ಅಮೃತಬಳ್ಳಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಅಮೃತಬಳ್ಳಿ
Tinospora cordifolia.jpg
ವೈಜ್ಞಾನಿಕ ವರ್ಗೀಕರಣ
Kingdom: Plantae
Division: Magnoliophyta
Class: Magnoliopsida
Order: Ranunculales
Family: Menispermaceae
Genus: ಟಿನೋಸ್ಪೊರ
Species: T. cordifolia
ದ್ವಿಪದ ಹೆಸರು
ಟಿನೋಸ್ಪೋರ ಕಾರ್ಡಿಫೋಲಿಯ
(Thunb.) Miers

ಅಮೃತಬಳ್ಳಿಯು ಒಂದು ಔಷಧೀಯ ಸಸ್ಯವಾಗಿದೆ[೧]. ಇದು ಮೆನಿಸ್ಪರ್ಮೇಸೀ ಕುಟುಂಬಕ್ಕೆ ಸೇರಿದ ಒಂದು ಹಸುರು ಬಳ್ಳಿ. ಈ ಸಸ್ಯವು ನುಣುಪಾದ ಪೊದೆ ಆಗಿದೆ. ವಿಶಿಷ್ಟವಾಗಿ ಪರ್ಣಪಾತಿ ಹಾಗೂ ಒಣ ಕಾಡುಗಳಲ್ಲಿ ಬೆಳೆಯುತ್ತದೆ. ಎಲೆಗಳು ಹೃದಯಾಕಾರವನ್ನು ಹೊಂದಿರುತ್ತವೆ.

ಇದು ನಮ್ಮ ಮನೆಯಂಗಳದಲ್ಲಿ ಸುಲಭವಾಗಿ ಬೆಳೆಸ ಬಹುದಾದ ಔಷಧೀಯ ಬಳ್ಳಿ. ಇದರ ಕಾಂಡ, ಎಲೆ, ಬೇರು ಎಲ್ಲವೂ ಔಷಧೀಯ ಗುಣ ಹೊಂದಿದೆ. ಇದರ ಕಾಂಡದ ಒಂದು ತುಂಡನ್ನು ಮಣ್ಣಿನಲ್ಲಿ ನೆಟ್ಟರೆ ಬಳ್ಳಿಯ ರೂಪದಲ್ಲಿ ಹಬ್ಬುತ್ತದೆ. ಇದು ಬಾಡಿ ಒಣಗುವುದಿಲ್ಲ; ಸುಲಭದಲ್ಲಿ ಸಾಯುವುದಿಲ್ಲ. ಆದ್ದರಿಂದಲೇ ಇದಕ್ಕೆ ’ಅ- ಮೃತ’ ಎಂಬ ಹೆಸರು. ಬಳ್ಳಿಯನ್ನು ಮನೆಯ ಎದುರು ಚಪ್ಪರದಂತೆ ಹಬ್ಬಿಸಬಹುದು.ಇದರ ತೊಗಟೆಯ ಬಣ್ಣ ಬೂದಿಮಿಶ್ರಿತ ಕಂದು ಬಣ್ಣ. ಹೂಗಳ ಬಣ್ಣ ಹಸಿರು ಮಿಶ್ರಿತ ಹಳದಿ. ಕಾಯಿಯು ಮಾಗಿದಾಗ ಗಾಢ ಕೆಂಪು ಬಣ್ಣದ ದುಂಡಗಿನ ಹಣ್ಣಾಗುತ್ತದೆ

ಇದು ತ್ರಿದೋಷ ಗಳಿಂದ (ಅಂದರೆ ವಾತ, ಪಿತ್ತ, ಕಫ) ಉಂಟಾದ ತೊಂದರೆಗಳನ್ನು ನಿವಾರಿಸುತ್ತದೆ. ಎಲ್ಲ ಬಗೆಯ ಜ್ವರಗಳಿಗೂ ಅಮೃತ ಬಳ್ಳಿ ಪರಿಣಾಮಕಾರಿ ಔಷಧಿ. ಅಮೃತ ಬಳ್ಳಿಯ ಕಾಂಡವನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿಯಂತೆ (ಆಹಾರ ಸೇವನೆಗೆ ಮುಂಚೆ) ಸೇವಿಸಬೇಕು. ಅಮೃತ ಬಳ್ಳಿಯ ಕಾಂಡವನ್ನು ಇತರ ಔಷಧೀಯ ಸಸ್ಯಗಳೊಂದಿಗೆ ಬೆರೆಸಿ ಕಷಾಯ ಮಾಡಿ ಕುಡಿಯಬಹುದು. (ಸಂಬಾರ ಬಳ್ಳಿ, ಅಮೃತ ಬಳ್ಳಿ ಎಲೆ, ಮಜ್ಜಿಗೆ ಸೊಪ್ಪು, ತುಳಸಿ,ಲವಂಗ ತುಳಸಿ, ಅರಸಿನ ಪುಡಿ ,ಕಾಳುಮೆಣಸು,ಜೀರಿಗೆ,ಶುಂಠಿ). ಇದರ ಐದಾರು ಎಲೆಗಳನ್ನು ಪ್ರತಿನಿತ್ಯ ಸೇವಿಸಬಹುದು. ಎಲೆಯು ಸ್ವಲ್ಪ ಕಹಿ ಮತ್ತು ಒಗರಿನಿಂದ ಕೂಡಿದೆ. ಎಲೆ ಮತ್ತು ಕಾಂಡದಿಂದ ತಂಬುಳಿ ತಯಾರಿಸಬಹುದು. ಎಲೆ ಮತ್ತು ಕಾಂಡವನ್ನು ಜೀರಿಗೆಯೊಂದಿಗೆ ನುಣ್ಣಗೆ ಅರಿಯಬೇಕು. ಅದಕ್ಕೆ ಮಜ್ಜಿಗೆ ಸೇರಿಸಿ ಸಾಸಿವೆ ಒಗ್ಗರಣೆ ಕೊಟ್ಟರೆ ತಂಬುಳಿ ತಯಾರು. ಈ ಬಳ್ಳಿಯ ಮೇಲೆ ಬೀಸಿ ಬರುವ ಗಾಳಿಯು ಆರೋಗ್ಯಕ್ಕೆ ಹಿತಕಾರಿ ಮತ್ತು ಮನೆಗೆ ತಂಪು.

ಸಸ್ಯ ವರ್ಣನೆ[ಬದಲಾಯಿಸಿ]

ಅಮೃತ ಬಳ್ಳಿ ಇದರ ವೈಜ್ನಾನಿಕ ಹೆಸರು ಟಿನೋಸ್ಪೊರಾ ಕಾರ್ಡಿಫೋಲಿಯಾ. ಇದನ್ನು ಇಂಡಿಯನ್ ಕ್ವಿನೈನ್ ಎಂದು ಕರೆಯುತ್ತಾರೆ. ಇದು ಮೆನಿಸ್ಪೆರ್ಮೇಸಿಯಾ ಕುಟುಂಬಕ್ಕೆ ಸೇರಿದೆ. ಆಸರೆಯ ಮೇಲೆ ಹಬ್ಬುವ ಈ ಬಳ್ಳಿಯು ಒರಟಾದ, ಬೂದಿಮಿಶ್ರಿತ ಕಂದು ಬಣ್ಣದ ತೊಗಟೆ ಹೊಂದಿದ್ದು, ಕೆಲವು ಬಾರಿ ಹಾಲು ಮಿಶ್ರಿತ ಹಳದಿ ಬಣ್ಣದ ಹೂಗಳಿದ್ದು, ಗಂಡು ಮತ್ತು ಹೆಣ್ಣು ಹೂಗಳು ಬೇರೆ ಬೇರೆ ಗಿಡಗಳಲ್ಲಿ ಬಿಡುತ್ತವೆ. ಕಾಯಿಯು ಮಾಗಿದಾಗ ಗಾಢ ಕೆಂಪು ಬಣ್ಣವನ್ನು ಹೋಲುವ, ಹೊಳಪುಳ್ಳ , ದುಂಡಗಿನ ಹಣ್ನನ್ನು ಕಾಣಬಹುದು.

ಉಪಯುಕ್ತ ಭಾಗಗಳು[ಬದಲಾಯಿಸಿ]

  • ಕಾಂಡ
  • ಎಲೆ
  • ಬೇರು

ಕೊಯ್ಲು ಮತ್ತು ಇಳುವರಿ[ಬದಲಾಯಿಸಿ]

ನಾಟಿ ಮಾಡಿದ ೩-೪ ತಿಂಗಳುಗಳ ನಂತರ ಎಲೆಗಳು ಕೊಯ್ಲಿಗೆ ಬರುತ್ತದೆ. ನಂತರ ಪ್ರತಿತಿಂಗಳಿಗೊಮ್ಮೆ ಬಲಿತ ಎಲೆಗಳನ್ನು ಕೊಯ್ಲು ಮಾಡಿ ಉಪಯೋಗಿಸಬಹುದು. ಪ್ರತಿ ಗಿಡದಿಂದ, ವರ್ಷದಲ್ಲಿ ೧ಕೆ.ಜಿ ಒಣಗಿದ ಎಲೆಗಳನ್ನು ಮತ್ತು ೫೦೦ಗ್ರಾಂ ಕಾಂಡದ ಇಳುವರಿ ದೊರೆಯುತ್ತದೆ.

ಸಸ್ಯ ಹಂಚಿಕೆ[ಬದಲಾಯಿಸಿ]

ಭಾರತ ಮತ್ತು ಶ್ರೀಲಂಕಾದ ಉಷ್ಣ ಪ್ರದೆಶದಲ್ಲಿ ನೈಸರ್ಗಿಕವಾಗಿ ಕಂಡು ಬರುತ್ತದೆ.

ಹವಾಗುಣ ಮತ್ತು ಮಣ್ಣು[ಬದಲಾಯಿಸಿ]

ಇದನ್ನು ಎಲ್ಲಾ ಪ್ರದೇಶದಲ್ಲಿ ಬೆಳೆಸಬಹುದು. ನೀರು ಮತ್ತು ಕೊಟ್ಟಿಗೆ ಗೊಬ್ಬರ ಅವಶ್ಯಕ.

ಔಷಧೀಯ ಗುಣಗಳು[ಬದಲಾಯಿಸಿ]

ಎಲ್ಲಾ ಬಗೆಯ ಜ್ವರಗಳಲ್ಲಿಯೂ ಅಮೃತಬಳ್ಳಿಯು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ[೨]. ಮಧುಮೇಹ ರೋಗಕ್ಕೆ ಔಷಧಿಯಾಗಿ ಬಳಸುತ್ತಾರೆ[೩]. ಅದರ ತಜಾ ಕಾಂಡವನ್ನು ಜಜ್ಜಿ , ಹಿಸುಕಿ ರಸ ತೆಗೆದು ೨ ಚಮಚೆ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕ್ಕೆ ೩ ಬಾರಿ ಆಹಾರ ಸೇವನೆಯ ಮುಂಚೆ ಕುಡಿಯ ಬೇಕು.

ಉಲ್ಲೇಖ[ಬದಲಾಯಿಸಿ]

  1. http://www.ncbi.nlm.nih.gov/pmc/articles/PMC3644751/
  2. http://www.webmd.com/vitamins-supplements/ingredientmono-1157-tinospora%20cordifolia.aspx?activeingredientid=1157&activeingredientname=tinospora%20cordifolia
  3. http://www.webmd.com/diabetes/default.htm

ಬಾಹ್ಯಸಂಪರ್ಕಗಳು[ಬದಲಾಯಿಸಿ]

http://www.ayurvedacollege.com/articles/students/Guduchi Guduchi: The one who protects the body

http://www.ayurvediccommunity.com/AmaraKannada.asp