ಕುಮಟಾ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕುಮಟಾ
India-locator-map-blank.svg
Red pog.svg
ಕುಮಟಾ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಉತ್ತರ ಕನ್ನಡ
ನಿರ್ದೇಶಾಂಕಗಳು 14.4167° N 74.4° E
ವಿಸ್ತಾರ
 - ಎತ್ತರ
14.86 km²
 - 2 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
27598
 - 1857.2/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 581 343
 - +91-8386
 - KA 47
ಕುಮಟಾ ಸಮುದ್ರ ದಂಡೆ

ಕುಮಟಾ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಕರಾವಳಿಯ ಪಟ್ಟಣವಾಗಿದ್ದು ಕಾರವಾರದಿಂದ ೬೦ ಕಿ.ಮಿ ದೂರದಲ್ಲಿ ಮತ್ತು ಹೊನ್ನಾವರದಿಂದ ಸುಮಾರು ೨೦ ಕಿ.ಮಿ ದೂರದಲ್ಲಿದೆ. ಪ್ರಕೃತಿ ಸೊಬಗಿಗೆ ಹೆಸರುವಾಸಿಯಾಗಿದ್ದು ವನ್ನಲ್ಲಿ, ಕಾಗಲ ಮತ್ತು ಧಾರೇಶ್ವರ ಬೀಚ್‍ಗಳು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತವೆ. ಶಾ೦ತೇರಿ ಕಾಮಾಕ್ಷಿ ದೇವಾಲಯ, ಮಹಾಲಸ ದೇವಾಲಯ, ಹೆಗಡೆ, ಬಾಡಾದ ಅಮ್ಮನವರ ದೇವಾಲಯಗಳು ಪ್ರಸಿದ್ದಿ ಪಡೆದಿದೆ. ಧಾರೇಶ್ವರದ ಧಾರಾನಾಥ ದೇವಾಲಯ ಕುಮಟಾದಿ೦ದ ೮ ಕಿ.ಮೀ ದೂರದಲ್ಲಿದ್ದು ಇಲ್ಲಿ ಶಿವನ ದೇವಾಲಯ ಗೋಕರ್ಣದ ಆತ್ಮಲಿ೦ಗದ ಒಂದು ಭಾಗ ಎಂದು ಹೇಳಲಾಗುತ್ತದೆ. ಪಾ೦ಡವರು ಒ೦ದೇ ರಾತ್ರಿಯಲ್ಲಿ ಕಟ್ಟಿದ ದೇವಾಲಯಗಳಲ್ಲಿ ಇದು ಒಂದು.

ಇತಿಹಾಸ[ಬದಲಾಯಿಸಿ]

ಕುಮಟಾದ ಹಳೆಯ ಹೆಸರು ಕುಂಭಾಪುರ.. ಬ್ರಿಟಿಷರ ಕಾಲದಲ್ಲಿ ಕುಮಟಾ ಪಟ್ಟಣವು ಮುಂಬೈ ಪ್ರಾಂತ್ಯದ ಅಡಿಯಲ್ಲಿ ಬರುತ್ತಿದ್ದು ಉತ್ತರ ಕನ್ನಡದ ಒಂದು ಭಾಗವಾಗಿತ್ತು. ಇಲ್ಲಿ ವಿಶೇಷವಾಗಿ ಹತ್ತಿ, ಗಂಧದ ಕೆತ್ತನೆ ಕೆಲಸ ಪ್ರಮುಖವಾಗಿದ್ದು ವ್ಯಾಪಾರ ವಹಿವಾಟಿನಲ್ಲೂ ಹೆಸರುವಾಸಿಯಾಗಿತ್ತು. ಸ್ವಾತಂತ್ರ್ಯ ಪೂರ್ವದಲ್ಲಿ ಇಲ್ಲಿ೦ದ ಇಂಗ್ಲೆಂಡಿಗೆ ಸರಬರಾಜಾಗುತ್ತಿದ್ದ ಹತ್ತಿಯು ’ಕುಮಟಾ ಹತ್ತಿ’ಯೆಂದೇ ಪ್ರಸಿದ್ಧವಾಗಿತ್ತು.

ಜನಸಂಖ್ಯಾ ಅಂಕಿ-ಅಂಶಗಳು[ಬದಲಾಯಿಸಿ]

2001 ರ ಅಂಕಿ ಅಂಶದ ಪ್ರಕಾರ ಕುಮಟಾ ಪಟ್ಟಣದ ಜನಸಂಖ್ಯೆಯು 27598 ಆಗಿರುತ್ತದೆ. ಇದರಲ್ಲಿ 51ಶೇ ಪುರಷರು 49 ಶೇ ಮಹಿಳೆಯರು ಇದ್ದು, ಸಾಕ್ಷರತೆ ಪ್ರಮಾಣ ಶೇ. 77 ರಷ್ಠು ಇದೆ.

ವಾಣಿಜ್ಯ[ಬದಲಾಯಿಸಿ]

ಇಲ್ಲಿನ ಪ್ರಮುಖ ಬೆಳೆ ಭತ್ತ, ತೆಂಗು ಮತ್ತು ಅಡಿಕೆಯಾಗಿದ್ದು ಇದರ ಜೊತೆ ಗೇರು, ವೀಳ್ಯದೆಲೆ, ತರಕಾರಿಗಳು ಪ್ರಮುಖ ವಾಣಿಜ್ಯ ಬೆಳೆಯಾಗಿವೆ. ವನ್ನಳ್ಳಿ ಮತ್ತು ಅಳ್ವೇಕೋಡಿ ಗ್ರಾಮಗಳಲ್ಲಿ ಬೆಳೆಯಲಾಗುವ ವಿಶಿಷ್ಟವಾದ ಸಿಹಿ ಈರುಳ್ಳಿಯನ್ನು ಕರ್ನಾಟಕದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ.

ಶಿಕ್ಷಣ[ಬದಲಾಯಿಸಿ]

ಕುಮಟಾ ಪಟ್ಟಣವು ಉತ್ತರ ಕನ್ನಡ ಜಿಲ್ಲೆಯ ಶೈಕ್ಷಣಿಕ ಕೆಂದ್ರ ಸ್ಥಾನವಾಗಿದ್ದು ಇಲ್ಲಿ ನೂರು ವರುಷದ ಇತಿಹಾಸವುಳ್ಳ ಗಿಬ್ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಡಾ|| ಎ.ವಿ.ಬಾಳಿಗಾ ಕಾಲೇಜು, ಬಿಬಿಎ ಕಾಲೇಜು ಡಿ.ಇಡ್. ಕಾಲೇಜು, ಬಿ.ಇಡ್. ಕಾಲೇಜು, ಡಿಪ್ಲೋಮಾ ಕಾಲೇಜು ಹಾಗೂ ಎರಡು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ.

ಪ್ರೇಕ್ಷಣೀಯ ಸ್ಥಳಗಳು[ಬದಲಾಯಿಸಿ]

ಸುಂದರವಾದ ಸಮುದ್ರ ತೀರಗಳಿಂದ, ಪುರಾಣ ಪ್ರಸಿಧ್ಧ ದೇವಾಲಯಗಳು, ಮನಮೋಹಕ ಜಲಪಾತಗಳು, ಹಸಿರು ಪರ್ವತಗಳಿಂದ ಕೂಡಿರುವ ಕುಮಟಾ ಪ್ರವಾಸಿಗರ ಉತ್ತಮ ಆಯ್ಕೆ. ಬೃಹದಾಕಾರದ ಶಿಲಾರೂಪಗಳಿರುವ ಯಾಣ, ಶಿವನ ಆತ್ಮಲಿಂಗವಿರುವ ಸ್ಥಳ ಗೋಕರ್ಣ, ಮಿರ್ಜಾನ್ ಕೋಟೆಗಳು ಕುಮಟಾದ ಪ್ರಮುಖ ಆಕರ್ಷಣೆಗಳು.

ಶಿವನ ಆತ್ಮಲಿಂಗವಿರುವ ಗೋಕರ್ಣದ ಮಹಾಬಲೇಶ್ವರ ದೇವಾಲಯ ಸುಮಾರು ೩೦ ಕಿ.ಮಿ ದೂರದಲ್ಲಿದೆ.

ರಾಣಿ ಚೆನ್ನಭೈರಾದೇವಿ ನಿರ್ಮಿಸಿದ ಮಿರ್ಜಾನ್ ಕೋಟೆ ಸುಮಾರು ೧೨ ಕಿ.ಮಿ ದೂರದಲ್ಲಿದೆ.

ಭಸ್ಮಾಸುರನನ್ನು ವಿಷ್ಣು ಕೊಂದ ಸ್ಥಳವಾದ ಯಾಣ ೨೦ ಕಿಮೀ ದೂರದಲ್ಲಿದೆ.

ಆತ್ಮಲಿಂಗದ ಒಂದು ಚೂರು ಬಿದ್ದ ಸ್ಥಳವಾದ ಧಾರೇಶ್ವರ ೧೦ ಕಿ.ಮೀ ದೂರದಲ್ಲಿದೆ.

ಇವಿಷ್ಟೇ ಅಲ್ಲದೇ ಬಾಡದ ಕಾಂಚಿಕಾ ಪರಮೇಶ್ವರಿ ದೇವಾಲಯ, ಹೆಗಡೆಯ ಶಾಂತಿಕಾ ಪರಮೇಶ್ವರಿ ದೇವಾಲಯ, ಬೆಟ್ಟದ ತುದಿಯಲ್ಲಿರುವ ಗೋರೆ, ಅಘನಾಶಿನಿ ನದಿಯ ಸಂಗಮ ಸ್ಥಳವಾದ ತದಡಿ, ಹೆಡ್‌ಬಂದರ್ ಸಮುದ್ರತೀರಗಳು ಕುಮಟಾದ ಸುತ್ತಮುತ್ತಲಿನ ಪ್ರಸಿದ್ಧ ಆಕರ್ಷಣೆಗಳು.

Karnataka-icon.jpg
ಉತ್ತರ ಕನ್ನಡ ತಾಲ್ಲೂಕುಗಳು
ಅಂಕೋಲಾ | ಕಾರವಾರ | ಕುಮಟಾ | ಜೋಯ್ಡಾ | ಭಟ್ಕಳ | ಮುಂಡಗೋಡು | ಯಲ್ಲಾಪುರ | ಶಿರಸಿ | ಸಿದ್ದಾಪುರ | ಹಳಿಯಾಳ | ಹೊನ್ನಾವರ
"https://kn.wikipedia.org/w/index.php?title=ಕುಮಟಾ&oldid=602007" ಇಂದ ಪಡೆಯಲ್ಪಟ್ಟಿದೆ