ಗಂಗಾಂಬಿಕೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಗಂಗಾಂಬಿಕೆ
ಜನನ೧೧೬೦
ಅಂಕಿತನಾಮಗಂಗಾಪ್ರಿಯ ಕೂಡಲಸಂಗ
ಇದಕ್ಕೆ ಪ್ರಸಿದ್ಧವಚನಗಳು
ಸಂಗಾತಿ(ಗಳು)ಬಸವಣ್ಣ


ಗಂಗಾಂಬಿಕೆ[ಬದಲಾಯಿಸಿ]

ಬಸವೇಶ್ವರರ ಹಿರಿಯ ಪತ್ನಿ. ಮಂತ್ರಿ ಬಲದೇವ ಎಂಬುವರ ಮಗಳು. ಗುರು ಘನಲಿಂಗ ರುದ್ರಮುನಿಗಳ ಶಿಷ್ಯೆ. ಬಸವಣ್ಣನವರ ಎಲ್ಲಾ ಕಾರ್ಯಗಳಲ್ಲೂ ಚೈತನ್ಯದಾಯಕ ಸ್ಪೂರ್ತಿಯ ಸೆಲೆಯಾದವಳು. ಈಕೆ ಪತಿಯ ಇಚ್ಛಾನುಸಾರಿಣಿ, ದಾಸೋಹ ನಿರತೆ, ಲಿಂಗನಿಷ್ಠೆಯುಳ್ಳ ಆಧ್ಯಾತ್ಮ ಸಾಧಕಿ. ಇವಳ ವಚನಗಳಲ್ಲಿ ಅಂತರಂಗದ ಅಭಿವ್ಯಕ್ತಿ, ವೈಯಕ್ತಿಕ ಬದುಕಿನ ನೋವು, ಅಗಲಿಕೆ, ದು:ಖ, ದುಮ್ಮಾನಗಳ ಚಿತ್ರಣವಿದೆ. ಈಕೆಯ ವಚನಗಳ ಅಂಕಿತ " ಗಂಗಾಪ್ರಿಯ ಕೂಡಲಸಂಗ".

ಅವಳ ಕಂದ ಬಾಲಸಂಗ ನಿನ್ನ ಕಂದ
ಚನ್ನಲಿಂಗ ಎಂದು ಹೇಳಿದರಮ್ಮಾ
ಎನ್ನ ಒಡೆಯರು ಫಲವಿಲ್ಲದ
ಕಂದನಿರ್ಪನವಳಿಗೆ ಎನಗೆ ಫಲವಿಲ್ಲ
ಕಂದನಿಲ್ಲ ಇದೇನೊ ದು:ಖದಂದುಗ
ಗಂಗಾಪ್ರಿಯ ಕೂಡಲಸಂಗಮದೇವಾ ?