ಕೇಶವಾಯ ಸ್ವಾಹ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಕೇಶವಾಯ ಸ್ವಾಹ. ನಾರಾಯಣಾಯ ಸ್ವಾಹ. ಮಾದವಾಯ ಸ್ವಾಹ. ಈ ಮೇಲಿನ ಮಂತ್ರವನ್ನು ಜಪಿಸುವಾಗ ಉದ್ದರಣೆಯಿಂದ 3 ಸಲ ನೀರನ್ನು ಅಂಗೈಯಲ್ಲಿ ಹಾಕಿ ಕುಡಿಯಲು ಕಾರಣ. ಶಬ್ದವು ಗಂಟಲಿನಿಂದ ಬರುವ ಕಾರಣ ಅಲ್ಲಿರುವ ವಾಯುವು ಹೊರಕ್ಕೆ ಬಂದಾಗ ತೊಂದರೆಯಾಗದಿರಲಿ, ಶಬ್ದವು ಸುಗಮವಾಗಿ ಗಂಟಲಿನಿಂದ ಬರಲಿ ಎಂಬ ಉದ್ದೇಶದಿಂದ ನಮ್ಮ ಋಷಿ ಮುನಿಗಳು ನಮಗೆ ತೋರಿಸಿದ ಸರಳ ಮಾರ್ಗ.

ಕೇಶವಾಯ ಸ್ವಾಹ.;- ಈ ಮಂತ್ರವು ಗಂಟಲಿನಿಂದ ಹೊರಡುತ್ತದೆ.ಹೀಗೆ ಉಚ್ಚರಿಸುವಾಗ ಗಂಟಲಿಗೆ ಸಂಬಂದ ಪಟ್ಟ ಸ್ನಾಯು ಮತ್ತು ನರಗಳಿಗೆ ವ್ಯಾಯಾಮ ಕೊಡುವುದೇ ಈ ಮಂತ್ರದ ಉದ್ದೇಶ.

ನಾರಾಯಣಾಯ ಸ್ವಾಹ;- ಈ ಮಂತ್ರವು ನಾಲಗೆಯ ಸಹಾಯದಿಂದ ಹೊರಡುತ್ತದೆ.ಈ ಮಂತ್ರ ನಾಲಿಗೆಗೆ ಸಂಬಂದ ಪಟ್ಟ ನರಗಳಿಗೆ ವ್ಯಾಯಾಮ ಕೊಡುತ್ತದೆ.

ಮಾದವಾಯ ಸ್ವಾಹ;- ಈ ಮಂತ್ರವು ತುಟಿಗಳ ಸಹಾಯದಿಂದ ಹೊರಡುತ್ತದೆ. ಈ ಮೇಲಿನ ಮಂತ್ರಗಳನ್ನು ಅನೇಕ ಸಾರಿ ಉಚ್ಚಾರ ಮಾಡುವುದರಿಂದ,ಗಂಟಲು,ನಾಲಿಗೆ, ತುಟಿಗಳಿಗೆ ಸಂಬಂದ ಪಟ್ಟ ಸ್ನಾಯುಗಳಿಗೆ ಏಕಕಾಲದಲ್ಲಿ ವ್ಯಾಯಾಮ ಕೊಟ್ಟಂತಾಗುತ್ತದೆ.ಈಗೆ ಅನೇಕ ಸಾರಿ ಜಪಿಸುವುದರಿಂದ ಮುಂದೆ ಹೇಳಬೇಕಾದ ಮಂತ್ರಗಳು ಶುದ್ದವಾಗಿ ಸ್ಪುಟವಾಗಿ ಹೊರಡುತ್ತದೆ. ಶರೀರ ಶಾಶ್ತ್ರವು ಏನು ಹೇಳುತ್ತದೋ ಅದನ್ನು ಒಂದು ಆಚರಣೆಯಂತೆ ಆಚರಿಸಲು ದಾರ್ಮಿಕ ಕಾರಣ ಕೊಟ್ಟು ನಮ್ಮ ಹಿಂದಿನ ಋಷಿ ಮುನಿಗಳು ಕಡ್ಡಾಯವಾಗಿ ಮಾಡಲು ತಿಳಿಸಿದ್ದಾರೆ. ಪೂಜೆಗೆ ಕುಳಿತ ಬ್ರಾಹಮನರು ಮಂತ್ರ ಮಾಡುವಾಗ ಪದೇ ಪದೇ ಅಂಗೈಯಲ್ಲಿ ನೀರನ್ನು ಹಾಕಿ ಇದೇ ಮಂತ್ರವನ್ನು ಹೇಳುತ್ತಾರೆ. ಕಾರಣ ಮಂತ್ರವೆಲ್ಲಾ ಸಂಸ್ಕ್ರತ ಅದನ್ನು ಉಚ್ಚಾರ ಮಾಡಬೇಕಾದರೆ ನಾಲಗೆ ತುಟಿ ಗಂಟಲಿಗೆ ವ್ಯಾಯಾಮ ಬೇಕು, ಮಂತ್ರ ಗಂಟಲಿನಿಂದ ಸರಿಯಾಗಿ ಹೊರಡಬೇಕಾದರೆ ನೀರು ಗಂಟಲನ್ನು ತಂಪು ಮಾಡುತ್ತಲೇ ಇರಬೇಕು. ನೀರನ್ನು ಅಂಗೈಯಲ್ಲಿ ಹಾಕಿ ಕುಡಿಯುವ ಕಾರಣ ಅಂಗೈಯಲ್ಲಿ ಇರುವ ವಿದುಚ್ಚಕ್ತಿಯ ಸ್ವಲ್ಪ ಬಾಗ ನೀರಿನಲ್ಲಿ ಬೆರೆಯುತ್ತದೆ, ಆ ನೀರನ್ನು ಕುಡಿದರೆ ಅದು ಹೊಟ್ಟೆಗೆ ಹೋಗಿ ಅಲ್ಲಿರುವ ವಿದ್ಯುತ್ತಿನ ಸಂಗದ ಬೆರೆತು ಶರಿರಾದ್ಯಂತವೂ ಒಂದೇ ಸಮನೆ ಇರುವಂತೆ ಮಾಡುತ್ತದೆ. ಈ ಕಾರಣದಿಂದ ನೀರನ್ನು ಅಂಗೈ ಯಲ್ಲಿಯೇ ಹಾಕಿ ಕುಡಿಯಬೇಕು........ —