ಯರಗಟ್ಟಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಯರಗಟ್ಟಿ
ಯರಗಟ್ಟಿ
village
Population
 (೨೦೧೧)
 • Total೧೫೦೦೦

ಯರಗಟ್ಟಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ. ಯರಗಟ್ಟಿ ಗ್ರಾಮವು ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನಲ್ಲಿದೆ. ಯರಗಟ್ಟಿ ಗ್ರಾಮವು ಜಿಲ್ಲಾ ಕೇಂದ್ರ ಬೆಳಗಾವಿದಿಂದ ಸುಮಾರು ೬೫ ಕಿ.ಮಿ. ಇದೆ.

ಚರಿತ್ರೆ[ಬದಲಾಯಿಸಿ]

ಗ್ರಾಮದಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಸಿಂಡಿಕೇಟ್ ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ.

ದೇವಾಲಯಗಳು[ಬದಲಾಯಿಸಿ]

ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ಗಣೇಶ ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಕಾಳಿಕಾ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ[ಬದಲಾಯಿಸಿ]

ಗ್ರಾಮದ ಪ್ರತಿಶತ ೭೫ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು[ಬದಲಾಯಿಸಿ]

ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ),ಶ್ರೀ ಗಣೇಶ ಚತುಥಿ೯ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಇವೆ.

ಆರೋಗ್ಯ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ.

ಆರಕ್ಷಕ (ಪೋಲಿಸ್) ಠಾಣೆ[ಬದಲಾಯಿಸಿ]

ಗ್ರಾಮದಲ್ಲಿ ಪೋಲಿಸ್ ಠಾಣೆ ಇದೆ.

"https://kn.wikipedia.org/w/index.php?title=ಯರಗಟ್ಟಿ&oldid=906408" ಇಂದ ಪಡೆಯಲ್ಪಟ್ಟಿದೆ