ಜಿ.ಎಸ್.ಶಿವರುದ್ರಪ್ಪ
ಗೋಚರ
(ಡಾ. ಶಿವರುದ್ರಪ್ಪ ಇಂದ ಪುನರ್ನಿರ್ದೇಶಿತ)
ಜಿ. ಎಸ್. ಶಿವರುದ್ರಪ್ಪ | |
---|---|
ಜನನ | ೭-೨-೧೯೨೬ ಈಸೂರು, ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ |
ಮರಣ | ೨೩-೧೨-೨೦೧೩ ಬನಶಂಕರಿ, ಬೆಂಗಳೂರು |
ವೃತ್ತಿ | ಕವಿ, ಪ್ರಾಧ್ಯಾಪಕ |
ರಾಷ್ಟ್ರೀಯತೆ | ಭಾರತೀಯ |
ಪ್ರಕಾರ/ಶೈಲಿ | ಕಾವ್ಯ, ವಿಮರ್ಶೆ |
ಸಾಹಿತ್ಯ ಚಳುವಳಿ | ನವೋದಯ |
ಪ್ರಭಾವಗಳು |
ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ನಂತರ 'ರಾಷ್ಟ್ರಕವಿ' ಗೌರವಕ್ಕೆ ಪಾತ್ರರಾದವರು. ನವೆಂಬರ್ ೧, ೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು. ಅವರನ್ನು ಸಮನ್ವಯ ಕವಿ ಎಂದೇ ಗುರುತಿಸಲಾಗುತ್ತದೆ.
ಓದು/ವಿದ್ಯಾಭ್ಯಾಸ
[ಬದಲಾಯಿಸಿ]- ಡಾ.ಜಿ.ಎಸ್.ಶಿವರುದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ತಾಲೂಕಿನ ಈಸೂರುಗ್ರಾಮದಲ್ಲಿ ಫೆಬ್ರವರಿ ೭, ೧೯೨೬ ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
- ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (೧೯೪೯) ಪದವಿ ಪಡೆದರು.
- ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.
ಕುವೆಂಪು ಅವರ ಮಾರ್ಗದರ್ಶನದಲ್ಲಿ ಸೌಂದರ್ಯ ಸಮೀಕ್ಷೆ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಪಡೆದರು.
ವೃತ್ತಿ ಜೀವನ/ನಿರ್ವಹಿಸಿರುವ ಜವಾಬ್ದಾರಿಗಳು
[ಬದಲಾಯಿಸಿ]- ೧೯೫೫ ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಡಾ.ಜಿ.ಎಸ್.ಶಿವರುದ್ರಪ್ಪ ನವರು ಮೈಸೂರು ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
- ೧೯೬೩ರ ನವೆಂಬರ್‌ನಿಂದ ೨ ವರ್ಷಗಳ ಕಾಲ ಹೈದರಾಬಾದಿನ ಉಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ ಕನ್ನಡ ವಿಭಾಗದ ಉಪ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ೧೯೭೧ರ ನವೆಂಬರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾದ ಅವರು, ಮುಂದೆ ಅದು "ಕನ್ನಡ ಅಧ್ಯಯನ ಕೇಂದ್ರ" ವಾಗಿ ಪರಿವರ್ತಿತವಾದಾಗ, ಅದರ ನಿರ್ದೇಶಕರೂ ಆದರು.
- ಹಸ್ತಪ್ರತಿಗಳ ಸಂಗ್ರಹಣೆ, ಅವುಗಳ ರಕ್ಷಣೆಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಶಿವರುದ್ರಪ್ಪನವರು ೧೯೭೧ರಲ್ಲಿ ಕನ್ನಡ ಅಧ್ಯಯನ ಕೇಂದ್ರದಲ್ಲಿ 'ಹಸ್ತಪ್ರತಿ ವಿಭಾಗ' ವನ್ನು ಪ್ರಾರಂಭಿಸಿದರು. ಕೇವಲ ೪ ವರ್ಷಗಳಲ್ಲಿ ೩೦೦೦ಕ್ಕೂ ಹೆಚ್ಚು ಓಲೆಗರಿಯ ಹಾಗೂ ೧೦೦೦ಕ್ಕೂ ಹೆಚ್ಚು ಕಾಗದದ ಹಸ್ತ ಪ್ರತಿಗಳ ಸಂಗ್ರಹಣೆಯಾಯಿತು. ತಾವು ಓದಿದ ಮೈಸೂರು ವಿಶ್ವವಿದ್ಯಾನಿಲಯದಲ್ಲೇ ೧೯೪೯ರಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಆರಂಭಿಸಿದರು.
- ೧೯೬೩ರಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ ರೀಡರ್ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ ೧೯೬೬ರ ವರೆವಿಗೂ ಅಲ್ಲಿ ಸೇವೆ ಸಲ್ಲಿಸಿದರು. ೧೯೬೬ ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹಾಗೂ ನಿರ್ದೇಶಕರಾಗಿ ಆಯ್ಕೆಯಾಗಿ ೧೯೮೭ ರವರೆವಿಗೂ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಅವರ ಕಾಲದಲ್ಲೇ ಕನ್ನಡ ವಿಭಾಗವು ಕನ್ನಡ ಅಧ್ಯಯನ ಕೇಂದ್ರವಾಯಿತು.
- ನಿವೃತ್ತಿಯ ನಂತರವೂ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕುವೆಂಪು ಪೀಠ ದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. ದೆಹಲಿಯ ರಾಷ್ಟ್ರೀಯ ಕವಿ ಸಮ್ಮೇಳನ, ತುಮಕೂರಿನ ಸಾಹಿತ್ಯ ಸಮ್ಮೇಳನ ದ ಕವಿಗೋಷ್ಠಿಯ ಅಧ್ಯಕ್ಷರಾಗಿ, ಮದರಾಸಿನ ಕನ್ನಡ ಸಮ್ಮೇಳನ ದ ಅಧ್ಯಕ್ಷರಾಗಿ, ೧೯೯೨ರಲ್ಲಿ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಗೌರವಿಸಲ್ಪಟ್ಟಿದ್ದಾರೆ.
ಕೃತಿಗಳು
[ಬದಲಾಯಿಸಿ]ಕವನ ಸಂಕಲನಗಳು
[ಬದಲಾಯಿಸಿ]- ಸಾಮಗಾನ (೧೯೪೭)
- ಚೆಲುವು-ಒಲವು (೧೯೫೧)
- ದೇವಶಿಲ್ಪ (೧೯೫೩)
- ದೀಪದ ಹೆಜ್ಜೆ (೧೯೫೬)
- ಕಾರ್ತಿಕ (೧೯೫೯)
- ಅನಾವರಣ (೧೯೬೧)
- ತೆರೆದ ದಾರಿ (೧೯೬೩)
- ಗೋಡೆ (೧೯೬೬)
- ಕಾಡಿನ ಕತ್ತಲಲ್ಲಿ (೧೯೭೨)
- ಪ್ರೀತಿ ಇಲ್ಲದ ಮೇಲೆ (೧೯೮೨)
- ಚಕ್ರಗತಿ (೧೯೮೭)
- ವ್ಯಕ್ತಮಧ್ಯ (೧೯೯೩)
- ಅಗ್ನಿಪರ್ವ (೨೦೦೦)
- ತೀರ್ಥವಾಣಿ (೧೯೫೩)
- ಜಾರಿದ ಹೊವು
- ಸಮಗ್ರ ಕಾವ್ಯ
- ಎದೆತುಂಬಿ ಹಾಡಿದೆನು
- ಮೇರಾ ದಿಯಾ ಮತ್ತು ಇತರ ಕವನಗಳು (ರಾಜಮಂಗಲ ಪಬ್ಲಿಕೇಷನ್ಸ್ 2022)
ವಿಮರ್ಶೆ/ಗದ್ಯ
[ಬದಲಾಯಿಸಿ]- ಪರಿಶೀಲನ
- ವಿಮರ್ಶೆಯ ಪೂರ್ವ ಪಶ್ಚಿಮ
- ಸೌಂದರ್ಯ ಸಮೀಕ್ಷೆ. (ಇದು ಅವರ ಪಿಹೆಚ್‌ಡಿ ಮಹಾ ಪ್ರಬಂಧ)
- ಕಾವ್ಯಾರ್ಥ ಚಿಂತನ
- ಗತಿಬಿಂಬ
- ಅನುರಣನ
- ಪ್ರತಿಕ್ರಿಯೆ
- ಕನ್ನಡ ಸಾಹಿತ್ಯ ಸಮೀಕ್ಷೆ
- ಮಹಾಕಾವ್ಯ ಸ್ವರೂಪ
- ಕನ್ನಡ ಕವಿಗಳ ಕಾವ್ಯ ಕಲ್ಪನೆ
- ಹೊಸಗನ್ನಡ ಕವಿತೆಗಳಲ್ಲಿ ಕಾವ್ಯ ಚಿಂತನ
- ಕುವೆಂಪು : ಪುನರವಲೋಕನ
- ಸಮಗ್ರ ಗದ್ಯ ಭಾಗ ೧, ೨ ಮತ್ತು ೩
- ಬೆಡಗು
- ನವೋದಯ -
- ಕುವೆಂಪು-ಒಂದು ಪುನರ್ವಿಮರ್ಶೆ - ಕರ್ನಾಟಕ ಸರ್ಕಾರಕ್ಕೆ ಕುವೆಂಪು ಮೇಲೆ ಜೀವನಚರಿತ್ರೆಯ ಕೆಲಸ
ಪ್ರವಾಸ ಕಥನ
[ಬದಲಾಯಿಸಿ]- ಮಾಸ್ಕೋದಲ್ಲಿ ೨೨ ದಿನ -(ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ ಬಂದಿದೆ)
- ಇಂಗ್ಲೆಂಡಿನಲ್ಲಿ ಚತುರ್ಮಾಸ
- ಅಮೆರಿಕದಲ್ಲಿ ಕನ್ನಡಿಗ
- ಗಂಗೆಯ ಶಿಖರಗಳಲ್ಲಿ
ಜೀವನ ಚರಿತ್ರೆ
[ಬದಲಾಯಿಸಿ]- ಕರ್ಮಯೋಗಿ (ಸಿದ್ದರಾಮನ ಜೀವನ ಚರಿತ್ರೆ)
ಪ್ರಶಸ್ತಿ/ಪುರಸ್ಕಾರಗಳು ಮತ್ತು ಪಡೆದ ಇಸವಿ
[ಬದಲಾಯಿಸಿ]ಕ್ರಮ ಸಂಖ್ಯೆ | ಪ್ರಶಸ್ತಿ/ಪುರಸ್ಕಾರ | ವರ್ಷ |
---|---|---|
೧ | ಸೋವಿಯತ್ ಲ್ಯಾಂಡ್ ನೆಹರೂ ಪ್ರಶಸ್ತಿ ("ಮಾಸ್ಕೋದಲ್ಲಿ ೨೨ ದಿನ" ಪ್ರವಾಸ ಕಥನಕ್ಕೆ) | ೧೯೭೪ |
೨ | ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ | ೧೯೮೨ |
೩ | ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಹಾಗೂ 'ಕಾವ್ಯಾರ್ಥ ಚಿಂತನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ | ೧೯೮೪ |
೪ | ದಾವಣಗೆರೆಯಲ್ಲಿ ನಡೆದ ೬೧ನೇ ಅಖಿಲ-ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ | ೧೯೯೨ |
೫ | ಪ್ರೋ.ಭೂಸನೂರ ಮಠ ಪ್ರಶಸ್ತಿ ಮತ್ತು ಗೊರೂರು ಪ್ರಶಸ್ತಿ | ೧೯೯೭ |
೬ | ಪಂಪ ಪ್ರಶಸ್ತಿ | ೧೯೯೮ |
೭ | ಮಾಸ್ತಿ ಪ್ರಶಸ್ತಿ | ೨೦೦೦ |
೮ | ಹಂಪಿ ಕನ್ನಡ ವಿ.ವಿಯಿಂದ ನಾಡೋಜ ಗೌರವ ಡಾಕ್ಟರೇಟ್ | ೨೦೦೧ |
೯ | ಮೈಸೂರು ವಿ.ವಿಯಿಂದ ಗೌರವ ಡಿ.ಲಿಟ್ | ೨೦೦೪ |
೧೦ | ರಾಷ್ಟ್ರಕವಿ ಪುರಸ್ಕಾರ, ಅ.ನ.ಕೃ ನಿರ್ಮಾಣ್ ಪ್ರಶಸ್ತಿ | ೨೦೦೬ |
೧೧ | ಕುವೆಂಪು ವಿ.ವಿಯಿಂದ ಗೌರವ ಡಿ.ಲಿಟ್ | ೨೦೦೬ |
೧೨ | ಬೆಂಗಳೂರು ವಿ.ವಿಯಿಂದ ಗೌರವ ಡಿ.ಲಿಟ್ | ೨೦೦೭ |
೧೩ | ಕುವೆತ್ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಅಧ್ಯಕ್ಷತೆ | ೨೦೦೭ |
೧೪ | ನೃಪತುಂಗ ಪ್ರಶಸ್ತಿ | ೨೦೧೦ |
- ಜಿ.ಎಸ್.ಶಿವರುದ್ರಪ್ಪನವರಿಗೆ ವಿಮರ್ಶೆಗಾಗಿ ೧೯೮೪ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿತು. ಇದಲ್ಲದೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೮೨), ರಾಜ್ಯೋತ್ಸವ ಪ್ರಶಸ್ತಿ, ಸೋವಿಯತ್ ಲ್ಯಾಂಡ ನೆಹರೂ ಪ್ರಶಸ್ತಿ (೧೯೭೩)ಸಹ ಶಿವರುದ್ರಪ್ಪನವರಿಗೆ ದೊರೆತಿವೆ.
- ೨೦೦೬ನೆಯ ಸಾಲಿನಲ್ಲಿ ಜರಗುತ್ತಿರುವ ಸುವರ್ಣ ಕರ್ನಾಟಕ ಉತ್ಸವದ ಸಂದರ್ಭದಲ್ಲಿ ಜಿ.ಎಸ್.ಶಿವರುದ್ರಪ್ಪನವರಿಗೆ ಕರ್ನಾಟಕ ಸರಕಾರವು ರಾಷ್ಟ್ರಕವಿ (೨೦೦೬) ಎನ್ನುವ ಗೌರವವನ್ನು ಪ್ರಧಾನಿಸಿದೆ.
ಇತರೆ ಪ್ರಶಸ್ತಿಗಳು
[ಬದಲಾಯಿಸಿ]- ಪಂಪ ಪ್ರಶಸ್ತಿ,
- ಮಾಸ್ತಿ ಪ್ರಶಸ್ತಿ,
- ಅನಕೃ ಪ್ರತಿಷ್ಠಾನ ಪ್ರಶಸ್ತಿ,
- ನಾಡೋಜ ಪ್ರಶಸ್ತಿ,
- ಜಿ.ಎಸ್.ಶಿವರುದ್ರಪ್ಪನವರು ೧೯೯೨ ರಲ್ಲಿ ದಾವಣಗೆರೆಯಲ್ಲಿ ಜರುಗಿದ ೬೧ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.ಸ್ನೇಹ ಕಾರ್ತೀಕ,ಗೌರವ,ಹಣತೆ, ಇವು ಜಿ.ಎಸ್.ಎಸ್ ಅವರಿಗೆ ಅಭಿಮಾನಿಗಳು ಸಲ್ಲಿಸಿದ ಅಭಿನಂದನಾ ಗ್ರಂಥಗಳು.
ನಿಧನ
[ಬದಲಾಯಿಸಿ]ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಎಸ್.ಶಿವರುದ್ರಪ್ಪನವರು 23 ಡಿಸೆಂಬರ್ 2013ರಂದು ತಮ್ಮ ಬನಶಂಕರಿಯ ನಿವಾಸದಲ್ಲಿ ಸ್ವರ್ಗಸ್ಥರಾದರು.[೧] ಜಿ.ಎಸ್. ಶಿವರುದ್ರಪ್ಪನವರ ಆಣತಿಯಂತೆಯೆ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಬೆಂಗಳೂರು ವಿ.ವಿ. ಸಮೀಪವಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಾದರಗಳೊಂದಿಗೆ 24 ಡಿಸೆಂಬರ್ 2013ರಂದು ನೇರವೇರಿಸಲಾಯಿತು.[೨]
ಓದು ಬರಹ
[ಬದಲಾಯಿಸಿ]- ಬಿ. ಪಿ. ಆಶಾಕುಮಾರಿ ಅವರ ‛ಸುವರ್ಣ ಚೇತನ: ರಾಷ್ಟ್ರಕವಿ ಜಿ. ಎಸ್. ಶಿವರುದ್ರಪ್ಪ’
ಉಲ್ಲೇಖಗಳು
[ಬದಲಾಯಿಸಿ]- ಪ್ರಕೃತಿ ಸೊಬಗಿಗೆ ಮಾರುಹೋಗಿದ್ದ ಜಿಎಸ್ಎಸ್ Archived 2016-08-30 ವೇಬ್ಯಾಕ್ ಮೆಷಿನ್ ನಲ್ಲಿ.
- ಜಿಎಸ್ಎಸ್ ನಿಧನಕ್ಕೆ ಕಂಬನಿ ಮಿಡಿದ ದಾವಣಗೆರೆ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ಕಲಾಗ್ರಾಮದಲ್ಲಿ ಜಿಎಸ್ಎಸ್ ಅಂತ್ಯಸಂಸ್ಕಾರ Archived 2022-09-08 ವೇಬ್ಯಾಕ್ ಮೆಷಿನ್ ನಲ್ಲಿ.
- ಕಾವ್ಯ ಮೀಮಾಂಸೆಗೆ ಜಿಎಸ್ಎಸ್ ಕೊಡುಗೆ ಅಪಾರ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ಚಿಂತನಶೀಲ, ಚಲನಶೀಲ ಗುರು... ಬರಗೂರು ರಾಮಚಂದ್ರಪ್ಪ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ‘ಚೈತ್ರ’ದಲ್ಲಿ ನೋವು–ನಲಿವು ಭಾವ ಸಮ್ಮಿ ಲನ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ರಾಷ್ಟ್ರಕವಿ ಜಿ. ಎಸ್ ಶಿವರುದ್ರಪ್ಪ ಇನ್ನಿಲ್ಲ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ಕೋಟೆ ನಾಡಿನಲ್ಲಿ ರಾಷ್ಟ್ರಕವಿಯ ಹೆಜ್ಜೆಗಳು... Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ಜಿಎಸ್ಎಸ್ಗೆ ಜಯದೇವಶ್ರೀ ಪ್ರಶಸ್ತಿ ಪ್ರದಾನ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ. , ಪ್ರಜಾವಾಣಿ ವಾರ್ತೆ Mon, 02/25/2013 - 01:38
- ನಮ್ಮ ಕಾಲದ ಸಾಂಸ್ಕೃತಿಕ ನಾಯಕ , ನರಹಳ್ಳಿ ಬಾಲಸುಬ್ರಹ್ಮಣ್ಯ Archived 2022-09-08 ವೇಬ್ಯಾಕ್ ಮೆಷಿನ್ ನಲ್ಲಿ.
- ರಾಷ್ಟ್ರಕವಿಗೆ ಸಾಹಿತ್ಯಾಭಿಮಾನಿಗಳ ಸಂತಾಪ Archived 2022-09-08 ವೇಬ್ಯಾಕ್ ಮೆಷಿನ್ ನಲ್ಲಿ.
- 60 ವರ್ಷದ ಒಡನಾಡಿ ಜಿಎಸ್ಎಸ್ ನಿಧನಕ್ಕೆ ಕಂಬನಿ, ಒಡಲೆರಡು, ಜೀವವೂಂದೇ: ಕಣವಿ; ಶ್ರೇಷ್ಠ ಸಂಘಟಕ : ಕಲಬುರ್ಗಿ Archived 2022-09-07 ವೇಬ್ಯಾಕ್ ಮೆಷಿನ್ ನಲ್ಲಿ.
- ↑ http://www.thehindu.com/news/national/karnataka/rashtrakavi-gs-shivarudrappa-no-more/article5492886
- ↑ http://epapervijayavani.in/Details.aspx?id=10589&boxid=142931751
ಹೊರಗಿನ ಸಂಪರ್ಕಗಳು
[ಬದಲಾಯಿಸಿ]Wikimedia Commons has media related to G. S. Shivarudrappa.