ವಿಷಯಕ್ಕೆ ಹೋಗು

ಅಟ್ಲಾಂಟಿಕ್ ಮಹಾಸಾಗರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಅಟ್ಲಾಂಟಿಕ್ ಇಂದ ಪುನರ್ನಿರ್ದೇಶಿತ)
ಭೂಮಿಯ ಐದು ಮಹಾಸಾಗರಗಳು
Atlantic Ocean
Atlantic Ocean

ಅಟ್ಲಾಂಟಿಕ್ ಮಹಾಸಾಗರ ಭೂಮಿಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ. ಇದರ ಅತ್ಯಂತ ಹೆಚ್ಚಿನ ಆಳ ೮,೩೮೧ ಮೀ.(ಮಿಲ್ವಾಕೀ ಆಳ).