ಕ್ಲಿವಿಯ
| ಕ್ಲಿವಿಯ | |
|---|---|
| Clivia miniata var. citrina | |
| ವೈಜ್ಞಾನಿಕ ವರ್ಗೀಕರಣ | |
| Unrecognized taxon (fix): | Clivia |
| ಮಾದರಿ ಜಾತಿ | |
| Clivia nobilis Lindl.[೧] | |
| Species | |
|
See text | |
| ಸಮಾನಾರ್ಥಕ ಪದಗಳು[೨] | |
| |
ಕ್ಲಿವಿಯಾ (ಕ್ಯೂಫಿಯಾ) ಲೈತ್ರೇಸೀ ಕುಟುಂಬದ ಕ್ಲಿವಿಯಾ ಮಿನಿಯೇಟ ಎಂಬ ವೈಜ್ಞಾನಿಕ ಹೆಸರಿನ ವಾರ್ಷಿಕ ಸಸ್ಯ. ಇದರ ಹೊಳಪಿನ ಎಲೆಗಳ ಮತ್ತು ನಸುಗೆಂಪು ಹೂವಿನ ಅಲಂಕಾರಕ್ಕಾಗಿ ಈ ಸಸ್ಯ ತೋಟಗಾರಿಕೆಯಲ್ಲಿ ಪ್ರಾಮುಖ್ಯ ಪಡೆದಿದೆ. 12"-15" ಎತ್ತರಕ್ಕೆ ಬೆಳೆಯುವ ಈ ಸಸ್ಯವನ್ನು ಕುಂಡದಲ್ಲಿ ಅಥವಾ ಮಡಿಗಳಲ್ಲಿ ಬೆಳೆಸಬಹುದು.
ಸಸ್ಯ ಲಕ್ಷಣಗಳು
[ಬದಲಾಯಿಸಿ]ಅಭಿಮುಖ ಜೋಡಣೆಯನ್ನು ತೋರುವ ಅಂಡಾಕಾರದ ಇಲ್ಲವೆ ಭರ್ಜಿಯಾಕಾರದ ಸರಳ ಎಲೆಗಳು, ರೆಸೀಮ್ ಮಾದರಿಯ ಹೂಗೊಂಚಲುಗಳಲ್ಲಿ ಸಮಾವೇಶಗೊಂಡಿರುವ ದ್ವಿಲಿಂಗಿ ಹೂಗಳು ಕ್ಲಿವಿಯದ ಮುಖ್ಯಲಕ್ಷಣಗಳಲ್ಲಿ ಕೆಲವು. ದಳಗಳ ಸಂಖ್ಯೆಯಲ್ಲಿ ಗಮನಾರ್ಹವಾದ ವ್ಯತ್ಯಾಸಗಳನ್ನು ನೋಡಬಹುದು. ಕ್ಯೂ.ಇಗ್ನಿಯ ಎಂಬ ಪ್ರಭೇದದಲ್ಲಿ ದಳಗಳೇ ಇಲ್ಲ. ಬದಲಿಗೆ ಕಣ್ಣುಕೋರೈಸುವಂಥ ಬಣ್ಣವುಳ್ಳ ಪುಷ್ಪಗಳಿವೆ. ಕ್ಯೂ. ಹಿಸೋಪಿಫೋಲಿಯ ಎಂಬುದರಲ್ಲಿ ಸಮಗಾತ್ರದ 6 ದಳಗಳಿವೆ. ಇವೆರಡು ಬಗೆಗಳ ನಡುವೆ 2 ದೊಡ್ಡ ಹಾಗೂ 4 ಚಿಕ್ಕ ದಳಗಳನ್ನು ಪಡೆದಿರುವ ಪ್ರಭೇದಗಳೂ (ಕ್ಯೂ.ಪ್ರೊಕಂಬೆನ್ಸ್) ಎರಡು ದಳಗಳನ್ನು ಮಾತ್ರ ಹೊಂದಿರುವ ಪ್ರಭೇದಗಳೂ (ಕ್ಯೂ.ಲಾವಿಯ) ಇವೆ. 12 ದಳಗಳಿರುವ ಭೇದಗಳೂ ಇಲ್ಲದಿಲ್ಲ (ಉದಾ: ಕ್ಯೂ.ಮೈಕ್ರೊಪೆಟಾಲ).
ಸಸ್ಯಾಭಿವೃದ್ಧಿ
[ಬದಲಾಯಿಸಿ]ಕ್ಲಿವಿಯವನ್ನು ಬೀಜಗಳ ಮೂಲಕ ವೃದ್ಧಿಸಲಾಗುತ್ತದೆ. ಬೀಜಗಳನ್ನು ಮೊದಲು ಬಿತ್ತನೆ ಮಾಡಿ, 25-26ನೆಯ ದಿನದ ಸಸಿಗಳನ್ನು, 12"ನ ಕುಂಡಗಳಲ್ಲೊ ಇಲ್ಲವೆ ಮಡಿಗಳಲ್ಲಿ 9"-12" ಅಂತರ ಕೊಟ್ಟೊ ನೆಡಬೇಕು. 45, 60 ಮತ್ತು 75ನೆಯ ದಿನ ಒಂದು ಸಾರಿ ತುದಿಯನ್ನು ಜಿಗುಟಬೇಕು. 90-105 ದಿನಗಳಲ್ಲಿ ಗಿಡ ಹೂಬಿಡಲು ಆರಂಭಿಸುತ್ತದೆ. 140 ದಿನಗಳಲ್ಲಿ ಬೀಜವನ್ನು ಬಿಡಿಸಬಹುದು.
ಛಾಯಾಂಕಣ
[ಬದಲಾಯಿಸಿ]- Clivia sp.
- Clivia × cyrtanthiflora, an artificial hybrid
- Clivia 'Variegata'
ಬಾಹ್ಯ ಸಂಪರ್ಕಗಳು
[ಬದಲಾಯಿಸಿ]ಉಲ್ಲೇಖಗಳು
[ಬದಲಾಯಿಸಿ]
- ↑ Missouri Botanical Garden. (n.d.-b). Clivia Lindl. Tropicos. Retrieved January 17, 2025, from https://www.tropicos.org/name/40010537
- ↑ "Clivia Lindl". Plants of the World Online. Royal Botanic Gardens, Kew. Archived from the original on 8 ಫೆಬ್ರವರಿ 2023. Retrieved 14 October 2025.