ಅಕ್ಕನಾಗಮ್ಮ
ಗೋಚರ
ಅಕ್ಕನಾಗಮ್ಮ 12ನೆಯ ಶತಮಾನದ ಕನ್ನಡ ನಾಡಿನ ಶಿವಶರಣೆಯರಲ್ಲಿ ಅಗ್ರಗಣ್ಯಳು. ಬಾಗೇವಾಡಿ ಈಕೆಯ ಜನ್ಮಸ್ಥಳ. ತಂದೆ ಮಾದರಸ, ತಾಯಿ ಮಾದಲಾಂಬಿಕೆ. ಮಗ ಚನ್ನಬಸವೇಶ್ವರ, ಸಹೋದರ ಬಸವೇಶ್ವರ, ಗುರು ಕಪ್ಪಡಿ ಸಂಗಮದ ಜಾತವೇದಸ್ವಾಮಿ. ಮಹಾಯೋಗಿನಿಯಾದ ಈಕೆಯ ಸ್ಮಾರಕಗಳು ಬಿಜಾಪುರ ಜಿಲ್ಲೆಯ ಇಂಗಳೇಶ್ವರ, ಬೀದರ್ ಜಿಲ್ಲೆಯ ಕಲ್ಯಾಣ, ಉತ್ತರಕನ್ನಡ ಜಿಲ್ಲೆಯ ಉಳವಿಯಲ್ಲಿವೆ. ಬಸವೇಶ್ವರರು ಕೈಗೊಂಡ ಎಲ್ಲ ಚಟುವಟಿಕೆಗಳಲ್ಲೂ ಈಕೆ ಬೆಂಬಲಿಗಳಾಗಿದ್ದಳು. ಕರ್ನಾಟಕದ ಶಿವಶಣರು ಈಕೆಯ ಬಗ್ಗೆ ಹೆಚ್ಚಿನ ಭಕ್ತಿಗೌರವಗಳನ್ನು ತಾಳಿದ್ದಾರೆ. ಚೆನ್ನಬಸವಪುರಾಣ, ಪುರಾತನ ದೇವಿಯರ ತ್ರಿಪದಿ, ಬಸವಪುರಾಣ ಈ ಗ್ರಂಥಗಳಲ್ಲಿ ಈಕೆಯ ಹೆಸರು ನಿರೂಪಿತವಾಗಿದೆ.[೧]
ಉಲ್ಲೇಖಗಳು
[ಬದಲಾಯಿಸಿ]