ವಿಷಯಕ್ಕೆ ಹೋಗು

ಆರ್ಯಭಟ (ಉಪಗ್ರಹ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಆರ್ಯಭಟ ಉಪಗ್ರಹ

ಆರ್ಯಭಟ ಭಾರತದ ಮೊಟ್ಟಮೊದಲ ಕೃತಕ ಉಪಗ್ರಹದ ಹೆಸರು. ಪ್ರಾಚೀನ ಭಾರತೀಯ ಗಣಿತಜ್ಞ ಆರ್ಯಭಟನ ಗೌರವಾರ್ಥವಾಗಿ ಈ ಹೆಸರನ್ನು ಇದಕ್ಕೆ ಇಡಲಾಯಿತು. ಇದನ್ನು ಭಾರತದ ಇಸ್ರೋ ಸಂಸ್ಥೆಯು ಬೆಂಗಳೂರಿನಲ್ಲಿರುವ ತನ್ನ ಉಪಗ್ರಹ ಕೇಂದ್ರದಲ್ಲಿ ನಿರ್ಮಿಸಿತು. ಈ ಉಪಗ್ರಹವು ತನ್ನ ಅಕ್ಷದಲ್ಲಿ ಗಿರಕಿ ಹೊಡೆದು ತನ್ನ ಸ್ಥಿರತೆಯನ್ನು ಕಾಯ್ದುಕೊಳ್ಳುವ ತೆರನಾಗಿತ್ತು. ಏಪ್ರಿಲ್ ೨೧, ೧೯೭೫ ರಲ್ಲಿ ರಷ್ಯದ ಸಹಾಯದಿ೦ದ ರಷ್ಯದ ಕಪುಟ್ಸಿನ್ ಯಾರ್ ಎ೦ಬ ಉಡ್ಡಯನ ಕೇ೦ದ್ರದಿ೦ದ ಈ ಉಪಗ್ರಹವನ್ನು ಕಕ್ಷೆಗೆ ಒಯ್ಯಲಾಯಿತು. ಉಪಗ್ರಹ ೨೬ ಮುಖಗಳನ್ನು ಹೊ೦ದಿದ್ದು, ಸುಮಾರು ೧.೪ ಮೀ ವ್ಯಾಸವನ್ನು ಹೊ೦ದಿತ್ತು. ೨೪ ಮುಖಗಳ ಮೇಲೆ ಸೌರಚಾಲಿತ ವಿದ್ಯುತ್ ಕೋಶಗಳನ್ನು (ಬ್ಯಾಟರಿಗಳನ್ನು) ಅಳವಡಿಸಲಾಗಿತ್ತು. ಆರ್ಯಭಟ ಉಪಗ್ರಹದ ಮುಖ್ಯ ಉದ್ದೇಶಗಳು ಹೀಗಿದ್ದವು:

  • ಎಕ್ಸ್-ರೇ ಖಗೋಳಶಾಸ್ತ್ರದ ಅಧ್ಯಯನ
  • ಸೌರಭೌತಶಾಸ್ತ್ರದ (solar physics) ಅಧ್ಯಯನ

ಆದರೆ ಕಕ್ಷೆಯಲ್ಲಿ ಬಿಟ್ಟು ನಾಲ್ಕೇ ದಿನಗಳಲ್ಲಿ ಆರ್ಯಭಟ ಉಪಗ್ರಹದಲ್ಲಿ ವಿದ್ಯುಚ್ಛಕ್ತಿ ವೈಫಲ್ಯ ಉ೦ಟಾಗಿ ಐದನೇ ದಿನ ಭೂಮಿಯಿ೦ದ ಉಪಗ್ರಹಕ್ಕೆ ಇದ್ದ ಸ೦ಪರ್ಕ ಕಡಿದುಹೋಯಿತು. ಫೆಬ್ರವರಿ ೧೧, ೧೯೯೨ ರಂದು ಉಪಗ್ರಹವನ್ನು ಅದರ ಕಕ್ಷೆಯಿ೦ದ ಭೂಮಿಯ ವಾತಾವರಣಕ್ಕೆ ಕುಸಿಯಿತು.