ಯಾದಗಿರಿ ಜಿಲ್ಲೆ
ಯಾದಗಿರಿ ಜಿಲ್ಲೆ
ಯಾದಗಿರಿ (ಯಾದವಗಿರಿ) | |
---|---|
city | |
Population (2001) | |
• Total | ೫೮,೮೦೨ |
ಯಾದಗಿರಿ ಇತಿಹಾಸ
[ಬದಲಾಯಿಸಿ]ಈ ಹಿಂದೆ ಈ ಪ್ರದೇಶವನ್ನು "ಯಾದವ" ಎಂಬ ರಾಜವಂಶದವರು ಆಳುತ್ತಿದ್ದರಂತೆ . "ಯಾದವರ" ಈ ವಂಶವನ್ನು ಕೆಲವು ಕಡೆ ಯದುವಂಶ ಎಂದು ಕೂಡಾ ಕೆಲವು ಕಡೆ ಉಲ್ಲೆಖಿಸಲಾಗಿದೆ ಎಂಬುವದು ಬಲ್ಲ ಮೂಲಗಳಿಂದ ತಿಳಿಯುತ್ತದೆ. ಯಾದಗಿರಿ, ಕ್ರಿ. ಪೂ ೧೩೪೭ ರಿಂದ ೧೪೨೫ ರ ವರೆಗೆ ಯಾದವರ ರಾಜಧಾನಿಯಾಗಿತ್ತು. ಆಕಾಲದ ಪ್ರಮುಖರಾದ ಸಂತವರು, ಚಾಲುಕ್ಯರು, ರಾಷ್ಟ್ರಕೂಟರು, ಶಾಹಿಗಳು, ಆದಿಲ್ ಶಾಹಿಗಳು, ನಿಜಾಮ್ ಶಾಹಿಗಳು ಯಾದಗಿರಿಯನ್ನ ಆಳಿದ್ದಾರೆ. ಯಾದಗಿರಿಯಲ್ಲಿ ಒಂದು ಭವ್ಯ ವಾದ ಗುಡ್ಡ ಯಾದಗಿರಿಯ ಹೃದಯ ಭಾಗದಲ್ಲಿದೆ ಇದನ್ನು ಬೆಟ್ಟವೆಂತಲು ಕರೆಯಬಹುದಾಗಿದೆ. ಯಾದವರು ಆಳುತ್ತಿದ್ದ ಈ ನಾಡಿಗೆ ಬೆಟ್ಟ ಅಂದರೆ ಗಿರಿ ಸೇರಿರುವದರಿಂದ ಇದನ್ನು ಮುಂದೆ ಯಾದಗಿರಿ ಎಂದು ಕರೆಯಲಾಯಿತು . ಯಾದವನ ಗಿರಿ’, ಯಾದವ ಗಿರಿ’,ಯಾದಗಿರಿ’, ಯಾದ್ಗೀರ್’ ಎಂದು ಸರಳೀಕೃತಗೊಂಡಿದೆ. ಹೀಗೆ ಹಲವು ನಾಮಗಳಿಂದ ಕರೆಯಲಾಗುತ್ತಿದೆ.
ಯಾದಗಿರಿ ನಗರ
[ಬದಲಾಯಿಸಿ]ರಾಜ್ಯದ ೩೦ನೇ ಜಿಲ್ಲೆಯಾಗಿ ಯಾದಗಿರಿ ಡಿಸೆಂಬರ ೩೦ ೨೦೦೯ ರಿಂದ ಅಸ್ತಿತ್ವಕ್ಕೆ ಬಂದಿದೆ . ಶಹಾಪುರ ಮತ್ತು ಸುರಪುರ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆಯಾಗಿದೆ . ಸಂಪುಟ ಸಭೆಯಲ್ಲಿ ಆ. ೨೭ ೨೦೦೮ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಲ್ಬರ್ಗಾ ಜಿಲ್ಲೆ�ಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಂಡು, ಈ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು . ಈ ವಿಚಾರವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿಸೆಂಬರ ೨೩ ೨೦೦೯ ಬುಧವಾರ ವಿಧಾನಸಭೆಯಲ್ಲಿ ಘೋಷಿಸಿದರು.
ಯಾದಗಿರಿ ಜಿಲ್ಲೆ
[ಬದಲಾಯಿಸಿ]ಯಾದಗಿರಿ ಕರ್ನಾಟಕ ರಾಜ್ಯದ ೩೦ನೇ ಜಿಲ್ಲೆ . ಯಾದಗಿರಿ ತಾಲೂಕಿನ ಉತ್ತರದಲ್ಲಿ ಸೇಡಂ, ವಾಯುವ್ಯದಲ್ಲಿ ಚಿತ್ತಾಪುರ, ಪಶ್ಚಿಮದಲ್ಲಿ ಶಹಾಪುರ ಮತ್ತು ಪೂರ್ವದಲ್ಲಿ ಆಂಧ್ರ ಪ್ರದೇಶದ ಮಹಬೂಬನಗರದ ಮಖ್ತಲ್ ತಾಲೂಕುಗಳಿವೆ.
ಶಿಕ್ಷಣ
[ಬದಲಾಯಿಸಿ]ಯಾದಗಿರಿ ಜಿಲ್ಲೆಯಲ್ಲಿ ಒಟ್ಟು ೧,೦೨೪ ಪ್ರಾಥಮಿಕ ಶಾಲೆಗಳು, ೧೪೯ ಪ್ರೌಢ ಶಾಲೆಗಳು, ೪೦ ಪದವಿ ಪೂರ್ವ ಕಾಲೇಜುಗಳು, ಮತ್ತು ೬ ಪದವಿ ಕಾಲೇಜುಗಳಿವೆ. ಇಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಒಟ್ಟು ೧೨೨೩ ಅಂಗನವಾಡಿ ಶಾಖೆಗಳಿವೆ.
ವೈದ್ಯಕೀಯ ಸೌಲಭ್ಯಗಳು
[ಬದಲಾಯಿಸಿ]ಈ ಜಿಲ್ಲೆಯಲ್ಲಿ ೩ ಆಸ್ಪತ್ರೆಗಳು, ೩ ಆಯುರ್ವೇದ ಆಸ್ಪತ್ರೆಗಳು, ೩೭ ಜನಸಾಮಾನ್ಯ ಆರೋಗ್ಯ ಕೇಂದ್ರಗಳು ಮತ್ತು ೧೨೦ ಕುಟುಂಬ ಕಲ್ಯಾಣ ಕೇಂದ್ರಗಳಿವೆ .
ಜಿಲ್ಲೆಯ ರಚನೆ
[ಬದಲಾಯಿಸಿ]ಯಾದಗಿರಿ ಜಿಲ್ಲೆಯೂ ಹಲವು ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿದೆ. ಯಾದಗಿರಿಯಲ್ಲಿ ಹರಿಯುವ ಪ್ರಮುಖ ನದಿಗಳೆಂದರೆ ಕೃಷ್ಣ ಮತ್ತು ಭೀಮ. ಔದ್ಯೋಗಿಕರಣಕ್ಕೆ ಉತ್ತಮ ಅವಕಾಶಗಳಿದ್ದು, ಈಗಾಗಲೇ ಅಲ್ಲಿನ ಹಿರೆತುಮಕೂರು ಹಳ್ಳಿಯ ಹತ್ತಿರ ಸಕ್ಕರೆ ಮತ್ತು ಇಂಧನ ಕಾರ್ಖಾನೆಗಳು ಆರಂಭವಾಗಿವೆ.
ಯಾದಗಿರಿ ಜಿಲ್ಲೆಯ ತಾಲ್ಲೂಕುಗಳು
[ಬದಲಾಯಿಸಿ]ಉಲ್ಲೇಖಗಳು
[ಬದಲಾಯಿಸಿ]- Short description is different from Wikidata
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- Commons category link is on Wikidata
- ವೆಬ್ ಆರ್ಕೈವ್ ಟೆಂಪ್ಲೇಟಿನ ವೇಬ್ಯಾಕ್ ಕೊಂಡಿಗಳು
- ಕರ್ನಾಟಕದ ಜಿಲ್ಲೆಗಳು