ವಿಷಯಕ್ಕೆ ಹೋಗು

ಆಷಾಢಮಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಆಷಾಢ ಮಾಸ ಇಂದ ಪುನರ್ನಿರ್ದೇಶಿತ)

ಚೈತ್ರದಿಂದ ಆರಂಭವಾಗುವ ಹನ್ನೆರಡು ಚಾಂದ್ರಮಾನ ತಿಂಗಳುಗಳ ಪೈಕಿ ಐದನೆಯದು. ಇದರಲ್ಲಿ ಸಂಭವಿಸುವ ಹುಣ್ಣಿಮೆಯೊಡನೆ ಪೂರ್ವಾಷಾಢಾ ಅಥವಾ ಉತ್ತರಾಷಾಢಾ ನಕ್ಷತ್ರ ಕೂಡುವುದರಿಂದ ಈ ಹೆಸರು ಬಂದಿದೆ. ಸೂರ್ಯ ಮಿಥುನರಾಶಿಯಲ್ಲಿರುವಾಗ ಆಷಾಢ ಪ್ರಾರಂಭವಾಗಿ ಕರ್ಕಾಟಕರಾಶಿಯಲ್ಲಿರುವಾಗ ಮುಗಿಯುತ್ತದೆ.

ಹಲವು ವರ್ಷಗಳಿಗೊಮ್ಮೆ ಸೂರ್ಯ ಮಿಥುನರಾಶಿಯಲ್ಲಿರುವಾಗಲೇ ಮಾಸಮಧ್ಯದಲ್ಲಿ ಸೂರ್ಯಸಂಕ್ರಮಣವಿಲ್ಲದ ಚಾಂದ್ರಮಾಸ ಬರುತ್ತದೆ. ಆ ತಿಂಗಳಿಗೆ ಅಧಿಕಾಷಾಢವೆಂದು ಹೆಸರು. ಇದು ಚೈತ್ರಾದಿ ಮಾಸಗಣನೆಯಲ್ಲಿ ಐದನೆಯದಾಗುತ್ತದೆ. ಮುಂದಿನ ತಿಂಗಳೇ ನಿಜವಾದ ಆಷಾಢ.

ಅಧಿಕಾಷಾಢದಲ್ಲಿ ನಿತ್ಯವಿಧಿಗಳನ್ನು ಬಿಟ್ಟು ಯಾವ ವಿಶೇಷ ಕಾರ್ಯಗಳನ್ನೂ ಮಾಡಕೂಡದು. ವಿಶೇಷವಾಗಿ ಈ ಮಾಸಕ್ಕೆಂದೇ ವಿಹಿತವಾದ ವ್ರತಾದಿಗಳನ್ನು ನಿಜಾಷಾಢ ಮಾಸದಲ್ಲೇ ಮಾಡಬೇಕು. ಆಷಾಢದಲ್ಲಿ ಕರ್ಕಾಟಕರಾಶಿಯಲ್ಲಿ ಸೂರ್ಯನಿರುವ ಕಾಲವನ್ನು ಶೂನ್ಯಮಾಸವೆಂದು ಪರಿಗಣಿಸುತ್ತಾರೆ. ಈ ತಿಂಗಳಿನ [[ಶುಕ್ಲಪಕ್ಷದ ಏಕಾದಶಿಯಂದು ದಕ್ಷಿಣಾಯನ ಪ್ರಾರಂಭದ ಕುರುಹಾಗಿ ದೇವಾಲಯಗಳಲ್ಲಿ ಭಗವಂತನಿಗೆ ಡೋಲೋತ್ಸವ ನಡೆಯುತ್ತದೆ. ಅಂದಿನಿಂದ ಚಾತುರ್ಮಾಸ್ಯವ್ರತ ಪ್ರಾರಂಭ. ನವ ವಿವಾಹಿತೆ ಆಷಾಢದಲ್ಲಿ ಪತಿಯ ಗೃಹದಲ್ಲಿರದೆ ತವರು ಮನೆಯಲ್ಲಿರುತ್ತಾರೆ. ಈ ತಿಂಗಳಿನಲ್ಲಿ ಅತ್ತೆ ಸೊಸೆಯರು ಒಂದೆಡೆ ಇರಕೂಡದೆಂಬುದೇ ಇದಕ್ಕೆ ಕಾರಣ. ಇದು ಕೆಲವರಲ್ಲಿ ಮಾತ್ರ ಆಚರಣೆಯಲ್ಲಿದೆ. ಆಷಾಢ ಮಾಸದ ಎಲ್ಲ ಶುಕ್ರವಾರಗಳಲ್ಲೂ ವಿಶೇಷ ಪೂಜೆಯುಂಟು.

ಈ ಮಾಸದ ಪ್ರಮುಖ ಹಬ್ಬಗಳು

[ಬದಲಾಯಿಸಿ]


ಚಾಂದ್ರಮಾನ ಮಾಸಗಳು
ಚೈತ್ರವೈಶಾಖಜ್ಯೇಷ್ಠಆಷಾಢಶ್ರಾವಣಭಾದ್ರಪದಆಶ್ವಯುಜಕಾರ್ತಿಕಮಾರ್ಗಶಿರಪುಷ್ಯಮಾಘಫಾಲ್ಗುಣ
"https://kn.wikipedia.org/w/index.php?title=ಆಷಾಢಮಾಸ&oldid=836574" ಇಂದ ಪಡೆಯಲ್ಪಟ್ಟಿದೆ