ಕೈಗಾರಿಕೋದ್ಯಮಗಳು
ಗೋಚರ
ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ. |
ಯಾವ ಕೈಗಾರಿಕೋದ್ಯಮವೂ ಪ್ರಕೃತಿಯ ಕಚ್ಚಾ ವಸ್ತುಗಳಿಲ್ಲದೆ ಬಲುಕಾಲ ನಡೆಯುವಂತಿಲ್ಲ. ಪ್ರಕೃತಿಯ ಬಲುಪಾಲು ವಸ್ತುಗಳು ಇಂಗಾಲ ಸಂಯುಕ್ತಪೂರಿತವಾದ್ದರಿಂದ ಇಂಗಾಲಸಂಯುಕ್ತಗಳನ್ನು ಸ್ವಲ್ಪವಾದರೂ ಉಪಯೋಗಿಸದ ಉದ್ಯಮಗಳೇ ಇಲ್ಲವೆನ್ನಬಹುದು. ಇಂದಿನ ದಿವಸಗಳಲ್ಲಿ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಉಪಯೋಗಿಸಲಾಗುತ್ತಿರುವ ಪ್ಲಾಸ್ಟಿಕ್ಕುಗಳು, ಕೃತಕ ಎಳೆಗಳು, ಚೊಕ್ಕಾರಕಗಳು, ವಿವಿಧ ಕೃತಕ ಮತ್ತು ಸಹಜ ವರ್ಣದ್ರವ್ಯಗಳು, ವಾಹನಗಳಿಗೆ ಉರುವಲಾಗಿ ಉಪಯೋಗಿಸುತ್ತಿರುವ ಪೆಟ್ರೋಲ್, ಸೀಮೆಎಣ್ಣೆ, ಡೀಸೆಲ್ ಎಣ್ಣೆಗಳ ಮೂಲವಾದ ಪೆಟ್ರೋಲಿಯಂ ಮೊದಲಾದುವುಗಳೆಲ್ಲ ಇಂಗಾಲ ಸಂಯುಕ್ತರಸಾಯನಶಾಸ್ತ್ರದ ಅಂಕೆಗೆ ಒಳಪಟ್ಟಿವೆ.