂದ ಸಾಯುತ್ತಿದ್ದಾರೆ. ಯಾವ ಔಷಧವೂ ನಾಟದಂಥ ಹೊಸ ಹೊಸ ಕ್ಷಯತಳಿಗಳು ಸೃಷ್ಟಿ ಆಗುತ್ತಿರುವುದರಿಂದ ರೋಗ ನಿಯಂತ್ರಣ ವರ್ಷವರ್ಷಕ್ಕೆ ಕಠಿಣವಾಗುತ್ತ ಹೋಗುತ್ತಿದೆ.
ರೋಗವೇ ಬಾರದಂಥ ತಳಿ
[ಬದಲಾಯಿಸಿ]- ಭಾರತದಲ್ಲಿ ದನಕ್ಷಯದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನಗಳು ಅಷ್ಟೇನೂ ವ್ಯಾಪಕವಾಗಿ ನಡೆಯುತ್ತಿಲ್ಲ. ಇಲ್ಲಿನ ಕೊಳಕು ಡೇರಿಗಳು, ಅಶಿಕ್ಷಿತ ಪಶುವೈದ್ಯ ಸಿಬ್ಬಂದಿ, ಹಸೀ ಹಾಲು ಕುಡಿಯುವ ಪರಿಪಾಠ ಇವೆಲ್ಲ ಕಾರಣಗಳಿಂದ ಮನುಷ್ಯರು ಮತ್ತು ಸಾಕುಪ್ರಾಣಿಗಳ ನಡುವೆ ಕ್ಷಯ ರೋಗಾಣುಗಳ ವಿನಿಮಯ ಸತತವಾಗಿ ನಡೆಯುತ್ತಲೇ ಇರುತ್ತದೆ. ರೋಗಪೀಡಿತ ಹಸುಗಳನ್ನು ಕೊಲ್ಲುವ ಮಾತು ಹಾಗಿರಲಿ, ರೋಗಾಣುಗಳ ಪತ್ತೆಗೆ ಹೋದರೂ ಪ್ರತಿಭಟನೆ ಎದುರಾಗುವ ಸಂಭವ ಇದೆ. ನಾಲ್ಕು ವರ್ಷಗಳ ಹಿಂದೆ ಗುಜರಾತ್‌ನಲ್ಲಿ ಹಸುಗಳ ಕ್ಷಯದ ಬಗ್ಗೆ ನಡೆದ ವಿಚಾರ ಸಂಕಿರಣಕ್ಕೂ ಪ್ರತಿರೋಧ ಬಂದಿತ್ತು. ದನಗಳಿಗೆ ಕ್ಷಯ ಬಾರದಂತೆ ತಡೆಗಟ್ಟಬಲ್ಲ ಲಸಿಕೆಯಂತೂ ಫಲಕಾರಿ ಆಗುತ್ತಿಲ್ಲ. ಇನ್ನುಳಿದ ಕೊನೆಯ ಪ್ರಯತ್ನ ಏನೆಂದರೆ ಹಸುಗಳ ಭ್ರೂಣದ ಹಂತದಲ್ಲೇ ಇತ್ತೀಚಿನ ಕ್ರಿಸ್ಪ್-ಆರ್ ತಂತ್ರವನ್ನು ಪ್ರಯೋಗಿಸಿ ರೋಗವೇ ಬಾರದಂಥ ತಳಿಗಳನ್ನು ಸೃಷ್ಟಿಸಬೇಕು. ಚೀನಾದಲ್ಲಿ ಅಂಥ ಹೊಸ ತಳಿಯ ಕರುಗಳು ಹುಟ್ಟಿವೆ ಎಂಬ ವರದಿಗಳು ಬರುತ್ತಿವೆ. [೧]
ಕ್ಷಯದ ಪರಿಣಾಮ
[ಬದಲಾಯಿಸಿ]ಕ್ಷಯರೋಗದ ಲಕ್ಷ್ಮಣಗಳು ಕಂಡುಬಂದಲ್ಲಿ ತಾತ್ಸಾರ ಮಾಡದೆ ಕೂಡಲೇ ಅರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ರೋಗ ಮತ್ತಷ್ಟು ಮಾರಕವಾಗುವ ಸಾಧ್ಯತೆ ಹೆಚ್ಚಿದೆ. ಸರಿಯಾದ ಚಿಕಿತ್ಸೆ ಪಡೆಯದಿದ್ದರೆ ಶ್ವಾಸಕೋಶ, ಮೆದುಳು, ಬೆನ್ನಮೂಳೆ ಭಾಗಗಳಿಗೆ ಹಾನಿಕಾರಕವಾಗುತ್ತದೆ. ಹಾಗಾಗಿ ರೋಗವನ್ನು ಯಾವುದೇ ಹಂತದಲ್ಲಿಯೂ ಕಡೆಗಣಿಸಬಾರದು.
ಪೌಷ್ಠಿಕ ಆಹಾರ ಕೊರತೆಯಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದ್ದರಿಂದ ರೋಗಾಣುಗಳು ಬೇಗನೇ ದೇಹವನ್ನು ಆಕ್ರಮಿಸುಕೊಳ್ಳುತ್ತವೆ.
ರೋಗದ ಬಗೆಗಳು
[ಬದಲಾಯಿಸಿ]ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ಅಶಕ್ತತೆ, ಕಫದಲ್ಲಿ ರಕ್ತ, ರಾತ್ರಿಯಲ್ಲಿ ಬೆವರು, ಎದೆನೋವು, ಹಸಿವಾಗದಿರುವುದು.
ಕಂಡು ಹಿಡಿಯುವ ವಿಧಾನ
[ಬದಲಾಯಿಸಿ]ಕಫ ಪರೀಕ್ಷೆ, ಎಕ್ಸ್‌ರೇ ಮತ್ತು ರಕ್ತ ಪರೀಕ್ಷೆಯಿಂದಲೂ ರೋಗವನ್ನು ನಿರ್ಧರಿಸಬಹುದಾಗಿದೆ.
ಧಾತು (ವ್ಯಾಕ್ಸಿನೇಷನ್)ಮತ್ತು ಅದರ ಪರಿಣಾಮ
[ಬದಲಾಯಿಸಿ]ರೋಗ ಪರಿಹಾರಕ್ಕಾಗಿ ಔಷಧಿಗಳು
[ಬದಲಾಯಿಸಿ]ರಿಫಾಂಪಿಸಿಸ್, ಇತ್ಯಾಂಬ್ಯುಟಾಲ್ ಮತ್ತು ಇಸೋನಿಯಾಝಡ್ಗಳಂತಹ ಔಷದಿ ಗಳಿಂದ ಈ ರೋಗ ವಾಸಿಯಾಗುತ್ತದೆ. ಈಗ ಡಾಟ್ಸ್ ಚಿಕಿತ್ಸಾ ವಿಧಾನದಲ್ಲಿ ಪರಿಣಾಮಕಾರಿ ಐದು ಔಷಧಿಗಳಿದ್ದು, ಕನಿಷ್ಠ 6 ತಿಂಗಳು ತಪ್ಪದೆ ಸೇವಿಸಬೇಕು.
ಭಾರತದಲ್ಲಿ ಕ್ಷಯ
[ಬದಲಾಯಿಸಿ]- ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿಯಂತೆ 2018ರ ಜನವರಿ 01 ರಿಂದ ಡಿಸೆಂಬರ್ 31ರ ವರೆಗೆ ಒಟ್ಟು 21.32 ರಷ್ಟು ಹೊಸ ಪ್ರಕರಣಗಳು ದೇಶದಾದ್ಯಂತ ವರದಿಯಾಗಿವೆ.
- ಅತಿಹೆಚ್ಚು ಪ್ರಕರಣಗಳು ಕಂಡು ಬಂದ ರಾಜ್ಯಗಳು-
- 01. ಉತ್ತರ ಪ್ರದೇಶ: 4,10,448 ಪ್ರಕರಣಗಳು
- 02. ಮಹಾರಾಷ್ಟ್ರ: 2,04,889 ಪ್ರಕರಣಗಳು
- 03. ರಾಜಸ್ಥಾನ: 1,67,316 ಪ್ರಕರಣಗಳು
- 04. ಮಧ್ಯ ಪ್ರದೇಶ: 1,58,157 ಪ್ರಕರಣಗಳು
- 05. ಗುಜರಾತ್: 1,55,157 ಪ್ರಕರಣಗಳು
- 06. ತಮಿಳುನಾಡು: 1,03,360 ಪ್ರಕರಣಗಳು
- ೦7.ಆಂಧ್ರಪ್ರದೇಶದಲ್ಲಿ 91,157,ಪ್ರಕರಣಗಳು
- 08 .ಕರ್ನಾಟಕ 83,732, ಪ್ರಕರಣಗಳು
- 09 .ತೆಲಂಗಾಣದಲ್ಲಿ 52,395 ಮತ್ತು
- 10 .ಕೇರಳದಲ್ಲಿ 24,535 ಪ್ರಕರಣಗಳು [೨][೩]
ಉಲ್ಲೇಖ
[ಬದಲಾಯಿಸಿ]- ↑ "ನಾಗೇಶ್ ಹೆಗಡೆ;'ಶಂಬೊ' ಹೋರಿಯ ಕ್ಷಯಸಂತಾನಗಳು;9 Feb, 2017". Archived from the original on 2017-02-09. Retrieved 2017-02-09.
- ↑ ಕ್ಷಯರೋಗ: ಉತ್ತರ ಪ್ರದೇಶದಲ್ಲಿ ಒಂದೇ ವರ್ಷ 4.10 ಲಕ್ಷ ಹೊಸ ಪ್ರಕರಣಗಳು18 ಜನವರಿ 2019,
- ↑ "Over 1 lakh new tuberculosis cases reported in Tamil Nadu last year; Last Updated: 18th January 2019". Archived from the original on 2019-02-03. Retrieved 2019-01-18.