ಇಕ್ಕೇರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಇಕ್ಕೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿದೆ. ಇದು ಸಾಗರ ಪಟ್ಟಣದಿಂದ ಆರು ಕಿಲೋಮೀಟರ್ ದೂರದಲ್ಲಿದೆ. ಇಲ್ಲಿನ ಅಘೋರೇಶ್ವರ ದೇವಸ್ಥಾನ ತುಂಬಾ ಪ್ರಸಿದ್ಧವಾಗಿದೆ.

ಅಘೋರೇಶ್ವರ ದೇವಸ್ಥಾನ[ಬದಲಾಯಿಸಿ]

ಅಘೋರೇಶ್ವರ ದೇವಸ್ಥಾನ

ಅಘೋರೇಶ್ವರ ದೇವಸ್ಥಾನವು ಹೊಯ್ಸಳ-ಕದಂಬ ಶೈಲಿಯಲ್ಲಿದೆ.ಉತ್ತರ-ದಕ್ಷಿಣ ದಿಕ್ಕಿನಲ್ಲಿರುವ ಈ ದೇಗುಲವು ಗರ್ಭಗೃಹ, ಅರ್ಧಮಂಟಪ, ಮುಖಮುಂಟಪ ಮತ್ತು ಎದುರಿಗೆ ನಂದಿಗೆ ಪ್ರತ್ಯೇಕ ಮಂಟಪವನ್ನು ಹೊಂದಿದೆ.ಗರ್ಭಗೃಹದಲ್ಲಿ ಕಲ್ಲಿನ ಶಿವಲಿಂಗವಿದೆ. ಈ ದೇವಾಲಯದಲ್ಲಿ ೩೨ ಕೈಗಳ ಅಘೋರೇಶ್ವರನ ಉತ್ಸವ ಮೂರ್ತಿಯಿದೆ. ಅರ್ಧಮಂಟಪದಲ್ಲಿ ಬಿಳಿ ಕಲ್ಲಿನಿಂದ (ಅಮೃತ ಕಲ್ಲಿನಿಂದ) ಕೆತ್ತಿದ ಸಣ್ಣ ನಂದಿಯಿದೆ. ಅರ್ಧಮಂಟಪದ ದ್ವಾರದಲ್ಲಿ ಎರಡೂ ಬದಿಯಲ್ಲಿ ಅಘೋರೇಶ್ವರನ ಪರಿವಾರದ ಕೆತ್ತನೆಗಳಿವೆ. ಎಡಭಾಗದಲ್ಲಿ ಮಹಿಷಮರ್ದಿನಿ, ಭೈರವನ ಕೆತ್ತನೆಗಳಿದ್ದರೆ ಬಲಭಾಗದಲ್ಲಿ ಗಣಪತಿ, ಷಣ್ಮುಖನ ಕೆತ್ತನೆಗಳಿವೆ. ಎದುರಿನ ಮುಖಮಂಟಪ ಕೆತ್ತನೆಯಿರುವ ಕಂಬಗಳ ಆಧಾರದ ಮೆಲೆ ನಿಂತಿದೆ. ದೇಗುಲವು ದ್ರಾವಿಡ ಶೈಲಿಯ ಕಳಸವನ್ನು ಹೊಂದಿದೆ. ದೇಗುಲದ ಪಶ್ಚಿಮದಲ್ಲಿ ಇದೇ ಶೈಲಿಯ ಆದರೆ ಸ್ವಲ್ಪ ಸಣ್ಣದಾದ ಅಖಿಲಾಂಡೇಶ್ವರಿಯ ದೇಗುಲವಿದೆ. ದೇವಸ್ಥಾನದ ಎದುರು ಕಲ್ಲಿನ ಬೃಹತ್ ಬಸವನ ವಿಗ್ರಹವಿದ್ದು, ಅದರ ಒಂದು ಕಾಲಿನ ಕೆಳಭಾಗದಲ್ಲಿ ಚಿಕ್ಕ ಮಕ್ಕಳು ನುಸುಳುವಷ್ಟು ಜಾಗವಿದ್ದು, ಅದರಲ್ಲಿ ನುಸುಳಿದರೆ ಇಷ್ಟಾರ್ಥ ಪ್ರಾಪ್ತವಾಗುತ್ತದೆ ಎಂಬ ಪ್ರತೀತಿಯಿದೆ. ದೇವಸ್ಥಾನದ ಹೊರ ಆವರಣವು ಹಚ್ಚ ಹಸುರಿನ ಹುಲ್ಲು ಹಾಸಿನಿಂದ ಕಂಗೊಳಿಸುತ್ತದೆ.

ನಂದಿ ಮಂಟಪ

ಇಲ್ಲಿನ ದೇವಸ್ಥಾನದಲ್ಲಿ ಒಂದು ಗೆರೆಯಿಂದ ಬೇರ್ಪಟ್ಟಿರುವ ಎರಡು ಹಲ್ಲಿಗಳನ್ನು ಕೆತ್ತಲಾಗಿದ್ದು ಆ ಹಲ್ಲಿಗಳು ಗೆರೆಯನ್ನು ದಾಟಿ ಮುಂದೆ ಬಂದು ಒಂದಕ್ಕೊಂದು ಮುಟ್ಟಿದಾಗ ಪ್ರಳಯವಾಗುತ್ತದೆ ಎಂಬ ಐತಿಹ್ಯವಿದೆ[೧]

ಇನ್ನಷ್ಟು ಚಿತ್ರಗಳು[ಬದಲಾಯಿಸಿ]

ಉಲ್ಲೇಖಗಳು[ಬದಲಾಯಿಸಿ]

"https://kn.wikipedia.org/w/index.php?title=ಇಕ್ಕೇರಿ&oldid=609409" ಇಂದ ಪಡೆಯಲ್ಪಟ್ಟಿದೆ