ಎ
|
ಎ ಕನ್ನಡ ವರ್ಣಮಾಲೆಯ ಎಂಟನೇ ಅಕ್ಷರವಾಗಿದೆ.ಇದು ಒಂದು ಸ್ವರಾಕ್ಷರ.
ಚಾರಿತ್ರಿಕ ಹಿನ್ನೆಲೆ
[ಬದಲಾಯಿಸಿ]ಕನ್ನಡ ವರ್ಣಮಾಲೆಯ ಒಂಬತ್ತನೆಯ ಅಕ್ಷರ. ಹ್ರಸ್ವ ಸ್ವರ. ಸಂಸ್ಕøತದಲ್ಲಿ ಹ್ರಸ್ವ ಎಕಾರವಿಲ್ಲವಾಗಿ ಬ್ರಾಹ್ಮೀ ಲಿಪಿಯ ಲೇಖಗಳಲ್ಲಿ ಈ ಅಕ್ಷರದ ರೂಪ ದೊರೆಯದು. ಕನ್ನಡದಲ್ಲಿ ಈ ಲಿಪಿ ಮತ್ತು ಉಚ್ಛಾರಣೆ ಬಳಕೆಯಲ್ಲಿದ್ದರೂ ಪ್ರಾಚೀನ ಕನ್ನಡದ ಶಾಸನಗಳಲ್ಲಿ ಎ ಕಾರಕ್ಕೆ ಬದಲು ಏ ಕಾರವನ್ನೇ ಬಳಸಲಾಗಿದೆ. ಬಹುಶಃ ಇದು ಸಂಸ್ಕøತ ಪ್ರಭಾವದಿಂದ ಆಗಿರಬಹುದು. ಬರವಣಿಗೆಯಲ್ಲಿ ಒಂದೇ ಅಕ್ಷರ ಕಂಡುಬಂದರೂ ಸಂದರ್ಭಕ್ಕೆ ತಕ್ಕಂತೆ ಹ್ರಸ್ವವಾಗಿಯೊ ದೀರ್ಘವಾಗಿಯೊ ಉಚ್ಛರಿಸುವ ವಾಡಿಕೆ ಇತ್ತು. ಲಿಪಿಯ ದೃಷ್ಟಿಯಿಂದ ಈ ಅಕ್ಷರದ ಹ್ರಸ್ವ ಮತ್ತು ದೀರ್ಘ ರೂಪಗಳಿಗಿರುವ ವ್ಯತ್ಯಾಸ ಯಾವಾಗ ರೂಢಿಗೆ ಬಂತು ಎಂದು ಹೇಳುವುದು ಕಷ್ಟ. ಕ್ರಿ.ಶ.15ನೆಯ ಶತಮಾನದ ವಿಜಯನಗರ ಕಾಲದಲ್ಲಿ ವ್ಯಂಜನಾಕ್ಷರಗಳೊಂದಿಗಿನ ಎ ವರ್ಣದ ರೂಪ ಹೇಗಿತ್ತೆಂಬುದನ್ನು ಚಿತ್ರದಲ್ಲಿ ತೋರಿಸಿದೆ.[೧]
ಶಾಸ್ತ್ರೀಯ ವಿವರ
[ಬದಲಾಯಿಸಿ]ಈ ಅಕ್ಷರ ಪೂರ್ವ ಅಗೋಲ ಅರ್ಧ ಸಂವೃತ ಹ್ರಸ್ವಸ್ವರವನ್ನು ಸೂಚಿಸುತ್ತದೆ.
ಸ್ವರಾಕ್ಷರಗಳು ಎಂದರೇನು ?
[ಬದಲಾಯಿಸಿ]- ಸ್ವಯಂ ರಂಜತೇ ಇತಿಃ ಸ್ವರಃ - ಸ್ವತಂತ್ರವಾಗಿ ಉಚ್ಚರಿಸಲು ಬರುವ ಅಕ್ಷರಗಳೇ ಸ್ವರಗಳು.[೨]
- ಅಕಾರಂ ಮೊದಲಾಗಿರೆ ಪದಿನಾಲ್ಕು ಸ್ವರಂಗಳ್.
ಸಂಸ್ಕೃತದಲ್ಲಿ (ದೇವನಾಗರಿ) ಸ್ವರಾಕ್ಷರಗಳು ‘ಅ’ ಕಾರ ದಿಂದ ‘ಔ’ ಕಾರದವರೆಗೆ ೧೪ ಇವೆ. ಅವುಗಳೆಂದರೆ,
ಹೃಸ್ವಸ್ವರ
[ಬದಲಾಯಿಸಿ]ಒಂದು ಮಾತ್ರೆಗಳ ಕಾಲಾವಧಿಯಲ್ಲಿ ಉಚ್ಚರಿಸಬಹುದಾದ ಅಕ್ಷರಗಳು ೫ - ಅ, ಇ, ಉ, ಋ, ೡ. ಎ, ಒ - ಈ ಅಕ್ಷರಗಳನ್ನು ಲಘು(ವ್ಯಾಕರಣ) ಎಂದು ಕರೆಯುತ್ತಾರೆ. ಇವುಗಳಲ್ಲಿ ಎ ಅಕ್ಷರವೂ ಒಂದಾಗಿದೆ.
ಕನ್ನಡದ ನಾವಿ ಸ್ವರಗಳು
[ಬದಲಾಯಿಸಿ]ಈ ನಾಮಿ ಸ್ವರಗಳನ್ನು ಸವರ್ಣಗಳೆಂದು ಕರೆಯುತ್ತಾರೆ.
'ಎ ಅಕ್ಷರವನ್ನು ಉಚ್ಛರಿಸುವ ವಿಧಾನ
[ಬದಲಾಯಿಸಿ]
- ಪ್ರಾಣಿ ಸಂಬಂಧಿ ಪದ : ಎಮ್ಮೆ
- ಮನುಷ್ಯ ಸಂಬಂಧಿ ಪದ : ಎಲ್ಲಪ್ಪ
- ಸಸ್ಯ ಸಂಬಂಧಿ ಪದ : ಎಲೆ
ಎ ಅಕ್ಷರದಿಂದ ಆರಂಭವಾಗುವ ಸಂಖ್ಯಾವಚಿ ಪದಗಳು
[ಬದಲಾಯಿಸಿ]- ಎಂಟು, ಎಂಬತ್ತು, ಎಪ್ಪತ್ತು
ಉಲ್ಲೇಖ
[ಬದಲಾಯಿಸಿ]
ಹೃಸ್ವಸ್ವರ | ದೀರ್ಘಸ್ವರ |
---|---|
ಅ | ಆ |
ಇ | ಈ |
ಉ | ಊ |
ಎ | ಏ |
ಒ | ಓ |