ಟಿಪ್ಪು ಸುಲ್ತಾನ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Tipu Sultan's forces during the Siege of Srirangapatna.
Cannon used by Tipu Sultan's forces at the battle of Srirangapatna 1799
Tipu Sultan like his father before him, opposed the existence of the Maratha Confederacy.
Tipu Sultan seated on his throne, by ಟೆಂಪ್ಲೇಟು:Ill
Tipu Sultan's summer palace at Srirangapatna, Karnataka

ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟೀಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟೀಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.

ಇತಿವೃತ್ತ

ಇಮ್ಮಡಿ ಕೃಷ್ಣರಾಜ ಒಡೆಯರ್ ಮರಣದ ನಂತರ, ಹೈದೆರ್ ಅಲಿ, ಮೈಸೂರು ಸೇನೆಯ ಮಹಾದಂಡನಾಯಕ, ಪ್ರಾಂತದ ಅಧಿಕಾರವನ್ನು ವಹಿಸಿಕೊಂಡ, ಹೈದರ್ ಅಲಿಯ ಮರಣದ ನಂತರ ಆಳ್ವಿಕೆ ಅವನ ಪುತ್ರ ಟೀಪು ಸುಲ್ತಾನನನಿಗೆ ಸಿಕ್ಕಿತು. ಮೈಸೂರಿನ ಹುಲಿ ಎಂದೇ ಪ್ರಖ್ಯಾತವಾದ ಟೀಪು ಸುಲ್ತಾನ್, ದಕ್ಷಿಣ ಭಾರತದಲ್ಲಿ ಯುರೋಪಿಯನ್ ವಿಸ್ತರಣೆ ತಡೆಗಟ್ಟಲು, ನಾಲ್ಕು ಯುದ್ದಗಳನ್ನು ಮಾಡಿದ ಅಂಗ್ಲೋ-ಮೈಸೂರು ಯುದ್ದಗಳು, ಕೊನೆಯದರಲ್ಲಿ ಅವನು ಮರಣವನ್ನಪ್ಪಿದ ಹಾಗು ಮೈಸೂರು ರಾಜ್ಯ ಬ್ರಿಟಿಷ್ ರಾಜ್ಯ ಏಕೀಕರಣವಾಯಿತು.[೧]ಟೀಪು ಸೇನಾ ತಂತ್ರಗಳನ್ನು ತನ್ನ ತಂದೆ, ಹೈದರಾಲಿಯೊಂದಿಗೆ ಇದ್ದ ಫ್ರೆಂಚ್ ಅಧಿಕಾರಿಗಳಿಂದ ಪಡೆದನು. ೧೭೬೭ ರ ಕರ್ನಾಟಕ ಯುದ್ಧದಲ್ಲಿ ಒಂದು ಅಶ್ವದಳದ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದನು. ಸೇನಾನಾಯಕನಾಗಿ ಟೀಪು ಪ್ರಸಿದ್ದಿ ಪಡೆದದ್ದು ೧೭೭೫-೭೯ ರ ಆಂಗ್ಲೋ-ಮರಾಠಾ ಯುದ್ಧದಲ್ಲಿ. ೧೫ನೆಯ ವಯಸ್ಸಿನಲ್ಲಿ ತನ್ನ ತಂದೆ ಹೈದರಾಲಿಯ ಜೊತೆ ಪ್ರಥಮ ಮೈಸೂರು ಯುದ್ಧದಲ್ಲಿ ಭಾಗವಹಿಸಿ, ಒಂದು ದೊಡ್ಡ ಸೇನಾ ತುಕಡಿಯ ನಾಯಕನಾಗಿ ೧೭೮೨ರ ಫೆಬ್ರವರಿಯಲ್ಲಿ ಆಂಗ್ಲ ಸೇನಾನಾಯಕ ಬ್ರಾತ್‍ವೈಟ್‍ನನ್ನು ಸೋಲಿಸಿದನು. [೨]

ಬಾಲ್ಯ

ಟೀಪ್ಪು ಸುಲ್ತಾನ್ ಹುಟ್ಟಿದ್ದು (೨೦ ನವಂಬರ್ ೧೭೫೦), ಇಂದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (ಬೆಂಗಳೂರು ನಗರದಿಂದ ಸುಮಾರು ೩೩ ಕಿ.ಮೀ. ದೂರ)

ವ್ಯಕ್ತಿತ್ವ

ಟೀಪು ತನ್ನನ್ನು ನಾಗರಿಕ ಟೀಪು ಸುಲ್ತಾನ್ ಎಂದು ಕರೆದುಕೊಳ್ಳುತ್ತಿದ್ದ. ಆ ಕಾಲದ ಇತರ ಯಾವುದೇ ಸಾಮ್ರಾಜ್ಯಶಾಹಿ ಅಥವಾ ಸ್ವಾತಂತ್ರ್ಯಪೂರ್ಣ ವಿಚಾರಗಳನ್ನು ಒಪ್ಪದ ರಾಜರ ಅಭಿಪ್ರಾಯಗಳಿಗೆ ಇದು ಸಂಪೂರ್ಣ ವಿರುದ್ಧವಾದದ್ದು. ಅನೇಕ ಹಿಂದೂ ದೇವಾಲಯಗಳಿಗೆ ದಾನ ದತ್ತಿಗಳನ್ನು ಕೊಟ್ಟಿದ್ದನು.

ಸಾಧನೆ

 1. ಬ್ರಿಟಿಷರೊಂದಿಗೆ ಹೋರಾಡಿದನು.
 2. ಬ್ರಿಟಿಷರೊಂದಿಗೆ ಹೋರಾಡಲು ನೆಪೋಲಿಯನ್ನನ ನೆರವನ್ನು ಪಡೆಯಲು ಪ್ರಯತ್ನಿಸಿದನು.
 3. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ ಪರಿಚಯಿಸಿದ ಮೊದಲ ವ್ಯಕ್ತಿ.
 4. ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು ಪರಿಚಯಿಸಿದನು.
 5. ಕುಣಿಗಲ್‍‍ನಲ್ಲಿ ಕುದುರೆ ಫಾರಂ ಸ್ಥಾಪಿಸಿದನು.

ಯುದ್ಧಗಳು

ಒಂದನೆಯ ಮೈಸೂರು ಯುದ್ಧ (೧೭೬೬-೧೭೬೯)

ಮೈಸೂರು ರಾಜ್ಯಕ್ಕೂ ಬ್ರಿಟೀಷರಿಗೂ ನಡೆದ ಯುದ್ಧ. ಈ ಯುದ್ಧ ಸರಣಿಯಲ್ಲಿ ಮೊದಲನೆಯದು. ಮೈಸೂರಿನ ಆಡಳಿತಾಧಿಕಾರಿ ಹೈದರಾಲಿಯ ಚಟುವಟಿಕೆಗಳನ್ನು ಮದರಾಸು ಪ್ರಾಂತದ ಬ್ರಿಟೀಷರು ಗಂಭೀರವಾಗಿ ಪರಿಗಣಿಸಿದರು. ೧೭೬೬ರಲ್ಲಿ ಬ್ರಿಟೀಷರು ಹೈದರಾಬಾದಿನ ನಿಜಾಮನೊಂದಿನ ಒಪ್ಪಂದ ಮಾಡಿಕೊಂಡು, ಅದರ ಪ್ರಕಾರ, ತಮ್ಮಿಬ್ಬರ ಸಮಾನ ಶತ್ರುವಾಗಿದ್ದ ಹೈದರಾಲಿಯ ವಿರುದ್ಧ ಬಳಸಲಿಕ್ಕಾಗಿ ಸೈನ್ಯವನ್ನು ಪೂರೈಸಿದರು. ಆದರೆ, ಈ ಒಪ್ಪಂದವಾದ ಸ್ವಲ್ಪ ಸಮಯದಲ್ಲಿಯೇ, ಹೈದರಾಲಿ ಮತ್ತು ನಿಜಾಮ ರಹಸ್ಯ ಒಪ್ಪಂದಕ್ಕೆ ಬಂದು, ಬ್ರಿಟೀಷರ ಕರ್ನಲ್ ಸ್ಮಿತ್‍ನ ಸಣ್ಣ ಸೇನೆಯ ಮೇಲೆ ತಮ್ಮ ಒಕ್ಕೂಟದ ೫೦,೦೦೦ ಸಿಪಾಯಿಗಳು ಮತ್ತು ೧೦೦ ತುಪಾಕಿಗಳ ಸೇನೆಯನ್ನು ನುಗ್ಗಿಸಿದರು. ಸಂಖ್ಯೆಯಲ್ಲಿ ಸಣ್ಣದಿದ್ದರೂ, ಬ್ರಿಟೀಷ್ ಪಡೆಗಳು,ಶಿಸ್ತು ಮತ್ತು ಉತ್ತಮ ತರಬೇತಿಯಿಂದಾಗಿ, ಒಕ್ಕೂಟದ ಸೇನೆಯನ್ನು ಮೊದಲು ಚೆಂಗಮ್ ಎಂಬಲ್ಲಿಯೂ ( ಸೆಪ್ಟೆಂರ್‍ ೩, ೧೭೬೭)ಮತ್ತೆ , ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ, ತಿರುವಣ್ಣಾಮಲೈಯಲ್ಲಿಯೂ ಹಿಮ್ಮೆಟ್ಟಿಸಿದರು. ಪಶ್ಚಿಮ ತೀರದ ತನ್ನ ನವೀನ ನೌಕಾಪಡೆ ಮತ್ತು ಕೋಟೆಗಳನ್ನು ಕಳೆದುಕೊಂಡ ನಂತರ ಹೈದರಾಲಿಯು ಸಂಧಾನಕ್ಕೆ ಬಂದನು. ಈ ಸಂಧಾನದ ಕೋರಿಕೆ ತಿರಸ್ಕೃತವಾಗಲು, ಹೈದರಾಲಿಯು ತನ್ನೆಲ್ಲ ಅಳಿದುಳಿದ ಸೈನ್ಯವನ್ನು ಒಗ್ಗೂಡಿಸಿ ಬ್ರಿಟೀಷರ ಮೇಲೇರಿ ಹೋದನು. ಕರ್ನಲ್ ಸ್ಮಿತ್ ಬೆಂಗಳೂರಿಗೆ ಹಾಕಿದ್ದ ಮುತ್ತಿಗೆಯನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ್ದಲ್ಲದೆ, ತನ್ನ ಸೇನೆಯೊಡನೆಮದರಾಸು ನಗರದ ಐದು ಮೈಲಿಯಷ್ಟು ಸಮೀಪದವರೆಗೂ ಬಂದು ತಲುಪಿದನು. ಈ ಯುದ್ಧದ ಪರಿಣಾಮವಾಗಿ ಏಪ್ರಿಲ್ ೧೭೬೯ರಲ್ಲಿ, ಎರದೂ ಪಕ್ಷಗಳೂ ತಾವು ಆಕ್ರಮಿಸಿದ ಪ್ರದೇಶಗಳನ್ನು ವಾಪಸು ಮಾಡಬೇಕೆಂದು ಮತ್ತು ಯುದ್ಧಗಳಲ್ಲಿ ಪರಸ್ಪರರ ಸಹಾಯಕ್ಕೆ ಬರುವಂತೆಯೂ ಒಪ್ಪಂದವಾಯಿತು. ಈ ಒಪ್ಪಂದವನ್ನು "ಮದ್ರಾಸ್ ಒಪ್ಪಂದ" ಎಂದು ಕರೆಯುತ್ತಾರೆ.

ಎರಡನೆಯ ಮೈಸೂರು ಯುದ್ಧ (೧೭೮೦-೧೭೮೪)

ಮೈಸೂರು ಸಂಸ್ಥಾನಕ್ಕೂ ಬ್ರಿಟಷರಿಗೂ ನಡೆದ ಯುದ್ಧದ ಸರಣಿಯಲ್ಲಿ ಎರಡನೆಯದು. ಅಮೆರಿಕದಲ್ಲಿ ನಡೆಯುತ್ತಿದ್ದ ಕ್ರಾಂತಿಕಾರಿ ಹೋರಾಟದ ಫಲವಾಗಿ ಬ್ರಿಟಷರು ಮತ್ತು ಫ್ರೆಂಚರ ನಡುವೆ ನಡೆದ ಕದನದ ಸುಳಿಯಲ್ಲಿ ಫ್ರೆಂಚರ ಸ್ನೇಹದಲ್ಲಿದ್ದ ಮೈಸೂರು ಕೂಡಾ ಸಿಕ್ಕಿತು. ಆ ಕಾಲದಲ್ಲಿ ಮೈಸೂರನ್ನು ಆಳುತ್ತಿದ್ದವನು ( ರಾಜಾ ಎಂಬ ಗೌರವನಾಮ ಇಲ್ಲದಿದ್ದರೂ) ಹೈದರ್‍ ಆಲಿ. ಹಿಂದೊಮ್ಮೆ ಮರಾಠರ ವಿರುದ್ಧದ ಯುದ್ಧದಲ್ಲಿ ಬ್ರಿಟಿಷರ ವಿಶ್ವಾಸಘಾತುಕತನವನ್ನು ಕಂಡು ಕಿಡಿಕಿಡಿಯಾಗಿದ್ದ ಹೈದರ್‍ ಆಲಿ ಬ್ರಿಟಿಷರೊಂದಿಗೆ ಸೇಡು ತೀರಿಸಿಕೊಳ್ಳಲು, ಫ್ರೆಂಚರ ಸಹಾಯಕ್ಕೆ ಒಮ್ಮನಸ್ಸಿನಿಂದ ಧುಮುಕಿದ. ೧೭೭೮ರಲ್ಲಿ ಬ್ರಿಟನ್ ಮೇಲೆ ಯುದ್ಧ ಸಾರಿದಾಗ, ಈಗಾಗಲೇ ಮದರಾಸಿನಲ್ಲಿ ಬಲವಾಗಿ ಬೇರುಬಿಟ್ಟಿದ್ದ ಬ್ರಿಟೀಷರು ,ಫ್ರೆಂಚರನ್ನು ಭಾರತದಿಂದ ಓಡಿಸುವ ಪಣ ತೊಟ್ಟರು. ಮಲಬಾರ್‍ ತೀರದ ಮಾಹೆಯನ್ನು ಗೆದ್ದುಕೊಂಡ ಬ್ರಿಟೀಷರು, ಹೈದರನ ಆಶ್ರಿತನೊಬ್ಬನ ಕೆಲ ಭೂಭಾಗಗಳನ್ನೂ ಸ್ವಾಧೀನಕ್ಕೆ ತೆಗೆದುಕೊಂಡರು. ಸೇಡು ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದ ಹೈದರಾಲಿಯು, ಮರಾಠರು ತನ್ನಿಂದ ಕಿತ್ತುಕೊಂಡ ಪ್ರದೇಶಗಳನ್ನು ಮರುಪಡೆಯುವುದರಲ್ಲಿ ಯಶಸ್ವಿಯಾದನು. ಕೃಷ್ಣಾ ನದಿಯವರೆಗ ಹರಡಿದ್ದ ತನ್ನ ರಾಜ್ಯದಿಂದ , ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ರಾಮಗಳ ಮದ್ಯೆ , ಕಣಿವೆ, ಘಟ್ಟಗಳನ್ನು ಬಳಸಿಕೊಂಡು,ಮದರಾಸಿನಿಂದ ಕೇವಲ ೪೫ ಮೈಲಿ ( ೭೨ ಕಿ.ಮೀ.) ದೂರದ ಕಾಂಜೀವರವನ್ನು ಒಂದಷ್ಟೂ ಪ್ರತಿರೋಧವಿಲ್ಲದೆ ತಲುಪಿದನು. ಮದರಾಸಿನ ಸೈಂಟ್ ಥಾಮಸ್ ಮೌಂಟಿನಲ್ಲಿ ೫೨೦೦ ಸೈನಿಕರೊಂದಿಗೆ ಬೀಡುಬಿಟ್ಟಿದ್ದ , ಸರ್‍ ಹೆಕ್ಟರ್‍ ಮನ್ರೋಗೆ ಬೆಂಕಿಯ ಜ್ವಾಲೆಗಳು ಕಾಣಿಸಿದ ನಂತರವೇ ಬ್ರಿಟೀಷರ ಪ್ರತಿಕ್ರಿಯೆಗೆ ಚಾಲನೆ ಸಿಕ್ಕಿತು. ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ ಕಾದಾಡಿದರೂ, ಬೈಲಿಯ ೨೮೦೦ ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ ೧೭೮೦ರ ಸೆಪ್ಟೆಂಬರ್‍ ೧೦, 1982ರಲ್ಲಿ ಹೈದರಾಲಿ ಬೆನ್ನುಮೊಳೆ ರೋಗದಿಂದ ಮರಣ ಹೊಂದಿದನು. 1984ರಲ್ಲಿ ಮಂಗಳೂರು ಒಪ್ಪಂದದೊಂದಿಗೆ ಯುದ್ದ ಮುಕ್ತಾಯವಾಯಿತು.

ಮೂರನೆಯ ಮೈಸೂರು ಯುದ್ಧ (೧೭೮೯-೧೭೯೨)

ಮೈಸೂರು ರಾಜ್ಯಕ್ಕೂ ಬ್ರಿಟಿಷರಿಗೂ ನಡೆದ ಯುದ್ಧ. ನಾಲ್ಕು ಬಾರಿ ನಡೆದ ಯುದ್ಧ ಸರಣಿಯಲ್ಲಿ ಇದು ಮೂರನೆಯದು. ಫ್ರೆಂಚರೊಂದಿಗೆ ಮೈತ್ರಿಯಿದ್ದ ಮೈಸೂರಿನ ರಾಜ ಟಿಪ್ಪು ಸುಲ್ತಾನನು ಬ್ರಿಟಿಷ್ ಅಧೀನದಲ್ಲಿದ್ದ ಟ್ರಾವಂಕೂರಿನ ಮೇಲೆ ೧೭೮೯ರಲ್ಲಿ ದಂಡೆತ್ತಿ ಹೋದನು. ಆಗ ಪ್ರಾರಂಭವಾದ ಯುದ್ಧ ಮುಂದಿನ ಮೂರು ವರ್ಷಗಳವರೆಗೆ ಮುಂದುವರೆದು ಟಿಪ್ಪೂ ಸುಲ್ತಾನನ ಪರಾಭವದೊಂದಿಗೆ ಪರ್ಯವಸಾನಗೊಂಡಿತು. ತಮ್ಮದೇ ದೇಶದ ಫ್ರೆಂಚ್ ಕ್ರಾಂತಿಯನ್ನು ಎದುರಿಸುವುದರಲ್ಲಿ ಮಗ್ನರಾದ ಫ್ರೆಂಚರು, ಬ್ರಿಟಿಷರ ನೌಕಾದಳದಿಂದಲೂ ಹಿಮ್ಮೆಟ್ಟಿಸಲ್ಪಟ್ಟುದರಿಂದ, ಟಿಪ್ಪು ಸುಲ್ತಾನನ ನಿರೀಕ್ಷೆಯಂತೆ ಬೆಂಬಲ ನೀಡಲಿಲ್ಲ. ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಟಿಪ್ಪುವು ತನ್ನ ರಾಜ್ಯದ ಕೆಲ ಭಾಗಗಳನ್ನು ಬ್ರಿಟಿಷರ ಬೆಂಬಲಿಗರೋ, ಏಜಂಟರೋ ಆಗಿದ್ದ ಮರಾಠರು, ಹೈದರಾಬಾದಿನ ನಿಜಾಮ ಮತ್ತು ಮದ್ರಾಸ್ ಪ್ರೆಸಿಡೆನ್ಸಿಗಳವರಿಗೆ ಹಂಚಿಕೊಡಬೇಕಾಗಿ ಬಂದು, ಇದರಿಂದ ಮೈಸೂರು ರಾಜ್ಯದ ವಿಸ್ತೀರ್ಣ ತೀವ್ರವಾಗಿ ಕುಸಿಯಿತು. ಮಲಬಾರ್‍, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಹೋದವು. ಈ ಯುದ್ಧದ ಕೊನೆಯಲ್ಲಿ ಶ್ರೀರಂಗಪಟ್ಟಣದ ಒಪ್ಪಂದವಾಗಿ, ಅದರ ಪ್ರಕಾರ ಟಿಪ್ಪು ತನ್ನ ಅರ್ಧ ರಾಜ್ಯವನ್ನು ಬ್ರಿಟಿಷರಿಗೆ ಒಪ್ಪಿಸಿದ್ದಷ್ಟೇ ಅಲ್ಲದೇ, ತನ್ನಿಬ್ಬರು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಡಬೇಕಾಗಿ ಬಂದಿತು.

ನಾಲ್ಕನೆಯ ಮೈಸೂರು ಯುದ್ಧ (೧೭೯೮ – ೧೭೯೯)

ಬ್ರಿಟೀಶರಿಗೂ ಮೈಸೂರು ರಾಜ್ಯಕ್ಕೂ ನಡೆದ ಯುದ್ಧ ಸರಣಿಯಲ್ಲಿ ನಾಲ್ಕನೆಯ ಹಾಗೂ ಕಡೆಯ ಯುದ್ಧ. ಆಗಿನ ಬ್ರಿಟೀಶ್ ಈಸ್ಟ್ ಇಂಡಿಯಾ ಕಂಪನಿಯ ಗವರ್ನರ್ ಜನರಲ್ ಪದವಿಯು ಲಾರ್ಡ್ ಕಾರ್ನವಾಲೀಸನಿಂದ ಜನರಲ್ ಹ್ಯಾರಿಸನಿಗೆ ಹಸ್ತಾಂತರಗೊಂಡಿತ್ತು. ೧೭೯೮ರಲ್ಲಿ ನೆಪೋಲಿಯನ್, ಭಾರತವನ್ನು ಹೆದರಿಸುವ ಉದ್ದೇಶದಿಂದ, ಈಜಿಪ್ಟಿನಲ್ಲಿ ಬಂದಿಳಿದ. ಈ ಉದ್ದೇಶ ಸಾಧನೆಗೆ, ಫ್ರಾನ್ಸಿನ ಮಿತ್ರನಾಗಿದ್ದ, ಮೈಸೂರಿನ ದೊರೆ ಟಿಪ್ಪು ಸುಲ್ತಾನ ಮುಖ್ಯವಾಗಿದ್ದ. ಹೊರಾಷಿಯೋ ನೆಲ್ಸನ್ನನು ನೆಪೋಲಿಯನ್ನನನ್ನು ನೈಲ್ ಯುದ್ಧದಲ್ಲಿ ಸೋಲಿಸಿ, ಈ ಆಸೆಯನ್ನು ಭಂಗಗೊಳಿಸಿದರೂ, ಮೂರು ಸೇನೆಗಳು ( ಒಂದು ಬಾಂಬೆ, ಎರಡು ಬ್ರಿಟೀಶ್ ) ಅಷ್ಟಕ್ಕೆ ನಿಲ್ಲದೆ ಮುನ್ನುಗ್ಗಿ ೧೭೯೯ರಲ್ಲಿ ಮೈಸೂರಿನ ರಾಜಧಾನಿ ಶ್ರೀರಂಗಪಟ್ಟಣಕ್ಕೆ ಮುತ್ತಿಗೆ ಹಾಕಿದವು. ಮೇ ನಾಲ್ಕರಂದು ಈ ಸೇನೆಗಳು ಕೋಟೆಯ ಭಾಗವೊಂದನ್ನು ಭಗ್ನಮಾಡಿ, ಒಳನುಗ್ಗತೊಡಗಿದರು. ಅಲ್ಲಿಗೆ ಧಾವಿಸಿದ ಟಿಪ್ಪು ಸುಲ್ತಾನ ಗುಂಡೇಟಿನಿಂದ ಅಸುನೀಗಿದ. ಈ ಕಾರ್ಯದಲ್ಲಿ ಟಿಪ್ಪುವಿನ ಸೇನಾಧಿಕಾರಿ ಮೀರ್ ಸಾದಕ್ ಎಂಬಾತ, ಬ್ರಿಟೀಷರೊಂದಿಗೆ ಶಾಮೀಲಾಗಿ, ಟಿಪ್ಪುವಿಗೆ ಎರಡು ಬಗೆದನು. ಯುದ್ಧದ ತೀವ್ರವಾಗಿದ್ದ ಸಮಯದಲ್ಲಿ ಮೀರ್ ಸಾದಕನು, ತನ್ನ ಸೇನಾ ತುಕಡಿಯನ್ನು ಸಂಬಳ ಪಡೆದುಕೊಳ್ಳಲು ಕಳುಹಿಸಿ, ಆ ಮೂಲಕ, ಬ್ರಿಟೀಷರು ಗೋಡೆ ಒಡೆದು ಒಳಬರಲು ಅನುವುಮಾಡಿಕೊಟ್ಟನು. ಅಷ್ಟೇ ಅಲ್ಲ, ನೆಲಮಾಳಿಗೆಯಲ್ಲಿ ಶೇಖರಿಸಿದ್ದ ಮದ್ದುಗುಂಡುಗಳ ಮೇಲೆ ನೀರು ಹೊಯ್ದು, ಅವು ನಿರುಪಯುಕ್ತವಾಗುವಂತೆ ಮಾಡಿದನು. ಈ ಯುದ್ಧದಲ್ಲಿ ಟಿಪ್ಪು ಸುಲ್ತಾನನು ರಾಕೆಟ್ಟುಗಳ ಉಪಯೋಗ ಮಾಡಿದ್ದು ಗಮನಾರ್ಹವಾಗಿತ್ತು. ಮೂರನೆಯ ಮತ್ತು ನಾಲ್ಕನೆಯ ಮೈಸೂರು ಯುದ್ಧಗಳಲ್ಲಿ ಈ ರಾಕೆಟ್ಟುಗಳ ಪರಿಣಾಮದಿಂದ ಪ್ರಭಾವಿತನಾದ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟ್ಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಮೈಸೂರು ಬ್ರಿಟೀಷರ ವಶಕ್ಕೆ ಬಂದಿತು. ಒಡೆಯರ್ ವಂಶಕ್ಕೆ ಮರಳಿ ಅಧಿಕಾರ ದೊರೆತು, ಅವರಿಗೆ ಸಲಹಾಕಾರರಾಗಿ ಬ್ರಿಟೀಷ್ ಕಮೀಷನರು ನೇಮಿಸಲ್ಪಟ್ಟರು. ಟಿಪ್ಪುವಿನ ಎಳೆಯ ಮಗ ಮತ್ತು ಉತ್ತರಾಧಿಕಾರಿ ಫತೇ ಆಲಿಯನ್ನು ಗಡೀಪಾರು ಮಾಡಲಾಯಿತು. ಮೈಸೂರು ರಾಜ್ಯವು ಬ್ರಿಟೀಷ್ ಅಧೀನ ಸಂಸ್ಥಾನವಾಯಿತು. ಕೊಯಮತ್ತೂರು, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬ್ರಿಟೀಷ್ ಭಾರತದ ಭಾಗವಾದವು.

ಟಿಪ್ಪು ಕುರಿತ ಕೃತಿಗಳು

‘ಅಪ್ರತಿಮ ದೇಶಭಕ್ತ ಟೀಪುಸುಲ್ತಾನ್’

ಕನ್ನಡದ ಹಿರಿಯ ಲೇಖಕರಾದ ಕೋ. ಚೆನ್ನಬಸಪ್ಪ ಅವರು ಸಂಗ್ರಹಿಸಿ, ಸಂಪಾದನೆ ಮಾಡಿರುವ ಕೃತಿ ‘ಅಪ್ರತಿಮ ದೇಶಭಕ್ತ ಟೀಪುಸುಲ್ತಾನ್’. ಈ ಕೃತಿ ಸಂಶೋಧನೆಗೆ ಸಂಬಂಧಪಟ್ಚಿರುವುದು. ಆದುದರಿಂದಲೇ, ಇದರಲ್ಲಿ ಲೇಖಕರಾಗಿ ಗುರುತಿಸಿಕೊಳ್ಳದೆ, ಈ ಸಂಶೋಧನೆಯ ಹಿಂದಿರುವ ದಾಖಲೆಗಳಿಗೆ ಲೇಖಕರು ಕೃತಜ್ಞತೆ ಸಲ್ಲಿಸಿದ್ದಾರೆ. ಟೀಪು ಸುಲ್ತಾನ್‌ನ ಕುರಿತಂತೆ ರಾಜಕೀಯ ಕಾರಣಗಳಿಗೆ ಅಪಪ್ರಚಾರ ಮಾಡುತ್ತಿರುವ ಸಂಚುಗಳನ್ನು ಈ ಕೃತಿ ಬಯಲಿಗೆಳೆಯುತ್ತದೆ. ಟೀಪು ಸುಲ್ತಾನ್ ತನ್ನ ಬದುಕಿನುದ್ದಕ್ಕೂ ಹೇಗೆ ‘ರಾಜಧರ್ಮ’ವನ್ನು ಪಾಲಿಸಿದ್ದ ಎನ್ನುವ ಸತ್ಯವನ್ನು ಈ ಕೃತಿ ತೆರೆದಿಡುತ್ತದೆ. ದಿ. ತೀ. ತಾ. ಶರ್ಮಾರ ಗ್ರಂಥವನ್ನು ಮುಂದಿಟ್ಟುಕೊಂಡು ಟಿಪ್ಪು ಸುಲ್ತಾನ್ ಹೇಗೆ ಮರಾಠರು ಸೇರಿದಂತೆ ಅನ್ಯರಿಂದ ಕನ್ನಡದ ಹಿಂದೂಗಳಿಗೆ ತೊಂದರೆಯಾದಾಗ ಅವರ ರಕ್ಷಣೆಗೆ ಧಾವಿಸಿದ ಎನ್ನುವುದನ್ನು ಮೊದಲ ಅಧ್ಯಾಯದಲ್ಲಿ ದಾಖಲಿಸುತ್ತಾರೆ. ಅಷ್ಟೇ ಅಲ್ಲ, ಟಿಪ್ಪು ಅಪ್ಪಟ ದೇಶಭಕ್ತ ಎನ್ನುವುದನ್ನು ದಾಖಲೆಗಳ ಸಹಿತ ಕೃತಿಯಲ್ಲಿ ನಿರೂಪಿಸುತ್ತಾರೆ. ಟೀಪು ತನ್ನ ಆಳ್ವಿಕೆಯಲ್ಲಿ ರೈತರಿಗೆ, ದಲಿತರಿಗೆ ಹೇಗೆ ನೆರವಾದ ಎನ್ನುವ ಅಂಶವೂ ಈ ಕೃತಿಯಲ್ಲಿದೆ. ಹಾಗೆಯೇ ಟೀಪುವಿನ ಕುರಿತಂತೆ ಹರಡಿರುವ ‘ಮತಾಂತರ’ದ ಹಿಂದಿರುವ ರಾಜಕೀಯ ಏನು ಎನ್ನುವುದನ್ನು ಈ ಕೃತಿ ತೆರೆದಿಡುತ್ತದೆ. ‘ಬ್ರಿಟಿಷರಿಗೆ ನೆರವಾದವರ ಕತೆ’ ಇದರ ಕೊನೆಯ ಅಧ್ಯಾಯ. ಈ ಅಧ್ಯಾಯ ನಿಜವಾದ ದೇಶದ್ರೋಹಿಗಳು ಮತ್ತು ದೇಶಪ್ರೇಮಿಗಳು ಯಾರು ಎನ್ನುವ ಬೆಚ್ಚಿ ಬೀಳು ಸತ್ಯವನ್ನು ಹೇಳುವ ಪ್ರಯತ್ನ ಮಾಡುತ್ತದೆ. ಟಿಪ್ಪುವಿನ ದುರಂತಕ್ಕೆ ಕಾರಣರಾದ ದೇಶದ್ರೋಹಿಗಳನ್ನು ಈ ಅಧ್ಯಾಯ ತೆರೆದಿಡುತ್ತದೆ. ರಾಜಕೀಯ ವಿರೋಧಿಗಳನ್ನು ಟಿಪ್ಪು ಹಿಂಸಿಸಿರಬಹುದು. ಅದು ಅಂದಿನ ರಾಜಕೀಯ ಕಾಲಘಟ್ಟದಲ್ಲಿ ಅನಿವಾರ್ಯ. ಆದರೆ ಧರ್ಮದ ಹೆಸರಿನಲ್ಲಿ ಎಂದೂ ಟಿಪ್ಪು ಸುಲ್ತಾನ್ ಯಾರನ್ನೂ ಬೆದರಿಸಿರಲಿಲ್ಲ. ಜೊತೆಗೆ ಅವನು ಜಾತ್ಯತೀತನಾಗಿ ತನ್ನ ಕರ್ತವ್ಯವನ್ನು ಪಾಲಿಸಿದ ಎನ್ನುವುದನ್ನು ಈ ಕೃತಿ ಹೇಳುತ್ತದೆ. ನವಕರ್ನಾಟಕ ಪ್ರಕಾಶನ ಈ ಕೃತಿಯನ್ನು ಹೊರತಂದಿದೆ. ಮುಖಬೆಲೆ 40 ರೂ.[೩][೪]

ಧಾರಾವಾಹಿಯಾಗಿ

ಗಿದ್ವಾನಿಯವರ - 'ದಿ ಸ್ವೋರ್ಡ್ ಆಫ್ ಟೀಪು ಸುಲ್ತಾನ್ ' ಎಂಬ ಕೃತಿಯು ಹಿಂದಿಯಲ್ಲಿ ಪ್ರಸಿದ್ದವಾಗಿದೆ. ಈ ಕೃತಿಯಲ್ಲಿ ಟೀಪ್ಪು ಒಬ್ಬ ಅಪ್ರತಿಮ ದೇಶಪ್ರೇಮಿ ಎಂಬಂತೆ ಚಿತ್ರಿಸಲಾಗಿದೆ. ಇದು ಹಿಂದಿ ಧಾರವಾಹಿಯಾಗಿಯೂ ಪ್ರಸಿದ್ದಿ ಪಡೆದಿತ್ತು. ಸಂಜಯಖಾನ್ ಎಂಬ ನಟ ಟೀಪ್ಪುವಿನ ಪಾತ್ರ ಮಾಡಿದ್ದನು. ಆ ಧಾರವಾಹಿಯ ಸಂದರ್ಭದಲ್ಲಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬೆಂಕಿ ಅಪಘಾತಕ್ಕೆ ಒಳಗಾಗಿ, ಅಪಾರ ಸಾವು-ನೋವು ಸಂಭವಿಸಿತ್ತು.

ವಿವಾದ

 • ಕರ್ನಾಟಕದ ಸಚಿವ ಡಿ.ಎಚ್.ಶಂಕರಮೂರ್ತಿ ಅವರು ನೀಡಿದ 'ಟೀಪ್ಪು ಕನ್ನಡ ವಿರೋಧಿ' ಎಂಬ ಹೇಳಿಕೆ ಟೀಪ್ಪು ಕುರಿತ ವಿವಾದಗಳನ್ನು ಕೆಣಕಿತು.
General Lord Cornwallis, receiving two of Tipu Sultan's sons as hostages in the year 1793.
In his attempts to junction with Tipu Sultan, Napoleon annexed Ottoman Egypt in the year 1798.
 • ಗಿರೀಶ್ ಕಾರ್ನಾಡ್ ಅವರು ಟಿಪ್ಪು ದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಾ "ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬಹುದಿತ್ತು" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಯಿತು.




ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ

 • ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಲಿ ಮತ್ತು ಆ ದಿವಸವನ್ನು ರಾಷ್ಟ್ರೀಯ ರಜಾ ದಿನವೆಂದು ಘೋಸಿಸಬೇಕೆಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ‍್ ಇಂದಿಲ್ಲಿ ಹೇಳಿದರು. ಅವರು ಇಲ್ಲಿ ಇಂದು ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್‍ರ ೨೬೩ನೆಯ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಅಭಿಪ್ರಾಯಪಟ್ಟರು. ಟೀಪು ಸುಲ್ತಾನ್ ಅತಿ ದೊಡ್ಡ ದೇಶ ಭಕ್ತ ಮತ್ತು ನಮ್ಮ ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ಬಿಟ್ಟರು. ಆದರೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಹುತಾತ್ಮನ ದೇಶ ಭಕ್ತಿಯನ್ನು ನಿರ್ಲಕ್ಷಿಸಿದ್ದಾರೆ. ಟೀಪು ಸುಲ್ತಾನ್ ರ ಪ್ರತಿಮೆಯನ್ನು ಸಂಸತ್ತಿನ ಮತ್ತು ವಿಧಾನ ಸಭೆಯ ಎದುರುಗಡೆ ಸ್ಥಾಪಿಸಬೇಕೆಂದು ಅವರು ಅಭಿಪ್ರಾಯ ಪಟ್ಟರು. ಟಿಪ್ಪುವಿನ ಹಲವಾರು ಐತಿಹಾಸಿಕ ಸ್ಥಳಗಳು ಇಂದು ನಿರ್ಲಕ್ಶಕ್ಕೊಳಗಾಗಿದೆ. ಅವುಗಳಿಗೆ ಯಾವುದೊಂದು ರಕ್ಷಣೆಯನ್ನು ಸರಕಾರ ಒದಗಿಸಿಲ್ಲ. ಇದಕ್ಕೆ ಎರಡು ಸರಕಾರಗಳ ನಿರ್ದಾಕ್ಷಣ್ಯವೆ ಸಾಕ್ಷಿ. ಆದುದರಿಂದ ಈ ಕೂಡಲೇ ಸರಕಾರಗಳು ಎಚ್ಚೆತ್ತು ಟಿಪ್ಪುವಿನ ಐತಿಹಾಸಿಕ ಸ್ಮಾರಕಾಗಳಿಗೆ ರಕ್ಷಣೆ ಕೊಡಬೇಕೆಂದು ಹೇಳಿದರು [೫]
 • ಇತ್ತೀಚೆಗೆ ನಡೆದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗಲಭೆಯಾಗಿ ಇಬ್ಬರು ಸಾವನ್ನಪ್ಪಿದರು.

ಇವನ್ನೂ ಓದಿ

ಟಿಪ್ಪು_ಸುಲ್ತಾನ್

ಹೊರಗಿನ ಸಂಪರ್ಕಗಳು

'''Italic text

 1. http://kannadakannadigga.blogspot.in/p/blog-page.html
 2. https://sujankumarshetty.wordpress.com/2009/08/page/7/
 3. ಟೀಪು ಸುಲ್ತಾನ್ ಕುರಿತ ಸತ್ಯಗಳು
 4. http://gujariangadi.blogspot.in/2014/01/blog-post_12.html
 5. http://karavalinudi. com/%E0%B2%9F%E0%B2%BF%E0%B2%AA%E0%B3%8 D%E0%B2%AA%E0%B3%81-%E0%B2%B8%E0%B3%81%E0%B2%B2%E0%B3%8D%E0%B2%A4%E0%B2%BE%E0%B2%A8%E0%B3%8D-%E0%B2%9C%E0%B2%A8%E0%B3%8D%E0%B2%AE-%E0%B2%A6%E0 %B2% BF%E0%B2%A8/