ಕನ್ಯಾಕುಮಾರಿ
Jump to navigation
Jump to search
ಕನ್ಯಾಕುಮಾರಿ ದಕ್ಷಿಣ ಭಾರತದಲ್ಲಿ ಮುಖ್ಯ ಭೂಮಿಯ ತುತ್ತ ತುದಿಯಲ್ಲಿರುವ ಊರು. 'ಕನ್ಯಾಕುಮಾರಿ' ಎಂಬ ಹೆಸರು ಪೌರಾಣಿಕ ಕಥೆಯಿಂದ ಬಂದದ್ದು. ಇದಕ್ಕೆ ಕೇಪ್ ಕೊಮೆರಿನ್ ಎಂಬ ಹೆಸರೂ ಇದ್ದಿತು.ಕೇಪ್ ಕಾಮೊರಿನ್ ಎಂದೇ ಹೆಸರುವಾಸಿಯಾದ ಕನ್ಯಾಕುಮಾರಿ ಭಾರತದ ತಮಿಳುನಾಡಿನಲ್ಲಿದೆ. ಭಾರತದ ದಕ್ಷಿಣದ ತುತ್ತ ತುದಿಯಲ್ಲಿ ಕನ್ಯಾಕುಮಾರಿ ಇದೆ. ಕನ್ಯಾಕುಮಾರಿಯು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರಬ್ಭಿ ಸಮುದ್ರ ಸೇರುವ ಸ್ಥಳದಲ್ಲಿ ಇದೆ. ಇದರ ವಾಯುವ್ಯ ಮತ್ತು ಪಶ್ಚಿಮ ಭಾಗದಲ್ಲಿ ಕೇರಳ ರಾಜ್ಯವಿದ್ದು, ತಿರುನೆಲ್ವೇಲಿ ಜಿಲ್ಲೆಯು ಇದರ ಉತ್ತರ ಮತ್ತು ಪೂರ್ವ ಭಾಗದಲ್ಲಿ ಬರುತ್ತದೆ. ಕೇರಳದ ರಾಜಧಾನಿ ತಿರುವನಂತಪುರಮ್ ಕನ್ಯಾಕುಮಾರಿಯಿಂದ 85 ಕಿ.ಮೀ ದೂರದಲ್ಲಿದೆ. ಕನ್ಯಕುಮಾರಿಯು ಹುಣ್ಣಿಮೆಯ ದಿನ ಕಣ್ಣು ಕೋರೈಸುವ ಸೂರ್ಯೋದಯ ಮತ್ತು ಸೂರ್ಯಾಸ್ತಕ್ಕೆ ಹೆಸರುವಾಸಿಯಾಗಿದೆ.
ಕನ್ಯಾಕುಮಾರಿ ಭಾರತದ ಪ್ರಸಿದ್ಧ ಯಾತ್ರಸ್ಥಳ. ಪತ್ಮಾಭಪುರಮ್ ಅರಮನೆ