ತುಮಕೂರು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ತುಮಕೂರು
India-locator-map-blank.svg
Red pog.svg
ತುಮಕೂರು
ರಾಜ್ಯ ಕರ್ನಾಟಕ
ಜಿಲ್ಲೆ ತುಮಕೂರು]
ನಿರ್ದೇಶಾಂಕಗಳು 13.34° N 77.1° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ
 - ಸಾಂದ್ರತೆ

 - {{{population_density}}}/ಚದರ ಕಿ.ಮಿ.
ಜಿಲ್ಲಾಧಿಕಾರಿ
ಅಂತರ್ಜಾಲ ತಾಣ: http://www.tumkurcity.mrc.gov.in/

ತುಮಕೂರು - ದಕ್ಷಿಣ ಕರ್ನಾಟಕದಲ್ಲಿ ಪ್ರಮುಖ ಜಿಲ್ಲಾಕೇಂದ್ರವಾಗಿದೆ. ತುಮಕೂರಿನ ಮೂಲ ಹೆಸರು ತುಮ್ಮೆಗೂರು. ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಬೆಂಗಳೂರಿನಿಂದ ೭೦ ಕಿ.ಮಿ. ದೂರದಲ್ಲಿದೆ.


ತುಮಕೂರು-ಬೆಂಗಳೂರಿನ ಹೆದ್ದಾರಿಯಲ್ಲಿರುವ ಕ್ಯಾತಸಂದ್ರದ ಬಳಿ ಇರುವ ಪುಣ್ಯಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠ ವಿಶ್ವವಿಖ್ಯಾತವಾಗಿದೆ. ಇಲ್ಲಿ ಜಾತಿ, ಮತ, ಲಿಂಗ ತಾರತಮ್ಯವಿಲ್ಲದೆ ನಿರಂತರವಾಗಿ ನೆಡೆಯುತ್ತಿರುವ ಜ್ಞಾನ ದಾಸೋಹ ಮತ್ತು ಅನ್ನ ದಾಸೋಹ ವಿಶ್ವಕ್ಕೆ ಮಾದರಿಯಾಗಿದೆ. ಮಠದ ವತಿಯಿಂದ ಪ್ರತಿ ದಿನ ಸಾವಿರಾರು ಜನ ಬಡ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ವಿದ್ಯಾದಾನ ನೆಡೆಯುತ್ತಿದೆ. ಅಧುನಿಕ ತುಮಕೂರನ್ನು ಪವಾಡದಂತೆ ಪ್ರಸಿದ್ಧಿಗೆ ತಂದ ಸಿದ್ಧಗಂಗಾ ಮಠಾಧೀಶರಾದ, ತ್ರಿವಿಧ ದಾಸೋಹಿ ೧೦೯ ವರ್ಷದ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು, ನೆಡೆದಾಡುವ ಶಿವನೆಂದೇ ಪ್ರಖ್ಯಾತರಾಗಿದ್ದಾರೆ.

ಸಿದ್ಧಗಂಗಾ ಮಠದ ಸಮೀಪ ಇರುವ ಕ್ಯಾತ್ಸಂದ್ರ, ತಟ್ಟೆಇಡ್ಲಿ ತಿನಿಸಿಗೆ ಖ್ಯಾತಿ ಪಡೆದಿದೆ. ಬೆಂಗಳೂರು - ಮಧುಗಿರಿ ಹೆದ್ದಾರಿಯಲ್ಲಿರುವ ಸಿದ್ದರ ಬೆಟ್ಟವು ಗಿಡಮೂಲಿಕೆಗಳಿಗೆ ಮತ್ತು ಅಲ್ಲಿ ಸಾಧನೆ ಮಾಡುತ್ತಿರುವ ಸಿದ್ಧರು ಮತ್ತು ಸಂತರಿಗಾಗಿ ಪ್ರಸಿದ್ಧವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿರುವ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಮತ್ತು ಕಗ್ಗೆರೆ ನಾಡಿನ ಪ್ರಮುಖ ವೀರಶೈವ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿವೆ. ತುಮಕೂರು ಜಿಲ್ಲೆಯಲ್ಲಿರುವ ತಿಪಟೂರು ತೆಂಗಿನ ಕೃಷಿಗೆ ಹೆಸರಾಗಿದ್ದು ಕಲ್ಪತರು ನಾಡು ಎಂದು ಖ್ಯಾತಿ ಪಡೆದಿದೆ. ತುಮಕುರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಲಕ್ಷ್ಮಿ ದೇವಸ್ಥಾನವು ರಾಜ್ಯಾದ್ಯಂತ ಪ್ರಸಿದ್ಧಿ ಪಡೆದಿರುವ ಪುಣ್ಯಕ್ಷೇತ್ರ. ದೇವರಾಯನ ದುರ್ಗ ನರಸಿಂಹ ಸ್ವಾಮಿ ದೇವಸ್ಥಾನವಿರುವ ಪುಣ್ಯಕ್ಷೇತ್ರವಾಗಿದೆ.

ತುಮಕೂರು ಹಲವು ಕೈಗಾರಿಕೆಗಳಿಗೆ ಮನೆಯಾಗಿದೆ. ತುಮಕೂರಿನ ಪ್ರಮುಖ ಕೈಗಾರೆಕೆಗಳು ಹೆಚ್.ಎಂ.ಟಿ, ಗ್ರಾನೈಟ್ ಪರಿಷ್ಕರಣೆ, ಟಿ.ವಿ.ಎಸ್.ಇ, ಅಕ್ಕಿ ಮಿಲ್, ಎಣ್ಣೆ ಮಿಲ್ ಇತ್ಯಾದಿ.

ಶಿಕ್ಷಣ ಕ್ಷೇತ್ರದಲ್ಲಿ ಕೂಡಾ ತುಮಕೂರು ಹೆಸರುವಾಸಿಯಾಗಿದೆ. ಸಿದ್ಧಗಂಗಾ ಮಠದ ಶಿಕ್ಷಣ ಸಂಸ್ಥೆಗಳು, ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳು ಪ್ರಮುಖವಾಗಿವೆ. ತುಮಕೂರು ವಿಶ್ವವಿದ್ಯಾಲಯ ಕಾರ್ಯಾರಂಭಿಸಿದೆ. ಪ್ರಖ್ಯಾತ ನಾಟಕ ಕಂಪನಿಯು, ಚಿತ್ರ ನಿರ್ಮಾಣ ಸಂಸ್ಥೆಯೂ ಆಗಿದ್ದ ಗುಬ್ಬಿ ನಾಟಕ ಕಂಪನಿಯ ಸಂಸ್ಥಾಪಕರಾದ ವೀರಣ್ಣನವರು ತುಮಕೂರು ಜಿಲ್ಲೆಯ ಗುಬ್ಬಿಯವರು.

ತುಮಕೂರು ಜಿಲ್ಲೆಯ ತಾಲ್ಲೂಕುಗಳು[ಬದಲಾಯಿಸಿ]

ತುಮಕೂರು ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳು[ಬದಲಾಯಿಸಿ]

 • ತುಮಕೂರು ವಿಶ್ವವಿದ್ಯಾಲಯ
 • ಶ್ರೀ ವಿಶ್ವಭಾರತಿ ವಿದ್ಯಾ ಸಂಸ್ಥೆ,ಮಲ್ಲಸಂದ್ರ
 • ದಿಗ್ವಿಜಯ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯ,ಹೆಡವನಹಳ್ಳಿ ಗೆಟ್,ತುರುವೆಕೆರೆ/ತಾ/ ದೂ:೭೭೬೦೯೮೦೮೬೭
 • ಶ್ರೀದೇವಿ ಶಿಕ್ಷಣ ಸಂಸ್ಠೆ
 • ಸಿದ್ಧಗಂಗಾ ಶಿಕ್ಷಣ ಸಂಸ್ಠೆ
 • ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಠೆ
 • ಹೆಚ್.ಎಮ್.ಎಸ್ ಶಿಕ್ಷಣ ಸಂಸ್ಠೆ
 • ಸಿ.ಐ.ಟಿ (ಚನ್ನಬಸವೇಶ್ವರ) ಶಿಕ್ಷಣ ಸಂಸ್ಠೆ
 • ಅಕ್ಷಯ ಶಿಕ್ಷಣ ಸಂಸ್ಠೆ
 • ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಠೆ
 • ಸರ್ವೋದಯ ಶಿಕ್ಷಣ ಸಂಸ್ಠೆ
 • ಸೇಂಟ್ ಜೋಸೇಫ್ ಶಿಕ್ಷಣ ಸಂಸ್ಠೆ
 • ಶ್ರೀ ಸಪ್ತಗಿರಿ ಶಿಕ್ಷಣ ಸಂಸ್ಠೆ
 • ಶ್ರೀ ಮಾರುತಿ ಶಿಕ್ಷಣ ಸಂಸ್ಠೆ
 • ವಿದ್ಯಾನಿಕೇತನ ಶಿಕ್ಷಣ ಸಂಸ್ಠೆ
 • ವಿದ್ಯೋದಯ ಫೌಂಡೇಶನ್
 • ಶ್ರೀ ವಿದ್ಯಾವಾಹಿನಿ ಶಿಕ್ಷಣ ಸಂಸ್ಠೆ

ತುಮಕೂರು ಜಿಲ್ಲೆಯ ಪ್ರಸಿದ್ಧ ವ್ಯಕ್ತಿಗಳು/ಪ್ರಮುಖರು/ಸ್ಠಳಗಳು[ಬದಲಾಯಿಸಿ]

ಶ್ರೀ ಉರಿಗದ್ದೇಶ್ವರ ಮಠ, ಬೆಟ್ಟಹಳ್ಳಿಮಠ, ಕುಣಿಗಲ್ ತಾಲ್ಲೂಕು,

 • Rangaayana Raghu Chalana Chitra Nataru

Pavagada Kottur

S.H.NAGARAJU TRADITIONAL ARTIST TUMKURU KARNATAKA

P.PRASAD TRADITIONAL ARTIST TUMKURU KARNATAKA bellave narahari shasthrigalu- kavigalu


ಬೆಳ್ಳವಿ ನರಹರಿಶಾಸ್ತ್ರಿಗಳು----ಮೊದಲ ಕನ್ನಡ ಚಲನಚಿತ್ರ ಸಾಹಿತಿಗಳು, ಸತಿಸುಲೋಚನ ಸಿನಿಮಾ,

ತುಮಕೂರು ಜಿಲ್ಲೆಯ ಪ್ರಸಿದ್ಧ ಸ್ಥಳಗಳು[ಬದಲಾಯಿಸಿ]

  ಬೆಳ್ಳಾವಿ ಸೊಮೆಶ್ವರ ದೇವಸ್ಥಾನ --ಬೆಳ್ಳಾವಿ 

ಹುತ್ರಿದುರ್ಗ ಬೆಟ್ಟ: ಇಲ್ಲಿ ನಾಡಪ್ರಭುಕೇಂಪೇಗೌಡರು ಕಟ್ಟಿಸಿರುವ ಬೃಹತ್ ಕೋಟೆ ಮತ್ತು ಶ್ರೀ ಗಂಗಾಧರೇಶ್ವರ ದೇವಸ್ಥಾನ. ಪಾತಾಳ ಗಂಗೆ, ಸಂಕೋಲೆ ಬಸವಣ್ಣನ ದೇವರು, ಪ್ರಸಿದ್ಧ ಕಾಡಪ್ಪನವರ ಮಠ ಮುಂತಾದ ಪ್ರಸಿದ್ಧ ಸ್ಥಳಗಳನ್ನು ಈ ಬೃಹತ್ ಬೆಟ್ಟದಲ್ಲಿ ಕಾಣಬಹುದು. ಪ್ರವಾಸಿಗರಿಗೆ ನೆಚ್ಚಿನ ತಾಣವಾಗಿದ್ದು, ಇದು ಬೆಂಗಳೂರಿನಿಂದ ಸುಮಾರು ೮೦ ಕಿ.ಮಿ. ದೂರವಿದ್ದು, ಈ ಬೆಟ್ಟಕ್ಕೆ ಬರಲು ಬೆಂಗಳೂರಿನಿಂದ ಹಲವು ಖಾಸಗಿ ಮತ್ತು ಸರ್ಕಾರಿ ಬಸ್ ಗಳಿವೆ. ಬೆಂಗಳೂರಿನಿಂದ ಮಾಗಡಿ ಮುಖಾಂತರ ಬಂದು ಕಲ್ಯ, ಹೊಸಪಾಳ್ಯ ಕ್ಕೆ ಸೇರುವ ಮುನ್ನ ಎಡಕ್ಕೆ ತಿರುವುಪಡೆದರೆ, ಕತ್ತರಿಘಟ್ಟ, ಹಾಲುವಾಗಿಲು ನಂತರ ಸಂತೇಪೇಟೆಯಲ್ಲಿ ಇಳಿದು ನಂತರ ಬೆಟ್ಟಕ್ಕೆ ಹೋಗಬಹುದು. ಮೇಲಿನಂತೆಯೆ ಮಾಗಡಿಯಿಂದ ಹುಲಿಯೂರುದುರ್ಗ ಮಾರ್ಗವಾಗಿ ಬಂದು ಅಗಲಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಬಲ್ಲಕ್ಕೆ ತಿರುವು ಪಡೆದು ಯಲಗಲವಾಡಿ ಸೇರುವ ಮುನ್ನ ಬಲ ತಿರುವು ಪಡೆದು ಹೊಢಾಘಟ್ಟ ಮಾರ್ಗವಾಗಿ ಬಂದು ನಂತರ ಚಿಕ್ಕ ಬೆಟ್ಟದರಸ್ತೆಯಲ್ಲಿ ಸಾಗಿದ ನಂತರ ಆದಿ ಹನುಮಂತರಾಯ ಸ್ವಾಮಿ ದೇವಸ್ಥಾನದ ನಂತರ ಬಲ ತಿರುವು ಪಡೆದರೆ ಹುತ್ರಿದುರ್ಗ ಬೆಟ್ಟಕ್ಕೆ ಹೋಗಬಹುದು.

 • ಮತ್ತೀಕೆರೆ ಗುಬ್ಬಿ , ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ ಗಡಿ ಬಾಗದಲ್ಲಿರುವ ಒಂದು ಸುಂದರ ಗ್ರಾಮ

ಸಲ್ಲಾಪುರದಮ್ಮ ಮತ್ತು ಕೊಲ್ಲಾಪುರದಮ್ಮ ಎಂಬ ದೇವಸ್ಥಾನವು ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಗಿಡದ ಕೆಂಚನಹಳ್ಳಿಯಲ್ಲಿ ನೆಲೆಸಿದ್ದು ಪ್ರತಿ ವರ್ಷ ಜಾತ್ರೆಯು ನಡೆಯುತ್ತದೆ.ಅಲ್ಲದೇ ಹೆಸರಾಂತ ಅಂಜನೇಯ ಸ್ವಾಮಿಯು ಇದೇ ತಾಲ್ಲೂಕಿನ ಅಂದರೆ ಕುಣಿಗಲ್ ನ ಹುಲಿಯೂರುದುರ್ಗ ಹೋಬಳಿಯ ಕಲ್ಲುದೇವನಹಳ್ಳಿಯಲ್ಲಿ ನೆಲೆಸಿದ್ದು, ಇಲ್ಲಿಯೂ ಸಹ ಪ್ರತಿ ವರ್ಷ ಜಾತ್ರೆಯು ನಡೆಯುತ್ತದೆ.

ಬೆಟ್ಟಹಳ್ಳಿಮಠ: ಇದು ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಮಟ್ಟದಲ್ಲಿ ಬರುವ ಒಂದು ಪ್ರಮುಖ ವಿಧ್ಯಾಸಂಸ್ಥೆಯಾಗಿದ್ದು, ಇಲ್ಲಿ ಶ್ರೀ ಉರಿಗದ್ದಿಗೇಶ್ವರ ದೇವಸ್ಥಾನವಿದೆ. ರಾಮನಗರದಿಂದ - ಕುಣಿಗಲ್ ರಾಜ್ಯ ಹೆದ್ದಾರಿಯಲ್ಲಿರುವ ಬೆಟ್ಟಹಳ್ಳಿ ಬಳಿ ಇರುವ ವೀರಶೈವ ಪುಣ್ಯಕ್ಷೇತ್ರವಾದ ಶ್ರೀ ಬೆಟ್ಟಹಳ್ಳಿಮಠ ವಿಶ್ವವಿಖ್ಯಾತವಾಗಿದೆ. ಇಲ್ಲಿ ಜಾತಿ, ಮತ, ಲಿಂಗ ತಾರತಮ್ಯವಿಲ್ಲದೆ ನಿರಂತರವಾಗಿ ನೆಡೆಯುತ್ತಿರುವ ಜ್ಞಾನ ದಾಸೋಹ ಮತ್ತು ಅನ್ನ ದಾಸೋಹ ವಿಶ್ವಕ್ಕೆ ಮಾದರಿಯಾಗಿದೆ. ಮಠದ ವತಿಯಿಂದ ಪ್ರತಿ ದಿನ ಸಾವಿರಾರು ಜನ ಬಡ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ವಿದ್ಯಾದಾನ ನೆಡೆಯುತ್ತಿದೆ. ಅಧುನಿಕ ಬೆಟ್ಟಹಳ್ಳಿಮಠವನ್ನು ಪವಾಡದಂತೆ ಪ್ರಸಿದ್ಧಿಗೆ ತಂದ ಬೆಟ್ಟಹಳ್ಳಿಮಠ ಮಠಾಧೀಶರಾದ, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀನೀಲಕಂಠಶಿವಾಚಾರ್ಯ ಮಹಾ ಸ್ವಾಮಿಗಳು, ನೆಡೆದಾಡುವ ಶಿವನೆಂದೇ ಪ್ರಖ್ಯಾತರಾಗಿದ್ದಾರೆ. ಅಲ್ಲದೇ ಮಠದ ವತಿಯಿಂದ ಇಲ್ಲಿ ನರ್ಸರಿ ಯಿಂದ ಪದವಿ ಪೂರ್ವ ಕಾಲೇಜು ಮತ್ತು ಸಂಸ್ಕ್ರುತ ಶಿಕ್ಷಣವನ್ನು ನೀಡಲಾಗುವುದು. ಮತ್ತು ಈ ಸಂಸ್ಥೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಇಲ್ಲಿ ಪ್ರತಿ ವರ್ಷ ಶಿವರಾತ್ರಿ ಹಬ್ಬದಂದು ಜಾತ್ರೆಯು ಬಹಳ ವಿಜೃಂಭಣೆಯಿಂದ ನಡೆಯುವುದರ ಜೊತೆಗೆ ಕಳೆದ ಐದಾರು ವರ್ಷಗಳಿಂದ ಬಾರಿ ದನಗಳ ಜಾತ್ರೆಯನ್ನು ಏರ್ಪಡಿಸುವುದರ ಜೊತೆಗೆ ಉತ್ತಮವಾದ ರಾಸುಗಳಿಗೆ ಬಹುಮಾನವನ್ನು ಸಹ ನೀಡುವ ವ್ಯ್ವವಸ್ಥೆಯನ್ನು ಮಾಡಲಾಗಿದೆ.

ಅಂಕನಹಳ್ಳಿ ಮಠ: ಇದು ಒಂದು ವಿದ್ಯಾಸಂಸ್ಥೆಯಾಗಿದ್ದು ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿ ಸುತ್ತಮುತ್ತಲಿನ ಹಳ್ಲಿಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಪ್ರಸಿದ್ಧಿಯಾಗಿದೆ ಮತ್ತು ಇತ್ತೀಚೆಗೆ ಸರ್ಕಾರದಿಂದ ಮೋರಾರ್ಜಿ ದೇಸಾಯಿ ಸಂಸ್ಥೆಯನ್ನು ಸಹ ಇಲ್ಲಿ ತೆರೆಯಲಾಗಿದೆ.

ಇದನ್ನೂ ನೋಡಿ[ಬದಲಾಯಿಸಿ]

ಕುಣಿಗಲ್ ದೊಡ್ಡಕೆರೆ ಮತ್ತು ಕುದುರೆ ಪಾರ್ಮಗಳನ್ನು ನೀವು ನೋಡಬಹುದು ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯಲ್ಲಿರುವ ಹುತ್ರಿದುರ್ಗ ಬೆಟ್ಟದಲ್ಲಿ ಶ್ರೀ ನಾಡಪ್ರಭು ಕೇಂಪೇಗೌಡರು ನಿರ್ಮೀಸಿರುವ ದೇವಸ್ಥಾನ ಮತ್ತು ಸುಂದರವಾದ ಕೋಟೆಗಳನ್ನು ನೀವು ನೋಡಬಹುದು ಮತ್ತು ಬೆಟ್ಟದ ತುದಿಯಲ್ಲಿ ನಾಡ ಪ್ರಭು ಕಟ್ಟಿಸಿರುವ ಕಲ್ಯಾಣಿ ಮತ್ತು ದೇವಸ್ಥಾನಗಳನ್ನು ನೋಡಬಹುದು ಅಲ್ಲದೇ ಚಲನಚಿತ್ರಗಳ ಚಿತ್ರಿಕರಣಕ್ಕೆ ಯೋಗ್ಯವಾದ ಸ್ಥಳವಾಗಿದ್ದು , ಅಲ್ಲದೇ ಸುಂದರ ವಾದ ಬೆಟ್ಟಗುಡ್ಡಗಳ ವಾತಾವರಣ ನೋಡುಗರ ಕಣ್ಮನ ತಣಿಸುತ್ತವೆ. ಅಲ್ಲದೇ ಇಲ್ಲಿರುವ ಕೋಟೆ ಕೊತ್ತಲುಗಲುಗಳನ್ನು ನೋಡಬಹುದು ಮತ್ತು ಈ ಬೆಟ್ಟದಿಂದ ಶಿವಗಂಗೆ ಬೆಟ್ಟಕ್ಕಿರುವ ಸುರಂಗ ಮಾರ್ಗವನ್ನು ಸಹ ನಾವು ತಿಳಿಯಬಹುದಾಗಿದೆ. ಇತ್ತೀಚಿಗಷ್ಟೆ ಕ್ಷೇತ್ರ ಮರುವಿಂಗಡಣೆಯಿಂದ ಕುಣಿಗಲ್ ತಾಲ್ಲೂಕನ್ನು ತುಮಕೂರು ಲೋಕಸಬಾ ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾಕ್ಷೇತ್ರಕ್ಕೆ ಸೇರಿಸಲ್ಪಟ್ಟಿದೆ.

ಹೊರಗಿನ ಸಂಪರ್ಕಗಳು[ಬದಲಾಯಿಸಿ]

"https://kn.wikipedia.org/w/index.php?title=ತುಮಕೂರು&oldid=683736" ಇಂದ ಪಡೆಯಲ್ಪಟ್ಟಿದೆ