ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೧೩
ಗೋಚರ
==[ಡಾ. ವಿಷ್ಣುವರ್ಧನ್]==
ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೨ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.
ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು.
ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರ ಮೊದಲ ಚಿತ್ರ ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು. ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು.
ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನಿತ್ತು ಗೌರವಿಸಿದೆ.
ನಟನೆಯಲ್ಲದೇ,ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿ೦ಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆಗಾಯನವನ್ನೂ ಕೂಡ ಮಾಡಿದ್ದಾರೆ.