ಈಶ್ವರ ಸಣಕಲ್ಲ
ಗೋಚರ
ಈ ಲೇಖನದ ವಿಷಯ ವಿಕಿಪೀಡಿಯ ಸಾಮಾನ್ಯ ಗಮನಾರ್ಹತೆ ಮಾರ್ಗದರ್ಶಿ ಹೊಂದಿಲ್ಲ. ವಿಷಯದ ಬಗ್ಗೆ ವಿಶ್ವಾಸಾರ್ಹ, ಮಾಧ್ಯಮಿಕ ಮೂಲಗಳನ್ನು ಸೇರಿಸುವ ಮೂಲಕ ಗಮನವನ್ನು ಸ್ಥಾಪಿಸಲು ದಯವಿಟ್ಟು ಸಹಾಯ ಮಾಡಿ. ಮಹತ್ವವನ್ನು ಸ್ಥಾಪಿಸಲಾಗದಿದ್ದರೆ, ಲೇಖನವನ್ನು ವಿಲೀನಗೊಳಿಸಬಹುದು, ಮರುನಿರ್ದೇಶಿಸಲಾಗುತ್ತದೆ, ಅಥವಾ ಅಳಿಸಬಹುದು. general notability guideline. |
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಈಶ್ವರ ಸಣಕಲ್ಲ ಇವರು ೧೯೦೬ ಡಿಸೆಂಬರ ೨೦ರಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಯಾದವಾಡದಲ್ಲಿ ಜನಿಸಿದರು. ತಾಯಿ ನೀಲಾಂಬಿಕೆ ; ತಂದೆ ಮಹಾರುದ್ರಪ್ಪ. ಬಾಲ್ಯದಲ್ಲೇ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಂಡು ಅನುಭವಕ್ಕೆ ಅಭಿವ್ಯಕ್ತಿಯ ರೂಪುಕೊಟ್ಟರು. ಅಧ್ಯಾಪಕರಾಗಿ, ಸಂಶೋಧನಾ ಸಹಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸುಮಾರು ೨೦ ಕೃತಿಗಳನ್ನು ರಚಿಸಿದ್ದಾರೆ. ಮುಂಬಯಿಯಿಂದ ಹೊರಡುತ್ತಿದ್ದ “ಸಹಕಾರ” ಪತ್ರಿಕೆಯ ಸಂಪಾದಕರಾಗಿದ್ದರು. ಇವರ ಕೆಲವು ಕೃತಿಗಳು:
- ಕೋರಿಕೆ (ಕವನ ಸಂಕಲನ)
- ಹುಲ್ಕಲ್ಗೆಕಿಡಿ(ಕವನ ಸಂಕಲನ)
- ಬಟ್ಟೆ (ಕಥಾ ಸಂಕಲನ)
- ಸಂಸಾರ ಸಮರ (ಕಾದಂಬರಿ)
- ಗ್ರಾಮೋದ್ದಾರ (ಅನುವಾದಿತ ಕೃತಿ)
ಇವರ ಬಟ್ಟೆ ಕಥಾಸಂಕಲನಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಲಭಿಸಿದೆ. ಇವರು ೧೯೮೦ ರಲ್ಲಿ ಬೆಳಗಾವಿಯಲ್ಲಿ ನಡೆದ ೫೨ ನೆಯ ಅಖಿಲ ಭಾರತ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷರಾಗಿದ್ದರು. ಈಶ್ವರ ಸಣಕಲ್ಲರ ಉದಾತ್ತ ಆದರ್ಶವು ಅವರ ಕವನವೊಂದರಲ್ಲಿ ಬರುವ ಈ ಸಾಲುಗಳಿಂದ ವ್ಯಕ್ತವಾಗುತ್ತದೆ: “ ಜಗವೆಲ್ಲ ನಗುತಿರುಲಿ ; ಜಗದಳವು ನನಗಿರಲಿ ” ಈಶ್ವರ ಸಣಕಲ್ಲರು ೧೯೮೪ ಡಿಸೆಂಬರ ೩ರಂದು ತೀರಿಕೊಂಡರು.