ತಂಗಡಗಿ
ತಂಗಡಗಿ
ತಂಗಡಗಿ | |
---|---|
village | |
Population (೨೦೧೨) | |
• Total | ೧೫೦೦ |
ತಂಗಡಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.
ಇತಿಹಾಸ
[ಬದಲಾಯಿಸಿ]ತಂಗಡಗಿಯು ಒಂದು ಐತಿಹಾಸಿಕ ಸ್ಥಳವಾಗಿದೆ. ಮುದ್ದೇಬಿಹಾಳದಿಂದ ೧೮ ಕಿ.ಮೀ. ಅಂತರದಲ್ಲಿ ಕೃಷ್ಣಾ ತಟದಲ್ಲಿದೆ. ಮಹಾತ್ಮ ಬಸವಣ್ಣನವರ ಆಚಾರ ಪತ್ನಿ ನೀಲಾಂಬಿಕೆ ಲಿಂಗೈಕ್ಯ ಹೊಂದಿರುವ ಸ್ಥಳದಲ್ಲಿ ಈ ಸ್ಮಾರಕ ನಿರ್ಮಿಸಲಾಗಿದೆ. ಜೊತೆಗೆ ಮಹಾಶಿವಶರಣ ಹಡಪದ ಅಪ್ಪಣ್ಣನವರ ಸ್ಮಾರಕವೂ ಇಲ್ಲಿದೆ. ಐತಿಹಾಸಿಕ ವಿಜಯನಗರದ ರಕ್ಕಸಗಿ-ತಂಗಡಗಿ (ತಾಳಿಕೋಟೆ) ಯುದ್ಧ ನಡೆದ ಸ್ಥಳ ಇದಾಗಿದೆ.
ಭೌಗೋಳಿಕ
[ಬದಲಾಯಿಸಿ]ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಜನಸಂಖ್ಯೆ
[ಬದಲಾಯಿಸಿ]ಗ್ರಾಮದಲ್ಲಿ ಜನಸಂಖ್ಯೆ ಸುಮಾರು 4000 ಇದೆ. ಅದರಲ್ಲಿ 2100 ಪುರುಷರು ಮತ್ತು 1900 ಮಹಿಳೆಯರು ಇದ್ದಾರೆ.
ಹವಾಮಾನ
[ಬದಲಾಯಿಸಿ]- ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
- ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
- ಚಳಿಗಾಲ ಮತ್ತು
- ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
- ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
- ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
ಸಾಂಸ್ಕೃತಿಕ
[ಬದಲಾಯಿಸಿ]ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಕಲೆ ಮತ್ತು ಸಂಸ್ಕೃತಿ
[ಬದಲಾಯಿಸಿ]ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಧರ್ಮಗಳು
[ಬದಲಾಯಿಸಿ]ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.
ಭಾಷೆಗಳು
[ಬದಲಾಯಿಸಿ]ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.
ದೇವಾಲಯಗಳು
[ಬದಲಾಯಿಸಿ]ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ, ಶ್ರೀ ವೆಂಕಟೇಶ್ವರ ದೇವಾಲಯ,ಶ್ರೀ ಚರಲಿಂಗೇಶ್ವರ ದೇವಾಲಯ ಶ್ರೀ ಹೊಳೆ ಮಾರುತೇಶ್ವರ ದೇವಾಲಯ ಪಾಂಡುರಂಗ ದೇವಾಲಯ ಶ್ರೀ ಲಕ್ಕಮ್ಮ ದೇವಿ ದೇವಾಲಯ ಶರಣ ವೀರೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು
[ಬದಲಾಯಿಸಿ]ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಉದ್ಯೋಗ
[ಬದಲಾಯಿಸಿ]ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಬೆಳೆಗಳು
[ಬದಲಾಯಿಸಿ]ಆಹಾರ ಬೆಳೆಗಳು
[ಬದಲಾಯಿಸಿ]ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
[ಬದಲಾಯಿಸಿ]ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
[ಬದಲಾಯಿಸಿ]ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಶ್ರೀ ಮಾರುತೇಶ್ವರ ಪ್ರಸ್ಥ ಶ್ರೀ ನೀಲಾಂಬಿಕೆ ಜಾತ್ರೆ ಶ್ರೀ ಗುರುಸಂಗಮೇಶ್ವರ ಜಾತ್ರ ಶ್ರೀಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]- ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ತಂಗಡಗಿ
- ಚಾರಲಿಂಗೇಶ್ವರ ಕಿರಿಯ ಪ್ರಾಥಮಿಕ ಶಾಲೆ, ತಂಗಡಗಿ
- ಚಾರಲಿಂಗೇಶ್ವರ ಪ್ರೌಢ ಶಾಲೆ, ತಂಗಡಗಿ
- ಸರಕಾರಿ ಪ್ರೌಢ ಶಾಲೆ, ತಂಗಡಗಿ
- ಜ್ಞಾನ ಭಾರತಿ ಪದವಿ ಪೂರ್ವ ಮಹಾವಿದ್ಯಾಲಯ, ತಂಗಡಗಿ
ಸಾಕ್ಷರತೆ
[ಬದಲಾಯಿಸಿ]ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.
ರಾಜಕೀಯ
[ಬದಲಾಯಿಸಿ]ಗ್ರಾಮವು ವಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.
ಸೇವಾ ಸಂಸ್ಥೆಗಳು
[ಬದಲಾಯಿಸಿ]- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ತಂಗಡಗಿ
- ಗ್ರಾಮ ಪಂಚಾಯತಿ, ತಂಗಡಗಿ
- ದೂರವಾಣಿ ವಿನಿಮಯ ಕೇಂದ್ರ, ತಂಗಡಗಿ
- ಅಂಚೆ ಕಚೇರಿ, ತಂಗಡಗಿ
- ತಂಗಡಗಿ - 586129 (ಆಲೂರ, ಅಮರಗೋಳ, ದೇವೂರ, ಹಂಡರಗಲ್ಲ, ಹುನಕುಂತಿ, ಕಂದಗನೂರ, ಕೋಳೂರ, ಕೋಳೂರ ಎಲ್.ಟಿ, ಕುಂಚಗನೂರ, ಮದರಿ, ನೇಬಗೇರಿ, ರಕ್ಕಸಗಿ, ಸರೂರ, ಟಕ್ಕಲಕಿ, ಯರಗಲ್ಲ).
- ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಂಗಡಗಿ
- ಹಾಲು ಉತ್ಪಾದಕ ಸಹಕಾರಿ ಸಂಘ, ತಂಗಡಗಿ
- ಪ್ರಾಥಮಿಕ ಆರೋಗ್ಯ ಕೇಂದ್ರ, ತಂಗಡಗಿ
- ಪಶು ಚಿಕಿತ್ಸಾಲಯ, ತಂಗಡಗಿ
- 33 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ತಂಗಡಗಿ
- ರಾಜ್ಯ ಹೆದ್ದಾರಿ - 60 => ಸುರಪುರ - ಕೆಂಭಾವಿ - ತಾಳಿಕೋಟ - ಮುದ್ದೇಬಿಹಾಳ - ತಂಗಡಗಿ - ಹುನಗುಂದ.
- ಮೀನುಗಾರಿಕೆ ಸಹಕಾರ ಸಂಘ, ತಂಗಡಗಿ
ಉಲ್ಲೇಖ
[ಬದಲಾಯಿಸಿ]- Pages with non-numeric formatnum arguments
- Short description with empty Wikidata description
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ಮುದ್ದೇಬಿಹಾಳ ತಾಲ್ಲೂಕಿನ ಹಳ್ಳಿಗಳು
- ಬಿಜಾಪುರ ಜಿಲ್ಲೆ