ಅಯ್ಯಪ್ಪ ದೊರೆ

ವಿಕಿಪೀಡಿಯ ಇಂದ
Jump to navigation Jump to searchಡಾ. ಅಯ್ಯಪ್ಪ ರಾಮಪ್ಪ ದೊರೆಯವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರು ಗ್ರಾಮದವರಾದ ಅವರು ಶಿಕ್ಷಣ ತಜ್ಞರಾಗಿದ್ದಾರೆ. ನಾಲ್ಕು ವರ್ಷಗಳ ಕಾಲ ಬೆಂಗಳೂರಿನ ಅಲಾಯನ್ಸ್ ವಿಶ್ವ ವಿದ್ಯಾಲಯದ ಉಪ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಸಾರ್ವಜನಿಕ ಸೇವೆಗೆ ಧುಮುಕುವ ಇಚ್ಛೆಯಿಂದ ವಿವಿ ಉಪ ಕುಲಪತಿ ಹುದ್ದೆಯನ್ನು ತೊರೆದರು.

ವಿದ್ಯಾಭ್ಯಾಸ[ಬದಲಾಯಿಸಿ]

ಗ್ರಾಮೀಣಾಭಿವೃದ್ಧಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ವಾಣಿಜ್ಯ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವ್ಯವಹಾರ ನಿರ್ವಹಣೆಯಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ.

ಬೆಂಗಳೂರು ವಿಶ್ವ ವಿದ್ಯಾಲಯದ ಕಾರ್ಯದರ್ಶಿ ಮತ್ತು ಸಿಂಡಿಕೇಟ್ ಸದಸ್ಯರಾಗಿ ಕೂಡಾ ಕಾರ್ಯನಿರ್ವಹಿಸಿದ್ದರು. ಎನ್ ಸಿಸಿ ಮತ್ತು ಆರ್ಮಿ ಅಟ್ಯಾಚ್ಮೆಂಟ್ ಟ್ರಕಿಂಗ್ ನಲ್ಲಿ ಚಿನ್ನದ ಪದಕ ಪಡೆದಿದ್ದರು.

ತಮ್ಮ ಸೇವಾವಧಿಯಲ್ಲಿ ಪಡೆದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದ ಮಾದರಿ ವ್ಯಕ್ತಿಯಾಗಿದ್ದಾರೆ.

ಹೋರಾಟ[ಬದಲಾಯಿಸಿ]

ಮಹಾದಾಯಿ ನೀರನ್ನು ಕಳಸಾ ಬಂಡೂರಿ ನಾಲೆ ಮೂಲಕ ಮಲಪ್ರಭೆಗೆ ಹರಿಸಲೇಬೇಕು ಎಂದು ಪಣತೊಟ್ಟು, ರೈತರ ಹೋರಾಟದಲ್ಲಿ ನಿರಂತರವಾಗಿ ಪಾಲ್ಗೊಂಡಿದ್ದಾರೆ. ಇದಲ್ಲದೆ, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಕ್ಕೆ ಕೈಜೋಡಿಸಿದ್ದಾರೆ.

ಶಿವರಾಮ ಕಾರಂತ ಡಿನೋಟಿಫಿಕೇಷನ್ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಎಸಿಬಿಗೆ ದೂರು ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಮೂಲಕ ಭ್ರಷ್ಟಾಚಾರ ವಿರೋಧಿ ಹೋರಾಟ ಮುಂದುವರೆಸಿದ್ದಾರೆ.