ಕೊಟ್ಟಣದ ಸೋಮವ್ವ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಕೊಟ್ಟಣದ ಸೋಮವ್ವ
ಜನನ1160
ಅಂಕಿತನಾಮನಿರ್ಲಜ್ಜೇಶ್ವರ


ಕೊಟ್ಟಣದ ಸೋಮವ್ವ ಕೊಟ್ಟಣ ಕುಟ್ಟುವ ಕಾಯಕದವಳು. ಸಾಮಾನ್ಯ ವರ್ಗದ ವ್ರತಾಚಾರ ನಿಷ್ಠೆಯ ಶಿವಶರಣೆ. ಅಪಾರ ಧೈರ್ಯವಂತೆ, ಕಾಯಕದಲ್ಲಿ ಕೈಲಾಸ, ನೆಮ್ಮದಿಯನ್ನು ಕಂಡವಳು. ಈಕೆಯು ತನ್ನ ಕಾಯಕ ದೃಷ್ಟಾಂತ ಬಳಸಿ ತಾನು ಹೇಳಬೇಕಾದುದನ್ನು ಧ್ವನಿಪೂರ್ಣ ವಾಗಿ ಹೇಳಿದ್ದಾಳೆ. ಈಕೆಯ ವಚನಗಳ ಅಂಕಿತ "ನಿರ್ಲಜ್ಜೇಶ್ವರ".

ಹದ ತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ
ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ
ಅರಿಯದುದು ಹೋಗಲಿ ಅರಿದು ಬೆರೆದೆನಾದೊಡೆ
ಕಾದಕತ್ತಿಯಲಿ ಕಿವಿಯ ಕೊಯ್ವರಯ್ಯಾ!
ಒಲ್ಲೆಬಲ್ಲೆನಾಗಿ ನಿಮ್ಮಾಣೆ ನಿರ್ಲಜ್ಜೇಶ್ವರ

ಹೆಚ್ಚಿನ ಮಾಹಿತಿಗೆ ಡಾ. ಕಾವ್ಯಶ್ರೀ ಜಿ ಇವರ "ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ" ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ