ಎಂ. ಎಚ್. ಕೃಷ್ಣಯ್ಯ
ಎಂ. ಎಚ್. ಕೃಷ್ಣಯ್ಯ | |
---|---|
ಜನನ | ಜುಲೈ ೨೧, ೧೯೩೭ ಮೈಸೂರು |
ವೃತ್ತಿ | ಸಾಹಿತಿ, ಕರ್ನಾಟಕ ಅಕಾಡೆಮಿ ಅಧ್ಯಕ್ಷರು, ನಿವೃತ್ತ ಪ್ರಾಧ್ಯಾಪಕರು |
ವಿಷಯ | ಕನ್ನಡ ಸಾಹಿತ್ಯ |
ಪ್ರೊ. ಎಂ. ಎಚ್. ಕೃಷ್ಣಯ್ಯ (ಜುಲೈ ೨೧, ೧೯೩೭) ಪ್ರಸಿದ್ಧ ಸಾಹಿತ್ಯ ಮತ್ತು ಕಲಾ ವಿಮರ್ಶಕರಾಗಿ, ಕಲಾ ಪೋಷಕರಾಗಿ, ಕನ್ನಡ ಸಾಹಿತ್ಯ ಅಕಾಡೆಮಿ ಒಳಗೊಂಡಂತೆ ಹಲವಾರು ಸಂಸ್ಥೆಗಳ ಕಾರ್ಯನಿರ್ವಾಹಕರಾಗಿ ಮಹತ್ವದ ಸೇವೆ ಸಲ್ಲಿಸಿದವರಾಗಿದ್ದಾರೆ.
ಜೀವನ
[ಬದಲಾಯಿಸಿ]ಪ್ರಸಿದ್ಧ ಸಾಹಿತ್ಯ ವಿಮರ್ಶಕ ಮತ್ತು ಕಲಾಪ್ರೇಮಿಗಳಾದ ಪ್ರೊ. ಎಂ. ಎಚ್. ಕೃಷ್ಣಯ್ಯನವರು ಜುಲೈ 21, 1937ರ ವರ್ಷದಲ್ಲಿ ಮೈಸೂರಿನಲ್ಲಿ ಜನಿಸಿದರು. . ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮನವರು. ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ[೧].
ಬರಹಗಳು
[ಬದಲಾಯಿಸಿ]ಕೃಷ್ಣಯ್ಯನವರು ಬರಹಗಾರರು, ಸಂಗೀತಗಾರರು, ಶಿಲ್ಪಿಗಳು, ಕಲಾವಿದರೊಂದಿಗೆ ಬೆರೆತು ಅವರ ಬದುಕನ್ನು ಅರಿತು, ಅವನ್ನು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿರುವುದು ಅವರ ಮಹತ್ವದ ಕೊಡುಗೆಗಳೆನಿಸಿವೆ. ಪ್ರಸಿದ್ಧ ವಿದ್ವಾಂಸರೂ, ಶಿಸ್ತಿನ ಪ್ರವಚನಕಾರರೂ ಆದ ಕೃಷ್ಣಯ್ಯನವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ, ಆರ್. ಎಮ್. ಹಡಪದ್, ರೂಪಶಿಲ್ಪಿ ಬಸವಯ್ಯ, ಶ್ರಂಗಾರ ಲಹರಿ, ಕಲಾ ದರ್ಶನ, ರಂಗಭೂಮಿ ಮತ್ತು ಸೌಂದರ್ಯ ಪ್ರಜ್ಞೆ ಮುಂತಾದ ಬರಹಗಳು ಹಾಗೂ ಕುವೆಂಪು ಸಾಹಿತ್ಯ : ಚಿತ್ರ ಸಂಪುಟದಂತಹ ಸಂಪಾದನೆಗಳು ಈ ಕೃತಿಗಳಲ್ಲಿ ಸೇರಿವೆ. ಅವರ 'ಕಲಾ ದರ್ಶನ' ಕೃತಿ ಕನ್ನಡ ನಾಡಿನಲ್ಲಿ ಗೌರವಾನ್ವಿತ ಸಂಪುಟವೆನಿಸಿವೆ.
ಕಾರ್ಯನಿರ್ವಹಣೆ
[ಬದಲಾಯಿಸಿ]ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಕನ್ನಡ ಪುಸ್ತಕ ಪ್ರಾಧಿಕಾರ, ತಂಜಾವೂರಿನಲ್ಲಿ ಕೇಂದ್ರ ಹೊಂದಿರುವ ದಕ್ಷಿಣ ಭಾಗೀಯ ಸಾಂಸ್ಕೃತಿಕ ಕೇಂದ್ರ ಮುಂತಾದೆಡೆಗಳಲ್ಲಿ ಅವರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ ಒಳಗೊಂಡಂತೆ ಹಲವು ರೀತಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಪ್ರೊ. ಕೃಷ್ಣಯ್ಯನವರು ತಮ್ಮ ಕಾರ್ಯದಕ್ಷತೆ, ಸರಳ, ಸಜ್ಜನಿಕೆಗಳಿಗೆ ಹೆಸರಾಗಿದ್ದಾರೆ.
ಪ್ರಶಸ್ತಿ ಗೌರವಗಳು
[ಬದಲಾಯಿಸಿ]ಕೃಷ್ಣಯ್ಯನವರ ಶೃಂಗಾರ ಲಹರಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಮಾಸ್ತಿ ಪ್ರಶಸ್ತಿ ಅವರಿಗೆ ಸಂದ ಮತ್ತೊಂದು ವಿಶಿಷ್ಟ ಹಿರಿಮೆ[೨] .
ಉಲ್ಲೇಖಗಳು
[ಬದಲಾಯಿಸಿ]- ↑ "ಪ್ರೊ. ಎಂ.ಎಚ್. ಕೃಷ್ಣಯ್ಯ". kanaja.in. Archived from the original on 2016-03-06. Retrieved 8-2-2014.
{{cite web}}
: Check date values in:|accessdate=
(help) - ↑ "ಎಂ. ಎಚ್. ಕೃಷ್ಣಯ್ಯ". sallapa.com. Retrieved 8-2-2014.
{{cite web}}
: Check date values in:|accessdate=
(help)