ಆಂಗ್‌ಕರ್ ವಾಟ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ದೇವಾಲಯದ ಪೂರ್ವಭಾಗದ ದೃಶ್ಯ.
೧೮೬೬ರಲ್ಲಿ ತೆಗೆದ ಒಂದು ಛಾಯಚಿತ್ರ by Emile Gsell

'ಆಂಗ್‌ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ.ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್‌ಕರ್' ಎಂಬಲ್ಲಿದೆ.ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮನು ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ. ಮರಳುಕಲ್ಲು ಹಾಗೂ ಮುರಕಲ್ಲು ಉಪಯೋಗಿಸಿ ಕಟ್ಟಲಾಗಿದೆ.ಮೇರುಪರ್ವತ ವನ್ನು ಹೋಲುವಂತೆ ಖ್ಮೇರ್ ಹಾಗೂ ದಕ್ಷಿಣ ಭಾರತೀಯ ವಾಸ್ತುಶಿಲ್ಪದಂತೆ ಇದನ್ನು ಕಟ್ಟಲಾಗಿದೆ.ಇದರ ನಿರ್ಮಾಣಕ್ಕೆ ೩೦ ವರ್ಷಗಳಿಗಿಂತಲೂ ಹೆಚ್ಚಿನ ಸಮಯ ಬೇಕಾಯಿತು.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]