ಅಷ್ಟಸಿದ್ಧಿಗಳು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸಿದ್ಧಿಯೆಂದರೆ ಕೆಲಸ ಕೈಗೂಡುವುದು (ಕ್ರಿಯಾಸಿದ್ಧಿ). ಸಾಮಾನ್ಯವಾಗಿ ಈ ಮಾತನ್ನು ಅಲೌಕಿಕವಾಗಿರುವ ಕೌಶಲಗಳನ್ನು ಪಡೆಯುವುದಕ್ಕೆ ಬಳಸುತ್ತಾರೆ. ಸಿದ್ಧಿಯೆಂದರೆ ತುಂಬ ಚಮತ್ಕಾರದ ಅದ್ಭುತಶಕ್ತಿ. ತಪಶ್ಚರ್ಯೆಯಿಂದಲೋ ಮಂತ್ರತಂತ್ರಗಳ ಅನುಸಂಧಾನದಿಂದಲೋ ದೈವಿಕ ಅನುಗ್ರಹದಿಂದಲೋ ಮನುಷ್ಯರು ಪಡೆಯುವ ವಿಶೇಷಸಾಮರ್ಥ್ಯ. ಇದನ್ನು ಎಂಟೆಂದು ಪರಿಗಣಿಸಿದ್ದಾರೆ.  ಹಿಂದೂ ಧರ್ಮದ ಪ್ರಕಾರ ಅಷ್ಟಸಿದ್ಧಿಗಳೆಂದರೆ

  • ಅಣಿಮಾ - ದೇಹವನ್ನು ಅತಿ ಚಿಕ್ಕ (ಪರಮಾಣುವಿನ) ಗಾತ್ರಕ್ಕೆ ಇಳಿಸುವದು
  • ಲಘಿಮಾ - ಅತಿ ಕಡಿಮೆ (ಭಾರರಹಿತ) ಹಗುರಾಗುವದು
  • ಮಹಿಮಾ - ದೇಹವನ್ನು ಅತಿ ದೊಡ್ಡ (ಅನಂತವಾದ) ಗಾತ್ರಕ್ಕೆ ಹೆಚ್ಚಿಸುವದು
  • ಗರಿಮಾ - ಅತಿ (ಅನಂತದಷ್ಟು) ಭಾರವಾಗಿರುವದು
  • ಪ್ರಾಪ್ತಿ - ಎಲ್ಲ ಸ್ಥಳಗಳಿಗೂ ಅನಿರ್ಬಂಧಿತವಾದ ಪ್ರವೇಶ ದೊರಕಿಸಿಕೊಳ್ಳುವದು
  • ಪ್ರಾಕಾಮ್ಯ - ಇಷ್ಟಪಟ್ಟಿದ್ದನ್ನು ದೊರಕಿಸಿಕೊಳ್ಳುವದು
  • ಈಶಿತ್ವ - ಎಲ್ಲದರ ಮೇಲೆ ಸಂಪೂರ್ಣವಾದ ಒಡೆತನ ಹೊಂದುವದು
  • ವಶಿತ್ವ - ಎಲ್ಲವನ್ನು ಜಯಿಸುವ ಶಕ್ತಿ ಹೊಂದುವದು

ಯೋಗಮಾರ್ಗದಲ್ಲಿ ಹಠಯೋಗವನ್ನು ಹಿಡಿದವರು ಈ ಸಿದ್ಧಿಗಳನ್ನು ಪಡೆಯುತ್ತಾರೆಂದು ನಂಬಿಕೆ. ಹನುಮಾನ್ ಚಾಲೀಸ ಪಠಿಸುವವರು ಈ ಅಷ್ಟಸಿದ್ಧಿಗಳನ್ನು ಹನುಮಂತ ನೀಡುವನೆಂದು ನಂಬುತ್ತಾರೆ.