ವಿಷಯಕ್ಕೆ ಹೋಗು

ಗೋಲ ಗುಮ್ಮಟ

Coordinates: 16°49′48″N 75°44′9″E / 16.83000°N 75.73583°E / 16.83000; 75.73583
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಗೋಲ್ ಗುಂಬಜ್ ಇಂದ ಪುನರ್ನಿರ್ದೇಶಿತ)
ಗೋಲ್ ಗುಂಬಜ್

ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್). ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ ವಸ್ತು ಸಂಗ್ರಾಹಾಲಯವು ಇದೆ.

ಗೋಲ್ ಗುಮ್ಮಟ ಬಿಜಾಪುರದಲ್ಲಿ ಸ್ಥಿತವಾಗಿರುವ ಮೊಹಮ್ಮದ್ ಆದಿಲ್ ಶಾ (೧೬೨೭ - ೧೬೫೭) ಅವರ ಸಮಾಧಿ. ಬಿಜಾಪುರವಲ್ಲದೆ ಬೀದರ, ಗೊಲ್ಕೊಂಡ, ಗುಲ್ಬರ್ಗಾಗಳನ್ನೊಳಗೊಳ್ಳುವ 'ಗೋಲ್ ಗುಂಬಜ್' ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು. ಅದರ ಕಟ್ಟುವಿಕೆಯ ಹೊಣೆ ಹೊತ್ತವನು, ದಾಬುಲ್ ನ ಪ್ರಸಿದ್ಧ ವಾಸ್ತುಶಿಲ್ಪಯಾದ ಯಾಕುಬ್. ಗೋಲ್ ಗುಂಬಜ್ ನ ತಳಹದಿಯು 205 ಅಡಿಗಳ ಚಚ್ಚೌಕ. ಅದರ ಸುತ್ತಲೂ ಇರುವ ಗೋಡೆಗಳು 198 ಅಡಿ ಎತ್ತರವಾಗಿವೆ. ಈ ಗೋಡೆಗಳ ಮೇಲೆ ಗುಂಬಜವು ಕಣ್ಣಿಗೆ ಕಾಣುವ ಯಾವುದೇ ಆಸರೆಯೂ ಇಲ್ಲದೆ ನಿಂತಿದೆ. ಗೋಡೆಗಳಿಂದ ಸುತ್ತುವರಿಯಲ್ಪಟ್ಟ

  1. ಗುಂಬಜದ ಕೆಳಗಿರುವ ವಿಶಾಲವಾದ ಹಾಲಿನ(ಹಾಲ್) ವಿಸ್ತೀರ್ಣವು 1833767 ಚದುರಡಿಗಳು. ಗೋಲ್ ಗುಂಬಜ್, ಜಗತ್ತಿನಲ್ಲಿರುವ ಅತ್ಯಂತ ದೊಡ್ಡ ಸಿಂಗಲ್ ಛೇಂಬರ್ ಸ್ಟ್ರಕ್ಚರ್ ಗಳಲ್ಲಿ ಒಂದು. ಇಲ್ಲಿರುವ ಗೋಡೆಗಳಲ್ಲಿ ಪ್ರತಿಯೊಂದರಲ್ಲಿಯೂ ಮೂರು ಕಮಾನುಗಳನ್ನು ರಚಿಸಲಾಗಿದೆ.
  2. ಗೋಲ್ ಗುಂಬಜ್ ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ, ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು.
  3. ಈ ಗುಮ್ಮಟ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ. ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ. ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ.

ಗೋಲ್ ಗುಮ್ಮಟದ ವೈಶಿಷ್ಟ್ಯತೆ

[ಬದಲಾಯಿಸಿ]

ಕಾರ್ಡೋಬಾದಲ್ಲಿರುವ ಬೃಹತ್ ಮಸೀದಿಯಲ್ಲಿ ಮಾತ್ರ ಇಂತಹ ರಚನೆಯನ್ನು ಬಳಸಲಾಗಿದೆ. ಎತ್ತರದ ಬಿಂದುವಿನಲ್ಲಿ ಕೊನೆಯಾಗುವ ಎಂಟು ಕಮಾನುಗಳು, ನಿಯತವಾದ ಜಾಗಗಳಲ್ಲಿ ಒಂದನ್ನೊಂದು ಅರ್ಧಿಸುತ್ತವೆ. ಈ ಗುಂಬಜ್ ನಲ್ಲಿರುವ ಪ್ರತಿಧ್ವನಿಗುಣವು ಅದರ ವಿಶೇಷ ಲಕ್ಷಣಗಳಲ್ಲಿ ಒಂದು. ಇಲ್ಲಿ ಆಡಿದ ಮಾತು ಅಥವಾ ಮಾಡಿದ ಶಬ್ದವು ಹನ್ನೊಂದು ಬಾರಿ ಪ್ರತಿಧ್ವನಿಸುತ್ತದೆ. ಅದನ್ನು ಮೂವತ್ತೇಳು ಕಿಲೋಮೀಟರುಗಳ ದೂರದಿಂದ ಕೇಳಬಹುದು. ಹಾಲ್ ನಿಂದ 33.22 ಮೀಟರುಗಳ ಎತ್ತರದಲ್ಲಿ ಸುಮಾರು ಮೂರೂಕಾಲು ಅಡಿ ಅಗಲದ ಗ್ಯಾಲರಿಯಿದೆ. ಇದು ಗುಂಬಜಿನ ಒಳ ಪರಿಧಿಯ ಸುತ್ತಲೂ ವೃತ್ತಾಕಾರವಾಗಿ ಹರಡಿಕೊಂಡಿದೆ. ಇದನ್ನು ‘ಪಿಸುಗುಟ್ಟುವ ಗ್ಯಾಲರಿ’(ವಿಷ್ಪರಿಂಗ್ ಗ್ಯಾಲರಿ) ಎಂದು ಕರೆಯುತ್ತಾರೆ. ಏಕೆಂದರೆ, ಇಲ್ಲಿ ಅತ್ಯಂತ ಮೆಲುದನಿಯಲ್ಲಿ ಆಡಿದ ಮಾತನ್ನು ಕೂಡ ಗ್ಯಾಲರಿಯ ಒಂದು ತುದಿಯಿಂದ ಇನ್ನೊಂದು ತುದಿಯವರೆಗೂ ಕೇಳಬಹುದು. ಒಂದೇ ಒಂದು ಬಾರಿ ಗಟ್ಟಿಯಾಗಿ ಚಪ್ಪಾಳೆ ತಟ್ಟಿದರೆ, ಅದು ಹತ್ತು ಸಲ ಪ್ರತಿಧ್ವನಿಸುತ್ತದೆ. ಗುಂಬಜಿನ ಗೋಡೆಗಳ ಹೊರ ಭಾಗದ ಮೇಲೆ ಪಾರಿವಾಳಗಳು, ಆನೆಗಳು, ಕಮಲದಳಗಳು, ಮತ್ತು ಕಂಠಹಾರಗಳ ಸುಂದರವಾದ ಕೆತ್ತನೆ ಹಾಗೂ ಶಿಲ್ಪಗಳನ್ನು ನೋಡಬಹುದು. ಹಾಲಿನ ಮಧ್ಯದಲ್ಲಿರುವ ವೇದಿಕೆಯ ಮೇಲೆ, ಮುಹಮ್ಮದ್ ಆದಿಲ್ ಷಾ ಮತ್ತು ಅವನ ಬಂಧುಗಳ ಕೃತಕವಾದ ಸಮಾಧಿಗಳಿವೆ. ನಿಜವಾದ ಸಮಾಧಿಗಳು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿವೆ.

ಛಾಯಾಂಕಣ

[ಬದಲಾಯಿಸಿ]
Dome from the outside
Dome from the outside 
Dome with intersecting arches from the inside
Dome with intersecting arches from the inside 
Whispering Gallery
Whispering Gallery 
Carvings on the wall
Carvings on the wall 
Gol Gumbaz c. 1860
Gol Gumbaz c. 1860 
Gol Gumbaz - view from the entrance.
Gol Gumbaz - view from the entrance. 
One of the minars as viewed from the terrace.
One of the minars as viewed from the terrace. 
 
 
 

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
ಕರ್ನಾಟಕದ ಏಳು ಅದ್ಭುತಗಳು
ಹಿರೇಬೆಣಕಲ್ ಶಿಲಾ ಸಮಾಧಿಗಳು | ಹಂಪಿ | ಗೋಲ ಗುಮ್ಮಟ | ಶ್ರವಣಬೆಳಗೊಳದ ಗೊಮ್ಮಟೇಶ್ವರ | ಮೈಸೂರು ಅರಮನೆ | ಜೋಗ ಜಲಪಾತ | ನೇತ್ರಾಣಿ ದ್ವೀಪ


16°49′48″N 75°44′9″E / 16.83000°N 75.73583°E / 16.83000; 75.73583