ಕಾಂಕ್ರೇಜ್ (ಗೋವಿನ ತಳಿ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕಾಂಕ್ರೇಜ್
Kankrej 02.JPG
ತಳಿಯ ಹೆಸರುಕಾಂಕ್ರೇಜ್
ಮೂಲಗುಜರಾತ್‍ನ ಕಛ್ ಹಾಗು ರಾಜಸ್ಥಾನದ ಜೋಧಪುರ ಪ್ರಾಂತ್ಯ
ವಿಭಾಗಉಭಯೋದ್ದೇಶ ತಳಿ

ಗುಜರಾತ್ನ ಕಛ್ ಹಾಗು ರಾಜಸ್ಥಾನಜೋಧಪುರ ಪ್ರಾಂತ್ಯ ಇವುಗಳ ತವರೂರು. ಭಾರತದ ಮೂಲ ತಳಿಗಳಲ್ಲಿ ಕಾಂಕ್ರೇಜ್ ಕೂಡ ಒಂದು. ಶಿಲಾಯುಗದ ಕೆತ್ತನೆಗಳಲ್ಲಿ, ಹರಪ್ಪ ಶಿಲ್ಪಗಳಲ್ಲಿ ಕಾಣಸಿಗುವ ಗೋವಿನ ಚಿತ್ರ ಕಾಂಕ್ರೇಜ್‍ನದೇ ಎಂಬುದಕ್ಕೆ ಅಧಾರಗಳಿವೆ. ಈ ತಳಿಯ ಗೋವುಗಳನ್ನು ಕೆಲಸಗಾರ ತಳಿಯಾಗಿಯೂ ಹಾಲಿನ ತಳಿಯಾಗಿಯೂ (ಉಭಯ) ಬಳಸಬಹುದೆನ್ನುತ್ತಾರೆ.

ಕಾಂಕ್ರೇಜ್ ತಳಿಯ ಗೋವುಗಳು ಬೃಹದಾಕಾರವಾದರೂ ಅತ್ಯಂತ ಶಾಂತ ಸ್ವಭಾವದವು. ಸಾಮಾನ್ಯವಾಗಿ ಬೂದು, ಅಪರೂಪಕ್ಕೆ ನಸುಕಪ್ಪು ಬಣ್ಣದ ಇವುಗಳು ಉಬ್ಬಿದಂತಿರುವ ಸಣ್ಣ ಮೂಗು, ನೀಳವಾದ ನೇತಾಡುವ ಕಿವಿ, ಗಟ್ಟಿಯಾದ ನಿಡಿದಾದ ಕೊಂಬನ್ನು ಹೊಂದಿರುತ್ತವೆ. ಹೋರಿಗಳು ಭುಜ, ತೊಡೆ ಮತ್ತು ಕಾಲುಗಳಲ್ಲಿ ಕಪ್ಪು ಬಣ್ಣ ಹೊಂದಿರುವುದು ವಿಶೇಷ.

ಚಿತ್ರಗಳು[ಬದಲಾಯಿಸಿ]

ಆಧಾರ/ಆಕರ[ಬದಲಾಯಿಸಿ]

'ಗೋವಿಶ್ವಲೋಕ' ಜಾಲತಾಣದ 'ಗೋವಿಶ್ವ' ಇ-ಪತ್ರಿಕೆ Archived 2018-11-24 ವೇಬ್ಯಾಕ್ ಮೆಷಿನ್ ನಲ್ಲಿ.