ಜಿ.ರಾಜಗೋಪಾಲ್ ಜೋಶಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಭೀಮೇಶ್ವರ ಜೋಶಿ ಅವರ ಕಿರಿಯ ಸಹೋದರ ಜಿ.ರಾಜಗೋಪಾಲ ಜೋಶಿ ಅವರಿಗೆ ಧಾರ್ಮಿಕತೆ ಎಂಬುದು ಜನ್ಮತಃ ಬಂದಿದೆ. .ಪ್ರವೃತ್ತಿಯಾಗಿದ್ದ ನಟನೆಯೇ ಈಗ ವೃತ್ತಿಯಾಗಿದೆ.

ಹಿನ್ನೆಲೆ

ಸರಿಸುಮಾರು ೨೩ ವರ್ಷಗಳ ಹಿಂದೆ ನಡೆದ ಘಟನೆ ಇದು. ಚಿಕ್ಕಮಗಳೂರು ಜಿಲ್ಲೆಯ ಕಳಸ ಎಂಬ ಊರು.ಆ ಊರಿನ ಗೆಳೆಯರೆಲ್ಲಾ ಸೇರಿ ಆ ವರ್ಷದ ದುರ್ಗಾ ಪೆಂಡಾಲ್‌ನಲ್ಲಿ ನಡೆಯುವ ನಾಟಕದಲ್ಲಿ ನೀವು ಅಭಿನಯಿಸಲೇಬೇಕೆಂದು ಇವರನ್ನು ದುಂಬಾಲು ಬಿದ್ದರು.ಸರಿ..ಒತ್ತಡಕ್ಕೆ ಮಣಿದ ಇವರು ದ್ವಂದ್ವಾರ್ಥದ ಪದಗಳನ್ನೆಲ್ಲಾ ಕಿತ್ತು ಹಾಕಿ ಸಂಭಾಷಣೆಯನ್ನು ಸುಂದರಗೊಳಿಸಿ ತಾವೇ ನಿರ್ದೇಶನ ಮಾಡಿ ಅಭಿನಯಿಸಿದರು. ಪ್ರದರ್ಶನ ಯಶಸ್ವಿಯೂ ಆಯಿತು. ಅಂದು ಇವರನ್ನು ಕೈಹಿಡಿದು ರಂಗಭೂಮಿಗೆ ಕರೆತಂದ ಕಲಾದೇವಿ ಇಂದಿಗೂ ಕೈ ಬಿಡಲಿಲ್ಲ. ಇಂದಿನ ಈ ಅಭಿನಯಕ್ಕೆ ಅಂದಿನ ಆಕಸ್ಮಿಕ ರಂಗಪ್ರವೇಶವೇ ಅಡಿಪಾಯ.

ಕಿರುತೆರೆಯ ಪ್ರಮುಖ ಪಾತ್ರಗಳು

ಜವಾಬ್ದಾರಿಯುತ ತಂದೆಯ ಪಾತ್ರಗಳನ್ನು ಮಾಡಿ ಸಮಾಜದಲ್ಲಿ ಮಾದರಿ ತಂದೆಯಾಗುತ್ತಿದ್ದಾರೆ.ಅಭಿನಯದಲ್ಲಿ ಮುಂದೆ ಮುಂದೆ ಸಾಗುತ್ತಾ ನಟನೆಯಲ್ಲೂ ಮಾದರಿಯಾಗುತ್ತಿದ್ದಾರೆ.ಕಲೆಯಲ್ಲಿ ಹೊಂದಬಹುದಾದ ಆನಂದ ಆತ್ಮತೃಪ್ತಿ ಹಣದಲ್ಲಿ ಸಿಗುವುದಿಲ್ಲ ಎಂಬ ಸತ್ಯವನ್ನರಿತು ಹುಟ್ಟು ಶ್ರೀಮಂತಿಕೆಯನ್ನು ಬಿಟ್ಟು ಕಲಾಜೀವನದತ್ತ ಮುಖಮಾಡಿ ಕಲಾವಿದರಾಗಿದ್ದಾರೆ.ಕಳಸದ ಜಿ.ರಾಜಗೋಪಾಲ್ ಜೋಶಿ ಸುವರ್ಣವಾಹಿನಿಯಲ್ಲಿ ಪ್ರಸಾರವಾಗುತ್ತಿರುವ "ಪ್ರೀತಿಯಿಂದ" ಧಾರವಾಹಿಯಲ್ಲಿ ನೀಲ-ಪಚ್ಚೆ ಎಂಬ ಹೆಣ್ಣುಮಕ್ಕಳನ್ನು ತನ್ನೆರಡು ಕಣ್ಣುಗಳಂತೆ ಕಾಪಾಡುತ್ತಿರುವ ಅಪ್ಪಯ್ಯ-ಮಾವಯ್ಯ ಕೃಷ್ಣಪ್ರಸಾದ್.

ಹದಿನೈದು ವರುಷಗಳ ಹಿಂದೆ ಐ.ಟಿ.ಐ ಆನಂದ್ ನಿರ್ದೇಶನದ ನಾಲ್ಕು ಟೆಲಿಚಿತ್ರಗಳಲ್ಲಿ ಅಭಿನಯಿಸಿದ್ದೇ ಮೊದಲ ಅನುಭವ. ನಂತರ ಹಿಂದಿರುಗಿ ನೋಡದ ಇವರು ಕಲಾಪ್ರಪಂಚದ ಆಜೀವ ಸದಸ್ಯತ್ವ ಪಡೆದೇ ಬಿಟ್ಟರು.ನಟನೆ ಜೀವನದ ಅವಿಭಾಜ್ಯ ಅಂಗವಾಯಿತು. ಸೀತೆಯಿಂದ ಕಿರುತೆರೆಗೆ ಪಾದಾರ್ಪಣೆ ಮಾಡಿದ ಇವರು, "ನಂದಗೋಕುಲ"ದಲ್ಲಿ ಮಕ್ಕಳಿಗೆ ಶಿಸ್ತಿನ ಪಾಠ ಹೇಳುವ ತಂದೆ.ಅಪ್ಪನನ್ನು ಕಳೆದುಕೊಂಡ ಎಷ್ಟೊಂದು ಮಂದಿಗೆ ಅಪ್ಪಾಜಿಯ ನೆನಪಿನ ಬುತ್ತಿಯನ್ನು ಮತ್ತೆ ಕಟ್ಟಿಕೊಟ್ಟಿದ್ದಾರೆ.

"ಹೆಳವನ ಕಟ್ಟೆ ಗಿರಿಯಮ್ಮ"ನ ತಂದೆಯ ಪಾತ್ರ ಮಾಡಿದ್ದಾರೆ. ತನ್ನ ಪಾತ್ರಗಳ ಮೂಲಕ ಸಮಾಜಕ್ಕೆ ಸದಾ ಒಳ್ಳೆಯ ಸಂದೇಶವನ್ನು ನೀಡುತ್ತಿರಬೇಕೆನ್ನುವ ಜೋಶಿ "ಮಾಂಗಲ್ಯ" ಧಾರವಾಹಿಯಲ್ಲಿ ನೆಗೆಟಿವ್ ಪಾತ್ರವೊಂದನ್ನು ಅನಿವಾರ್ಯವಾಗಿ ಮಾಡಿ ವ್ಯಥೆಪಟ್ಟು ಕೂಡಲೆ ಅದರಿಂದ ಹೊರಬಂದಿದ್ದಾರೆ.