ಅಗ್ಘವಣಿ ಹಂಪಯ್ಯ
ಅಮುಗೆ ರಾಯಮ್ಮ ಸೊನ್ನಲಿಗೆ(ಈಗಿನ ಸೊಲ್ಲಾಪುರ) ಊರಿನವಳು, ನೇಕಾರ ಕುಲದವಳು, ಅಮುಗೆ ದೇವಯ್ಯನ ಧರ್ಮಪತ್ನಿ. ಇವಳ ಮೊದಲ ಹೆಸರು ವರದಾನಿಯಮ್ಮ. ಶರಣೆ ಅಕ್ಕಮ್ಮ ಳಂತೆ ಈಕೆಯೂ ಆಚಾರಶೀಲೆ. ಸಮಾಜದ ಓರೆಕೋರೆಗಳ ಬಗ್ಗೆ ತೀಕ್ಷ್ಣವಾಗಿ ವಿಮರ್ಶಿಸಿದ್ದಾಳೆ. ಹಲವಾರು ವಚನಗಳಲ್ಲಿ ಆತ್ಮನಿರೀಕ್ಷೆಯೂ ಕಂಡುಬರುತ್ತದೆ. ಅಲ್ಲದೆ ಕೆಚ್ಚು, ಧ್ಯೆರ್ಯ,ಛಲ, ನಿಷ್ಟುರತೆ, ಆಧ್ಯಾತ್ಮ ಅಭಿಮಾನ, ವಿಡಂಬನೆ, ವಿರಾಗಿಗಳ ಕಟುಟೀಕೆ ಇತ್ಯಾದಿ ಮೂಡಿ ಬಂದಿವೆ. ಇವಳ ಲಿಂಗನಿಷ್ಠೆ ಗಾಢವಾದುದು. ಈಕೆಯ ಪಾಲಿಗೆ ಗುರು, ಲಿಂಗ, ಪತಿ ಮೂರು ಒಂದೇ. ರಾಯಮ್ಮನ ಅಂಕಿತ "ಅಮುಗೇಶ್ವರ".
'ಎನ್ನ ಕಣ್ಣೊಳಗಿನ ಕಟ್ಟಿಗೆಯ ಮುರಿದವರಾರನೂ ಕಾಣೆ
ಎನ್ನ ಕಾಲೊಳಗಿನ ಮುಳ್ಳ ತೆಗೆದವರಾರನೂ ಕಾಣೆ
ಎನ್ನ ಅಂಗದಲ್ಲಿಪ್ಪ ಅಹಂಕಾರವ ಸುಡುವವರಾರನೂ ಕಾಣೆ
ಎನ್ನ ಮನದಲ್ಲಿಪ್ಪ ಮಾಯ ಪ್ರಪಂಚವ
ಕೆಡಿಸುವರಾರನೂ ಕಾಣೆನಯ್ಯಾ
ಆದ್ಯರ-ವೇದ್ಯರ ವಚನಗಳಿಂದg
ಅರಿದೆವೆಂಬುವರು ಅರಿಯಲಾರರು ನೋಡಾ!
ಎನ್ನ ಕಣ್ಣೊಳಗಿನ ಕಟ್ಟಿಗೆಯ ನಾನೇ ಮುರಿಯಬೇಕು
ಎನ್ನ ಕಾಲೊಳಗಿನ ಮುಳ್ಳ ನಾನೇ ತೆಗೆಯಬೇಕು
ಎನ್ನ ಅಂಗದಲ್ಲಿಪ್ಪ ಅಹಂಕಾರವ ನಾನೇ ಸುಡಬೇಕು
ಎನ್ನ ಮನದಲ್ಲಿಪ್ಪ ಮಾಯ ಪ್ರಪಂಚವ ನಾನೇ ಕಳೆಯಬೇಕು
ಅಮುಗೇಶ್ವರಲಿಂಗವ ನಾನೇ ಅರಿಯಬೇಕು'.