ಗಾಯತ್ರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಗಾಯತ್ರೀ ದೇವಿ

ಗಾಯತ್ರಿ ಮೂಲತಃ ಸಂಸ್ಕೃತ ಪದವಾದ ಗಾಯತ್ರ ಪದದ ಸ್ತ್ರೀಲಿಂಗ ರೂಪ. ಈ ಪದವನ್ನು ಸಂಸ್ಕೃತದಲ್ಲಿ ಗಾಯಂತಮ್ ತ್ರಾಯತೇ ಯಸ್ಮಾತ್ ಇತಿ ಗಾಯತ್ರಾ ಎಂದು ಬಿಡಿಸುತ್ತಾರೆ. ಭಾಷಾಂತರಿಸಿದರೆ ಯಾವುದರ ಉಚ್ಚಾರದಿಂದ ಸಂಕಷ್ಟ ತೀರುವುದೊ ಅದೆ ಗಾಯತ್ರ ಎಂಬ ಅರ್ಥ ಮೂಡಿ ಬರುತ್ತದೆ. ಹಿಂದೂ ಧರ್ಮಾನುಯಾಯಿಗಳ ವಚನ ಲೇಖನಗಳಲ್ಲಿ ಮತ್ತು ಧರ್ಮ ಗ್ರಂಥಗಳಲ್ಲಿ ಈ ಪದವನ್ನು ಮೂರು ಸ್ವರೂಪದಲ್ಲಿ ಕಾಣಬಹುದು.

 • ಗಾಯತ್ರೀ ಛಂದಸ್ಸು - ೨೪ ಅಕ್ಷರಗಳ ತ್ರಿಪದಿ
 • ಗಾಯತ್ರೀ ಮಂತ್ರ - ಋಗ್ವೇದದಲ್ಲಿ ಮೊದಲು ಕಾಣಿಸಿಕೊಂಡು, ನಂತರ ಇತರ ವೇದೋಪನಿಷತ್‌ಗಳಲ್ಲಿ ಪ್ರಸ್ತಾಪವಿರುವ ಹಿಂದೂ ಧರ್ಮದ ಒಂದು ಪ್ರಮುಖ ಮಂತ್ರ. ಗಾಯತ್ರೀ ಛಂದಸ್ಸಿನಲ್ಲಿ ಬರೆದ ಯಾವುದೆ ಮಂತ್ರವನ್ನು ಗಾಯತ್ರೀ ಮಂತ್ರ ಎಂದು ಕರೆಯುವ ಪ್ರತೀತಿ ಕೂಡ ಇದೆ.
 • ಗಾಯತ್ರೀ ದೇವಿ - ವೇದಮಾತೆ ಮತ್ತು ದೇವಿ ಸರಸ್ವತಿಯ ಸ್ವರೂಪ.

ಗಾಯತ್ರೀ ಛಂದಸ್ಸು[ಬದಲಾಯಿಸಿ]

ಗಾಯತ್ರೀ ಛಂದಸ್ಸು ಸಾಲಿಗೆ ೮ ಅಕ್ಷರದಂತೆ ಒಟ್ಟು ೨೪ ಅಕ್ಷರಗಳಿರುವ ತ್ರಿಪದಿ. ಗಾಯತ್ರಿ ಮಂತ್ರ ಕೂಡ ಇದೇ ಛಂದಸ್ಸಿನಲ್ಲಿದೆ. ಋಗ್ವೇದದ ಶ್ಲೋಕಗಳಲ್ಲಿ ಸುಮಾರು ೧/೪ ಭಾಗದಷ್ಟು ಈ ಛಂದಸ್ಸಿನಲ್ಲಿವೆ ಎಂದು ಅಂದಾಜು ಮಾಡಲಾಗಿದೆ.

ಗಾಯತ್ರೀ ಮಂತ್ರ[ಬದಲಾಯಿಸಿ]

 • ಗಾಯತ್ರೀ ಮಂತ್ರ (ಸಾವಿತ್ರ ಮಂತ್ರ ಎಂದೂ ಕರೆಯುವುದುಂಟು) ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಈ ಮಂತ್ರದಲ್ಲಿ ಸವಿತೃ ದೇವನನ್ನು ಆವಾಹನೆ ಮಾಡಿರುವ ಕಾರಣದಿಂದ, ಈ ಮಂತ್ರವನ್ನು ಸಾವಿತ್ರ ಮಂತ್ರ ಎಂದು ಕೂಡ ಕರೆಯುತ್ತಾರೆ. ಗಾಯತ್ರೀ ಮಂತ್ರ ಬ್ರಹ್ಮರ್ಷಿ ವಿಶ್ವಾಮಿತ್ರನಿಂದ ದರ್ಶಿಸಲ್ಪಟ್ಟಿದೆ ಎಂದು ಕೆಲವರು ನಂಬುತ್ತಾರೆ. ಆದರೆ ಗಾಯತ್ರೀ ಮಂತ್ರ ಇರುವ ಋಗ್ವೇದವೂ ಸೇರಿದಂತೆ, ವೇದಗಳೆಲ್ಲ ಬ್ರಹ್ಮನ ಮುಖಾಂತರ ಹೊಮ್ಮಿದವು ಎಂಬುದು ಪ್ರಚಲಿತದಲ್ಲಿರುವ ಪುರಾಣ ಕಥೆ.
 • ವೈದಿಕ ಕಾಲದಿಂದಲೂ ಗಾಯತ್ರಿ ಮಂತ್ರ ಯಾವುದೆ ವರ್ಗ, ಜಾತಿ ಅಥವಾ ಲಿಂಗಕ್ಕೆ ಸೀಮಿತಪಟ್ಟಿಲ್ಲ ಯಾರು ಬೇಕಾದರು ಇದನ್ನು ಉಚ್ಚರಿಸಬಹುದು ಎಂಬುವುದು ಅನೇಕ ಧರ್ಮಶಾಸ್ತ್ರಜ್ಞರ ಅಭಿಪ್ರಾಯ. ಋಗ್ವೇದದದ ೩.೬೨.೧೦ನೆ (೩ನೆ ಮಂಡಲ, ೬೨ನೆ ಸೂಕ್ತ, ೧೦ನೆ ರಿಚ) ಮಂತ್ರವಾಗಿರುವ ಇದು, "ಓಂ ಭೂರ್ಭುವಃ ಸ್ವಃ" ಎಂಬ ಪೀಠಿಕೆ (ಯಜುರ್ವೇದದ ಸೂತ್ರದಂತೆ) ಸೇರಿ ಹೀಗೆ ಬಳಕೆಯಲ್ಲಿದೆ.

ಮಂತ್ರ[ಬದಲಾಯಿಸಿ]

ದೇವ ನಾಗರಿಯಲ್ಲಿ 
In Devanagari:(ಇಂಗ್ಲಿಷ್ ತಾಣದಿಂದ)

:ॐ भूर्भुवः॒ स्वः ।

तत्स॑वितुर्वरे॑णयं| ---(तत्सवितुर्वरेण्यं) ।
भ॒र्गो॑ दे॒वस्य॑ धीमहि ।
धियो॒ यो नः॑ प्रचो॒दया॑त्||

(ಪೀಠಿಕೆ) ಓಂ ಭೂರ್ಭುವಃ ಸ್ವಃ

(ಋಗ್ವೇದದದ ೩.೬೨.೧೦ ರಲ್ಲಿರುವ ಮೂಲ ಮಂತ್ರ)

ತತ್ ಸವಿತುರ್ ವರೇಣ್ಯಂ(ತತ್ಸವಿತುರ್ :೪ ಅಕ್ಷರ +ವರೇಣ್ಯಂ :೩ ಅಕ್ಷರ?=ವರೇಣಿಯಂ:೪=೮)

ಭರ್ಗೋ ದೇವಸ್ಯ ಧೀಮಹಿ(೨+೩+೩=೮)

ಧಿಯೊ ಯೊ ನಃ ಪ್ರಚೋದಯಾತ್(೨+೧+೧+೪=೮ :ತ್ ಹಿಂದಿನಯಾಕ್ಕೆ ಸೇರಿ ೧ ಅಕ್ಷರ:ತಿದ್ದುಪಡಿ:ಧೀಯೋχ 'ಧಿಯೋ')

 • (ಒಟ್ಟು ೮+೮+೮=೨೪ ಅಕ್ಷರ)

ಕನ್ನಡ ಭಾಷಾಂತರ[ಬದಲಾಯಿಸಿ]

ಹಲವರು ಹಲವು ರೀತಿಯಲ್ಲಿ ಭಾಷಾಂತರಿಸಿದ್ದಾರೆ. ಆದರೆ ಮೂಲ ಅರ್ಥ ಹೀಗೆ ಹೊಮ್ಮುತ್ತದೆ. ಭೂಮಿ ಆಕಾಶ ಮತ್ತು ಅಂತರಿಕ್ಷವನ್ನಾವರಿಸಿದ ತೇಜೋಮಯನಾದ, ದಿವ್ಯ ಸ್ವರೂಪನಾದ, ಪೂಜಿಪನಾದ ಆ ಪರಬ್ರಹ್ಮ(ಸವಿತೃ ಅಥವ ಸೂರ್ಯ)ನಮ್ಮ ಬುದ್ಧಿ ವಿವೇಕಗಳನ್ನು ಬೆಳಕಿನೆಡೆ(ಜ್ಞಾನದ ಬೆಳಕಿನೆಡೆ)ಗೆ ಪ್ರೇರಿಸಲಿ

ಪದಗಳ ಆರ್ಥ[ಬದಲಾಯಿಸಿ]

 • ಓಂ - ಓಂ
 • ಭೂಃ - ಭೂಮಿ
 • ಭುವಃ - ಅಂತರಿಕ್ಷ
 • ಸ್ವಃ - ಆಕಾಶ
 • ತತ್ - ಆ
 • ಸವಿತುಃ - ಸವಿತೃವಿನ (ಪರಮಾತ್ಮ, ಪರಬ್ರಹ್ಮ ಮತ್ತು ಸೂರ್ಯ ಎಂದು ಸಹ ಅರ್ಥೈಸಲಾಗುತ್ತದೆ)
 • ವರೇಣ್ಯಂ - ಪೂಜಾರ್ಹವಾದ
 • ಭರ್ಗೋ - ತೇಜಸ್ಸನ್ನು
 • ದೇವಸ್ಯ - ದೇವನ
 • ಧೀಮಹಿ - ಧ್ಯಾನಿಸುತ್ತೇವೆ
 • ಧಿಯೋ - ಬುದ್ಧಿ, ವಿವೇಕಗಳನ್ನು
 • ಯೋ - ಅವನು
 • ನಃ - ನಮ್ಮೆಲ್ಲರ
 • ಪ್ರಚೋದಯಾತ್ - ಪ್ರಚೋದಿಸಲಿ

ಉಲ್ಲೇಖ[ಬದಲಾಯಿಸಿ]

ಮೊದಲನೆ ವೇದವಾದ ಋಗ್ವೇದದ ಅಂಶಗಳು ಉಳಿದ ಮೂರು ವೇದಗಳಲ್ಲಿ ಸೇರಿರುವ ಕಾರಣ, ಗಾಯತ್ರೀ ಮಂತ್ರದ ಉಲ್ಲೇಖ ಎಲ್ಲಾ ವೇದಗಳಲ್ಲಿದೆ. ಭಗವದ್ಗೀತೆಯಲ್ಲಿ, ಹಲವಾರು ಉಪನಿಷತ್ತುಗಳಲ್ಲಿ, ಶಂಕರಾಚಾರ್ಯರ ಕೃತಿಗಳಲ್ಲಿ ಮತ್ತು ಶ್ರೀಮದ್ ಭಾಗವತದಲ್ಲಿ ಕೂಡ ಗಾಯತ್ರೀ ಮಂತ್ರದ ಪ್ರಸ್ತಾಪವಿದೆ.

ಗಾಯತ್ರೀ ದೇವಿ[ಬದಲಾಯಿಸಿ]

ಗಾಯತ್ರೀ ದೇವಿ (ಸಾವಿತ್ರಿ) ಬ್ರಹ್ಮನ ಪತ್ನಿಯಾದ ಸರಸ್ವತಿಯ ಸ್ವರೂಪ ಎಂಬ ಪ್ರತೀತಿ ಇದೆ. ವೇದ ಮಾತೆ ಎಂದು ಕರೆಯಲ್ಪಡುವ ಗಾಯತ್ರಿ ದೇವಿಯನ್ನು ಐದು ಮುಖ ಮತ್ತು ಹತ್ತು ಬಾಹುಗಳುಳ್ಳವಳು, ಕಮಲಾಸೀನಳು ಮತ್ತು ಹಂಸವಾಹಿನಿಯೆಂದು ವರ್ಣಿಸುತ್ತಾರೆ. ಕೆಲವರು ವೈದಿಕ ಕಾಲದಲ್ಲಿ ಈ ದೇವತೆಯ ಉಲ್ಲೇಖವಿರಲಿಲ್ಲ ಎಂದು ವಾದಿಸುತ್ತಾ, ಗಾಯತ್ರೀ ದೇವಿಯ ಅರ್ಚನೆ ಅವೈದಿಕ ಎಂದು ಪರಿಗಣಿಸುತ್ತಾರೆ. ಆದರೆ ಸಾಮಾನ್ಯವಾಗಿ ಗಾಯತ್ರೀ ದೇವಿಯಯನ್ನು ಎಲ್ಲರು ಸ್ವೀಕರಿಸಿದ್ದಾರೆ.

ಇನ್ನೂ ಹೆಚ್ಚಿನ ಅರ್ಥಕ್ಕೆ-> ಗಾಯತ್ರೀ ಪುಟ೨<- ಕ್ಲಿಕ್ ಮಾಡಿ

ಬಾಹ್ಯ ಸಂಪರ್ಕ ಕೊಂಡಿಗಳು[ಬದಲಾಯಿಸಿ]


ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ HinduSwastika.svg
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ

ಇತರ ದೇವತೆಗಳು

ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ
"https://kn.wikipedia.org/w/index.php?title=ಗಾಯತ್ರಿ&oldid=673663" ಇಂದ ಪಡೆಯಲ್ಪಟ್ಟಿದೆ