ವಿಷಯಕ್ಕೆ ಹೋಗು

ಚಿಕ್ಕಲಕಿ ಕ್ರಾಸ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಚಿಕ್ಕಲಕಿ ಕ್ರಾಸ್
ಚಿಕ್ಕಲಕಿ ಕ್ರಾಸ್
village
Population
 (೨೦೧೨)
 • Total೨೦೦೦

ಚಿಕ್ಕಲಕಿ ಕ್ರಾಸ್ ಒಂದು ಗ್ರಾಮ ಹಾಗೂ ಸ್ಥಳ .ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿದೆ. ಚಿಕ್ಕಲಕಿ ಕ್ರಾಸ್ ಬಿಜಾಪುರ - ಜಮಖಂಡಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ಬಾಗಲಕೋಟ ದಿಂದ ಸುಮಾರು ೭೫ ಕಿ. ಮಿ. ಇದ್ದು ಸಾವಳಗಿ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ.

ನೀರಾವರಿ

[ಬದಲಾಯಿಸಿ]

ಗ್ರಾಮದ ಪ್ರತಿಶತ ೫೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

[ಬದಲಾಯಿಸಿ]

ಪ್ರತಿವರ್ಷ ಶ್ರೀ ಹನುಮಾನ ಉತ್ಸವ (ಓಕಳಿ), ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ ೧ನೇ ತರಗತಿಯಿಂದ ೭ನೇ ತರಗತಿವರೆಗೆ ೨೦೦ರಕ್ಕು ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ. ಹಾಗೂ ಶ್ರೀ ಗಜಾನನ ಕೈಗಾರಿಕಾ ತರಬೇತಿ ಕೇಂದ್ರ ಇದೆ.

ಕೈಗಾರಿಕೆಗಳು

[ಬದಲಾಯಿಸಿ]

ಗ್ರಾಮದ ಸಮೀಪದಲ್ಲಿ ಶ್ರೀ ಜಮಖಂಡಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಾಗಿದೆ.