ನೀರುನಾಯಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನೀರುನಾಯಿ
ಯುರೋಪಿನ ನೀರುನಾಯಿ
Conservation status
Scientific classification
ಸಾಮ್ರಾಜ್ಯ:
ವಿಭಾಗ:
ವರ್ಗ:
ಗಣ:
ಕುಟುಂಬ:
ಮುಸ್ಟಾಲಿಡೇ
ಕುಲ:
ಲೂಥ್ರಾ
ಪ್ರಜಾತಿ:
ಎಲ್.ಲೂಥ್ರಾ
Binomial name
ಲೂಥ್ರಾ ಲೂಥ್ರಾ
( ಕಾರ್ಲ್ ಲಿನ್ನೇಯಸ್, 1758)
ಚಿತ್ರ:Map=

ನೀರುನಾಯಿ(Lutra lutra)ಭಾರತದಲ್ಲಿ ಕಾಶ್ಮೀರ,ಅಸ್ಸಾಂ ಹಾಗೂ ದಕ್ಷಿಣ ಭಾರತದಲ್ಲಿ ಇದು ವ್ಯಾಪಕವಾಗಿದೆ.ಇದು ನದಿಗಳ ಸಮೀಪ ಬಂಡೆಗಳ ಪೊಟರೆಗಳಲ್ಲಿ ವಾಸಿಸುವುದು.ನೀಳ ದೇಹ,ನೀರಿನಲ್ಲಿ ತೋಯದ ತುಪ್ಪಳದ ಚರ್ಮ,ಚಪ್ಪಟೆಯಾದ ತಲೆ,ಬಲವಾದ ಬಾಲ,ಹುಟ್ಟುಗಳಿಂತಿರುವ ಪಾದಗಳು, ಸ್ಪರ್ಶಸೂಕ್ಷ್ಮ ಮೀಸೆಗೂದಲು ಇವು ನೀರುನಾಯಿಯ ಮುಖ್ಯ ಲಕ್ಷಣಗಳು.ಮುಖ್ಯ ಆಹಾರ ಮೀನು.ಏಡಿ,ಕಪ್ಪೆ,ಬಾತುಕೋಳಿ,ನೀರುಕೋಳಿ ಹಾಗೂ ಕೆಲವೊಮ್ಮೆ ಎಲೆಗಳು ಕೂಡಾ ಇದರ ಆಹಾರವಾಗುವವು.ಗರ್ಭಧಾರಣಾ ಅವದಿ ಸುಮಾರು ೬೦ ದಿನಗಳು.

ಕರ್ನಾಟಕದಲ್ಲಿ ನೀರುನಾಯಿ[ಬದಲಾಯಿಸಿ]

  • ತುಂಗಭದ್ರಾ ನದಿಗುಂಟ ಅಪಾರ ಸಂಖ್ಯೆಯಲ್ಲಿ ಅಪರೂಪದ ‘ನೀರುನಾಯಿ’ಗಳಿವೆ (ಆಟರ್‌).ಕೊಪ್ಪಳ ಜಿಲ್ಲೆಯ ಮುದ್ಲಾಪುರ ಗ್ರಾಮದಿಂದ ಹೊಸಪೇಟೆ ತಾಲ್ಲೂಕಿನ ಹಂಪಿ, ಕಂಪ್ಲಿ ಪಟ್ಟಣದವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೀರುನಾಯಿಗಳನ್ನು ಕಾಣಬಹುದು. ಈ ಭಾಗಗಳ ಮೂಲಕ ತುಂಗಭದ್ರೆ ಹರಿಯುವ ಕಾರಣದಿಂದ ಈ ಪ್ರದೇಶವನ್ನೇ ನೀರುನಾಯಿಗಳು ಆವಾಸ ಸ್ಥಾನ ಮಾಡಿಕೊಂಡಿವೆ. ಸ್ಥಳೀಯ ವನ್ಯಜೀವಿ ಮತ್ತು ಪರಿಸರ ಪ್ರೇಮಿಗಳ ಸತತ ಪ್ರಯತ್ನದಿಂದ 2015ರ ಏಪ್ರಿಲ್‌ನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯು 34 ಕಿ.ಮೀ. ಪ್ರದೇಶವನ್ನು ‘ನೀರು ನಾಯಿ ಸಂರಕ್ಷಿತ ಪ್ರದೇಶ’ ಎಂದು ಘೋಷಿಸಿದೆ.
  • ‘ನದಿಯ ಎರಡೂ ಕಡೆ ಅಪಾರ ಸಂಖ್ಯೆಯಲ್ಲಿ ನೀರುನಾಯಿಗಳಿವೆ. ಆದರೆ, ಅವೈಜ್ಞಾನಿಕವಾಗಿ ನಡೆಯುತ್ತಿರುವ ಮೀನುಗಾರಿಕೆ, ಮರಳುಗಾರಿಕೆಯಿಂದ ಅವುಗಳಿಗೆ ತೊಂದರೆ ಆಗುತ್ತಿದೆ. ತುಂಗಭದ್ರಾ ಕಾಲುವೆಗಳಲ್ಲೂ ನೀರುನಾಯಿಗಳು ಸುರಕ್ಷಿತವಿಲ್ಲ. ಮೀನುಗಾರಿಕೆಯೇ ಇದಕ್ಕೆಲ್ಲ ಕಾರಣ. ಮೀನುಗಾರಿಕೆಗೆ ನಿರ್ದಿಷ್ಟ ಜಾಗ ಗೊತ್ತು ಮಾಡಬೇಕು’ ಎಂದು ವನ್ಯಜೀವಿ ತಜ್ಞ ಸಮದ್‌ ಅಭಿಪ್ರಾಯ.

ನೀರುನಾಯಿಗಳು ಸಂಕಷ್ಟದಲ್ಲಿ[ಬದಲಾಯಿಸಿ]

  • ವಾಟರ್‌ಬಾಂಬ್‌ ಸಿಡಿಸಿ ಮೀನುಗಾರಿಕೆ ಮಾಡುತ್ತಿರುವ ಕಾರಣ ನೀರುನಾಯಿಗಳು ಸಾಯುತ್ತಿವೆ. ಇದಕ್ಕೆ ಕಡಿವಾಣ ಹಾಕಿ ಅವುಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಬೇಕು. ಕೇವಲ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಿದರೆ ಸಾಲದು. ಕಾವಲುಗಾರರು, ವೀಕ್ಷಣಾ ಗೋಪುರ, ದೋಣಿಗಳು ಸೇರಿದಂತೆ ಇತರ ಕೆಲಸಗಳು ಈಗಾಗಲೇ ಆಗಬೇಕಿತ್ತು. ‘ನೀರುನಾಯಿಗಳ ಸಂರಕ್ಷಣೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಸಂಬಂಧಿಸಿದ ಇಲಾಖೆಯ ಮೇಲಧಿಕಾರಿಗಳಿಗೆ ಛಾಯಾಗ್ರಾಹಕರು ಪತ್ರ ಬರೆದಿದ್ದಾರೆ
  • ನೀರುನಾಯಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್‌ ಅವರು ನೀರುನಾಯಿಗಳ ಸಂರಕ್ಷಣೆಗೆ ಸಂಬಂಧಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದೆ. ಸಿಬ್ಬಂದಿ ನೇಮಕ, ವೀಕ್ಷಣಾ ಗೋಪುರ ಸೇರಿದಂತೆ ಇತರ ಕೆಲಸಗಳು ಆಗಬೇಕಿದೆ, ಎನ್ನುತ್ತಾರೆ.[೧]

ನೋಡಿ[ಬದಲಾಯಿಸಿ]

ಉಲ್ಲೇಖ[ಬದಲಾಯಿಸಿ]

  1. "ನೀರುನಾಯಿಗಿಲ್ಲ ರಕ್ಷಣೆ;ಶಶಿಕಾಂತ ಎಸ್‌. ಶೆಂಬಳ್ಳಿ;24 Jan, 2017". Archived from the original on 2017-05-06. Retrieved 2017-01-24.