ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣ

ವಿಕಿಪೀಡಿಯ ಇಂದ
Jump to navigation Jump to search
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣ ರಾತ್ರಿ ನೋಟ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದಾಗಿ ವಿಶ್ವದ ವಿಮಾನ ಸಾರಿಗೆ ಸಾಗಾಣಿಕೆಯ ನಕ್ಷೆಯಲ್ಲಿ ಮೂಡಿಬಂದಿದೆ. ೨೦೦೮ ರ ಮೇ ೨೩ ರಂದು ಕರ್ನಾಟಕ ರಾಜ್ಯದ ಪ್ರಪ್ರಥಮ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಉದ್ಘಾಟನೆಯಾಯಿತು. ಬೆಂಗಳೂರು ನಗರದಿಂದ ಸುಮಾರು ೩೨ ಕಿ. ಮೀ ದೂರದಲ್ಲಿರುವ ಈ ಸಾರಿಗೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ರಸ್ತೆಗಳು ಸರಿಯಾಗಿವೆ. 'ಎಕ್ಸ್ಪ್ರೆಸ್ ವೇ' ಮತ್ತು 'ಹೈಸ್ಪೀಡ್ ರೈಲ್ವೆ' ಲೈನಿನ ಯೋಜನೆಯ' ನೀಲನಕ್ಷೆ' ತಯಾರಾಗಿದೆ. ಟ್ಯಾಕ್ಸಿ ಸೇವೆ, ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿ.ಎಮ್.ಟಿ.ಸಿ)ಯ ಹವಾನಿಯಂತ್ರಿತ ಬಸ್ ಗಳು ಪ್ರತಿ ೧೫ ನಿಮಿಷಕ್ಕೆ ಒಂದರಂತೆ ಸಂಚಾರಕ್ಕೆ ವ್ಯವಸ್ಥೆಮಾಡಲಾಗಿದೆ. ಬೆಂಗಳೂರಿನ ಯಾವ ಮೂಲೆಯಿಂದಲಾದರೂ ಹೊರಟು ವಿಮಾನ ನಿಲ್ದಾಣವನ್ನು ಸುಮಾರು ಒಂದರಿಂದ ಒಂದೂವರೆ ಗಂಟೆಗಳಲ್ಲಿ ತಲುಪುವ ವ್ಯವಸ್ಥೆ ಗಮನಾರ್ಹವಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ಸಂಸ್ಥೆ (ಬಿ.ಐ.ಎ.ಎಲ್)ಸಹಾಯವಾಣಿ'ಯ ಸೌಲಭ್ಯವಿದೆ. ವಿಮಾನನಿಲ್ದಾಣಕ್ಕೆ ಸಂಪರ್ಕಮಾರ್ಗ, ಸಾರಿಗೆ ಸೌಲಬ್ಯಗಳ ವಿವರಗಳು, ಮತ್ತು ಸಾಮಾನ್ಯ ಮಾಹಿತಿಗಳನ್ನು ದೂರವಾಣಿಯ ಮೂಲಕ ಕೂಡಲೆ ಪಡೆಯಬಹುದು. ಸಹಾಯವಾಣಿ ಸಂಖ್ಯೆ : ೪೦೫೮೧೧೧೧. ವಿಮಾನವೇರುವ ಮೊದಲು ನಡೆಸುವ 'ಭದ್ರತಾ ತಪಾಸಣೆಯ ವಿಧಿ' ಯಲ್ಲಿ ಪ್ರಯಾಣಿಕರು 'ಹಲವು ಕ್ಯೂ' ಗಳಲ್ಲಿ ಕಾದು ಮುಂದುವರೆಯುವ ಬದಲು, 'ಒಂದೇ ಹಂತದ ತಪಾಸಣಾ ವ್ಯವಸ್ಥೆ' ಯನ್ನು ನಿರೂಪಿಸಲಾಗಿದೆ. ೫೩ 'ಚೆಕ್-ಇನ್ ಕೌಂಟರ್'ಗಳು, ಹಾಗೂ ೧೮ 'ಸ್ವಯಂ ತಪಾಸಣಾಯಂತ್ರ' ಗಳನ್ನು ಸ್ಥಾಪಿಸಲಾಗಿದೆ. ಮಕ್ಕಳ ಉಪಚಾರ ಹಾಗೂ ಆರೋಗ್ಯ-ಸೇವೆಗೆ (ಔಷಧಾಲಯ, ಡಯಾಪರ್ ಬದಲಾವಣೆ, ಹಾಲುಕುಡಿಸುವಿಕೆ ಇತ್ಯಾದಿಗಳಿಗೆ) ಪ್ರತ್ಯೇಕ ಜಾಗವಿದೆ.

ಇದರಿಂದಾಗಿ ಬೆಂಗಳೂರು ಭಾರತದ ಇತರೆ ಭಾಗಗಳಿಗೆ ಮತ್ತು ಜಗತ್ತಿನಾದ್ಯಂತ ಸಂಪರ್ಕ ಹೊಂದುವಂತಾಗಿದೆ. 2008 ರಲ್ಲಿ ಉದ್ಘಾಟನೆಗೊಂಡ ಈ ನಿಲ್ದಾಣವು ಜರ್ಮನ್ ಕಂಪನಿಯಾದ ಸಿಮನ್ಸ್ ಮತ್ತು ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದ್ದು ಪ್ರತಿ ವರ್ಷ ಸುಮಾರು 12 ಮಿಲ್ಲಿಯನ್ ಪ್ರಯಾಣಿಕರನ್ನು ನಿರ್ವಹಿಸಬಲ್ಲ ಸಾಮರ್ಥ್ಯಕ್ಕೆ ವಿನ್ಯಾಸಗೊಳಿಸಲಾಗಿದೆ. ಸದ್ಯ ಇದು ರೈಲು ನಿಲ್ದಾಣ ಮತ್ತು ಬಸ್ಸು ನಿಲ್ದಾಣಕ್ಕೆ ಹತ್ತಿರದಲ್ಲಿದ್ದರೂ, ಈಗಾಗಲೇ ನೇರವಾದ ರೈಲು ಸಂಪರ್ಕ ಸಾಧಿಸಲು ಉದ್ದೇಶಿಸಲಾಗಿದೆ. ಬಸ್ಸು ಮುಖಾಂತರ ತಲುಪಲು ಇರುವ ರಾಷ್ಟ್ರೀಯ ಹೆದ್ದಾರಿಯನ್ನು ಈಗಾಗಲೇ 6 ಪಥದ ಮಾರ್ಗದಲ್ಲಿ ಅಗಲಗೊಳಿಸಲಾಗಿದೆ. 71000 ಚ.ಮೀ. ವಿಸ್ತಿರ್ಣ ಹೊಂದಿದ ಪ್ರಯಾಣಿಕ ಜಾಗದ ಕಟ್ಟಡವು ಹವಾ ನಿಯಂತ್ರಿತ ನಾಲ್ಕು ಮಹಡಿಗಳನ್ನು ಹೊಂದಿದ್ದು, ರಾಷ್ಟ್ರೀಯ ಹಾಗು ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಬಹುದಾಗಿದೆ. ನಿಲ್ದಾಣದ ಮತ್ತೊಂದು ವಿಶೇಷವೆಂದರೆ ಹಜ್ ಗೆ ಹೋಗುವ ಯಾತ್ರಾರ್ಥಿಗಳಿಗೆಂದೆ ಪ್ರತ್ಯೇಕವಾದ 1500 ಚ.ಮೀ. ವಿಸ್ತಿರ್ಣವುಳ್ಳ ಜಾಗವಿದ್ದು ಏಕಕಾಲದಲ್ಲಿ 600 ಪ್ರಯಾಣಿಕರನ್ನು ನಿಭಾಯಿಸಬಹುದಾಗಿದೆ. ನಗರದಿಂದ ಬರಲು, ಹೋಗಲು ಉತ್ತಮವಾದ ಟ್ಯಾಕ್ಸಿ ವ್ಯವಸ್ಥೆಯಿದೆ.