ಜಾವಗಲ್ ಶ್ರೀನಾಥ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಜಾವಗಲ್ ಶ್ರೀನಾಥ್
ಮೂಲ: [೧], December 22 2005

ಜಾವಗಲ್ ಶ್ರೀನಾಥ್ (ಜನನ: ಆಗಸ್ಟ್ ೩೧, ೧೯೬೯) ಭಾರತದ ನಿವೃತ್ತ ಕ್ರಿಕೆಟ್ ಆಟಗಾರರು. ೨೦೦೩ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗುವ ಮುನ್ನ ಭಾರತದ ಪ್ರಮುಖ ವೇಗದ ಬೌಲರ್ ಆಗಿದ್ದರು. ಕ್ರೀಡಾಭಿಮಾನಿಗಳ ಪಾಲಿಗೆ 'ಮೈಸೂರು ಎಕ್ಸ್‌ಪ್ರೆಸ್' ಎಂದೇ ಖ್ಯಾತರಾದವರು.

ಮೈಸೂರಿನಲ್ಲಿ ಜನಿಸಿದ ಶ್ರೀನಾಥ್, ಮೂಲತಃ ಹಾಸನ ಜಿಲ್ಲೆಯ ಜಾವಗಲ್‌ನವರು. ಎಂಜಿನಿಯರಿಂಗ್‌ನಲ್ಲಿ ಪದವಿ ಗಳಿಸಿರುವ ಇವರು, ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ೧೯೯೧ ರಲ್ಲಿ ಆಡಿದರು. ತಮ್ಮ ಮೊದಲ ಏಕದಿನ ಪಂದ್ಯವನ್ನೂ ಅದೇ ವರ್ಷದಲ್ಲಿ ಆಡಿದರು. ಭಾರತದ ಪಿಚ್‍ಗಳು ಮುಖ್ಯವಾಗಿ ಸ್ಪಿನ್‍ಗೆ ಸಹಾಯ ಮಾಡುವುದರ ಕಾರಣ ಶ್ರೀನಾಥ್‍ರವರ ಬೌಲಿಂಗ್ ಸರಾಸರಿ ಸ್ವಲ್ಪ ಕಡಿಮೆಯಾಗಿದೆ. ತಮ್ಮ ಕ್ರಿಕೆಟ್ ಜೀವನದ ಕೊನೆಯ ವರ್ಷಗಳಲ್ಲಿ ರಿವರ್ಸ್ ಸ್ವಿಂಗ್ ಮೊದಲಾದ ಬೌಲಿಂಗ್ ಶೈಲಿಗಳನ್ನು ಅಳವಡಿಸಿಕೊಂಡ ಶ್ರೀನಾಥ್, ಟೆಸ್ಟ್ ಪಂದ್ಯಗಳಲ್ಲಿ ೨೩೬ ಮತ್ತು ಏಕದಿನ ಪಂದ್ಯಗಳಲ್ಲಿ ೩೧೫ ವಿಕೆಟ್‍ಗಳನ್ನು ಪಡೆದಿದ್ದಾರೆ. ಮೊದಲ ದರ್ಜೆ ಮಟ್ಟದಲ್ಲಿ ೫೦೦ ಕ್ಕೂ ಹೆಚ್ಚು ವಿಕೆಟ್‍ಗಳನ್ನು ಪಡೆದಿದ್ದಾರೆ.

ಭಾರತದ ರಾಷ್ಟ್ರೀಯ ತಂಡದಲ್ಲಿ ಆಡಿರುವುದಲ್ಲದೆ, ಕರ್ನಾಟಕದಿಂದ ರಣಜಿ ಕ್ರಿಕೆಟ್ ಮತ್ತು ಇಂಗ್ಲೆಂಡ್ನ ಕೌಂಟಿ ಕ್ರಿಕೆಟ್ ನಲ್ಲಿ ಗ್ಲೌಸೆಸ್ಟರ್‍ ಶೈರ್ ಮತ್ತು ಲೀಸೆಸ್ಟರ್‍ ಶೈರ್ ತಂಡಗಳ ಪರವಾಗಿಯೂ ಆಡಿದ್ದಾರೆ.

ಕೆಲವೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನವನ್ನೂ ನೀಡುತ್ತಿದ್ದ ಶ್ರೀನಾಥ್ ಏಕದಿನ ಪಂದ್ಯಗಳಲ್ಲಿ "ಪಿಂಚ್ ಹಿಟರ್" ಕೆಲಸವನ್ನು ನಿರ್ವಹಿಸಿರುವುದೂ ಉಂಟು!

ಪ್ರಶಸ್ತಿ /ಪುರಸ್ಕಾರಗಳು[ಬದಲಾಯಿಸಿ]

  • ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 'ಮ್ಯಾಚ್ ರೆಫರಿ' ಎಂದು ಮಾನ್ಯ ಮಾಡಿದೆ.
  • ಅರ್ಜುನ ಪ್ರಶಸ್ತಿ.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]

ಕ್ರಿಕ್ ಇನ್ಫೋ ತಾಣದಲ್ಲಿ ಜಾವಗಲ್ ಶ್ರೀನಾಥ್ ಬಗ್ಗೆ ಮಾಹಿತಿ