ಕೊಟ್ನಾಳ
ಕೊಟ್ನಾಳ
ಕೊಟ್ನಾಳ | |
---|---|
village |
ಕೊಟ್ನಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿದೆ.
ಭೌಗೋಳಿಕ
[ಬದಲಾಯಿಸಿ]ಗ್ರಾಮವು ಭೌಗೋಳಿಕವಾಗಿ 16* 31' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಹವಾಮಾನ
[ಬದಲಾಯಿಸಿ]- ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
- ಬೇಸಿಗೆಕಾಲ - 35°C-43°C ಡಿಗ್ರಿ ಸೆಲ್ಸಿಯಸ್
- ಚಳಿಗಾಲ ಮತ್ತು
- ಮಳೆಗಾಲ - 18°C-30°C ಡಿಗ್ರಿ ಸೆಲ್ಸಿಯಸ್.
- ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗಿರುತ್ತದೆ.
- ಗಾಳಿ -ಗಾಳಿ ವೇಗ 18 ಕಿಮಿ/ಗಂ (ಜೂನ), 19 ಕಿಮಿ/ಗಂ (ಜುಲೈ)ಹಾಗೂ 17 ಕಿಮಿ/ಗಂ (ಅಗಸ್ಟ್) ಇರುತ್ತದೆ.
ಜನಸಂಖ್ಯೆ
[ಬದಲಾಯಿಸಿ]ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
ಸಾಂಸ್ಕೃತಿಕ
[ಬದಲಾಯಿಸಿ]ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಧರ್ಮ
[ಬದಲಾಯಿಸಿ]ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.
ಭಾಷೆ
[ಬದಲಾಯಿಸಿ]ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ ಹಾಗೂ ಮರಾಠಿ ಭಾಷೆಗಳನ್ನು ಮಾತನಾಡುತ್ತಾರೆ.
ದೇವಸ್ಥಾನ & ಮಸೀದಿ
[ಬದಲಾಯಿಸಿ]ಗ್ರಾಮದಲ್ಲಿ ಹಿಂದೂ ಸಮುದಾಯದ ದೇವಾಲಯಗಳು ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇವೆ.
- ಶ್ರೀ ಜಕರಾಯಶ್ವರ ದೇವಾಲಯ
- ಯಲ್ಲಮ್ಮದೇವಿ ದೇವಾಲಯ
- ಚಿಣಗಿಬಾಷಾ ದರ್ಗಾ
- ಶ್ರೀ ಬಸವೇಶ್ವರ ದೇವಾಲಯ
- ಶ್ರೀ ಹಣಮಂತ ದೇವಾಲಯ
- ದ್ಯಾಮವ್ವದೇವಿ ದೇವಾಲಯ
- ಶ್ರೀ ಸಿದ್ದಲಿಂಗ ಸ್ವಾಮೀಜಿ ದೇವಾಲಯ
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಕೃಷಿ
[ಬದಲಾಯಿಸಿ]ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.
ಆರ್ಥಿಕತೆ
[ಬದಲಾಯಿಸಿ]ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.
ಉದ್ಯೋಗ
[ಬದಲಾಯಿಸಿ]ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಬೆಳೆ
[ಬದಲಾಯಿಸಿ]ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಸಸ್ಯ
[ಬದಲಾಯಿಸಿ]ಆಲದ ಮರ,ಹುಣಸೆ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.(ಬನ್ನಿ ಮರದಲ್ಲಿ ಅರಳಿ ಮರ ಹುಟ್ಟಿರುವುದು ಈ ಊರಿನಲ್ಲಿ ವಿಶೇಷ)
ಪ್ರಾಣಿ & ಪಕ್ಷಿ
[ಬದಲಾಯಿಸಿ]ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ,ಗಿಳಿ,ಬಾವಲಿ(ಸ್ಥಳೀಯರು ತೊಗಲಬುಗಲಿ ಅಂತಾರೆ), ಕಾಗೆ, ಕೋಗಿಲೆ ಇತ್ಯಾದಿ.
ಹಬ್ಬ
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಯುಗಾದಿಗೆ ಶ್ರೀ ಜಕರಾಯಶ್ವರ ದೇವರ ಜಾತ್ರೆ, ಹೊಸ್ತಿಲ ಹುಣ್ಣಿಮೆಗೆ ಯಲ್ಲಮ್ಮದೇವಿ ಜಾತ್ರೆ, ದವನದ ಹುಣ್ಣಿಮೆ ಆದ 5 ದಿನಕ್ಕೆ ಚಿಣಗಿಬಾಷಾ ದರ್ಗಾ ಉರಸು, ಶ್ರೀ ಬಸವೇಶ್ವರ ಜಾತ್ರೆ, ಗೌರಿ ಹುಣ್ಣಿಮೆಗೆ ಸಿದ್ದಲಿಂಗ ಸ್ವಾಮೀಜಿ ಜಾತ್ರೆ, 3 ವರ್ಷಕ್ಕೊಮ್ಮೆ ದ್ಯಾಮವ್ವದೇವಿ ಜಾತ್ರೆ. ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ
- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಟ್ನಾಳ
- ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಟ್ನಾಳ(ಕುಮಟಗಿ ವಸ್ತಿ)
- ಸರ್ಕಾರಿ ಕಿರಿಯಪ್ರಾಥಮಿಕ ಶಾಲೆ,(ಹಲಸಂಗಿ ವಸ್ತಿ)
- ಅಂಗನವಾಡಿ
ಇವೆ.
ಸಾಕ್ಷರತೆ
[ಬದಲಾಯಿಸಿ]ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.
ರಾಜಕೀಯ
[ಬದಲಾಯಿಸಿ]ಗ್ರಾಮದಲ್ಲಿ 4 ಜನ ಗ್ರಾ.ಪಂ. ಸದಸ್ಯರು ಇದ್ದಾರೆ. ಗ್ರಾಮವು ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದೆ. ಲಿಂಗದಳ್ಳಿ ತಾಲೂಕ ಪಂಚಾಯತ ವ್ಯಾಪ್ತಿಯಲ್ಲಿ ಇದೆ. ಅಥರ್ಗಾ ಜಿಲ್ಲಾ ಪಂಚಾಯತ್ ವ್ಯಾಪ್ತಯಲ್ಲಿ ಇದೆ. ಇಂಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ವಿಜಯಪುರ ಲೋಕಸಭೆಯ ವ್ಯಾಪ್ತಿಯಲ್ಲಿದೆ.
ಬರುತ್ತದೆ.
- Short description with empty Wikidata description
- Articles using infobox templates with no data rows
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ವಿಜಯಪುರ ಜಿಲ್ಲೆಯ ಹಳ್ಳಿಗಳು