ತೊರವಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ತೊರವಿ
ತೊರವಿ
village

ತೊರವಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ.

ಚರಿತ್ರೆ[ಬದಲಾಯಿಸಿ]

ವಿಜಯಪುರ ನಗರದ ಹೊರಭಾಗದ ತೊರವಿ ಗ್ರಾಮದಲ್ಲಿ ತೊರವಿ ನರಸಿಂಹ ದೇವಾಲಯವಿದೆ. ಕುಮಾರ ವಾಲ್ಮೀಕಿಯು ಇದೇ ದೇವಾಲಯದಲ್ಲಿ ತೊರವಿ ರಾಮಾಯಣವನ್ನು ಕನ್ನಡದಲ್ಲಿ ರಚಿಸಿದ್ದಾನೆ. ತೊರವಿ ರಾಮಾಯಣ ಕೃತಿಯನ್ನು ದೇವಸ್ಥಾನದ ಒಳ ಆವರಣದಲ್ಲಿ ಪ್ರದರ್ಶನಕ್ಕಿಡಲಾಗಿದ್ದು ಕೃತಿಯಲ್ಲಿನ ಸಾಲುಗಳನ್ನು ದೇವಾಲಯದ ಒಳ ಆವರಣದಲ್ಲಿ ಬರೆಯಲಾಗಿದೆ.

ತೊರವಿ ಗ್ರಾಮವು ವಿಜಯಪುರದಿಂದ ಪಶ್ಚಿಮಕ್ಕೆ 6 ಕಿ.ಮೀ. ಅಂತರದಲ್ಲಿ ಅಥಣಿಗೆ ಹೋಗುವ ಮಾರ್ಗದಲ್ಲಿರುವ ಗ್ರಾಮ. ಈ ಗ್ರಾಮದಲ್ಲಿ ಪ್ರಾಚೀನ ಶ್ರೀಲಕ್ಷ್ಮೀ ನರಸಿಂಹ ದೇವಸ್ಥಾನವಿದೆ. ಈ ದೇವಸ್ಥಾನ ಗುಹಾಂತರ ದೇವಾಲಯದಂತೆ ಗೋಚರಿಸುತ್ತದೆ. ಆಕರ್ಷಕವಾದ ನರಸಿಂಹ ವಿಗ್ರಹ ಗಮನ ಸೆಳೆಯುತ್ತದೆ. 15 ನೇ ಶತಮಾನದಲ್ಲಿ ನರಹರಿ ಎಂಬ ಕವಿ, ಕುಮಾರ ವಾಲ್ಮೀಕಿ ಎಂಬ ಹೆಸರಿನಿಂದ ನರಸಿಂಹ ದೇವಸ್ಥಾನದಲ್ಲಿಯೇ ಕುಳಿತು ತೊರವಿ ರಾಮಾಯಣವನ್ನು ರಚಿಸಿದ ಎಂಬ ಪ್ರತೀತಿ ಇದೆ.

ಭೌಗೋಳಿಕ[ಬದಲಾಯಿಸಿ]

ಗ್ರಾಮವು ಭೌಗೋಳಿಕವಾಗಿ 16* 32' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಜನಸಂಖ್ಯೆ[ಬದಲಾಯಿಸಿ]

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 10000 ಇದೆ. ಅದರಲ್ಲಿ 5500 ಪುರುಷರು ಮತ್ತು 4500 ಮಹಿಳೆಯರು ಇದ್ದಾರೆ.

ಹವಾಮಾನ[ಬದಲಾಯಿಸಿ]

ಬೇಸಿಗೆಕಾಲ - ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 42°C ವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 9°C ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.

  • ಬೇಸಿಗೆಕಾಲ - 35°C - 42°C
  • ಮಳೆಗಾಲ - 18°C - 32°C
  • ಚಳಿಗಾಲ - 15°C - 28°C
  • ಮಳೆ - ಪ್ರತಿ ವರ್ಷ 300 - 600ಮಿಮಿ ಗಳಸ್ಟು ಆಗಿತ್ತದೆ

ಆಹಾರ[ಬದಲಾಯಿಸಿ]

ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಸಂಸ್ಕೃತಿ[ಬದಲಾಯಿಸಿ]

ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ಗಾಂಧಿ ಟೋಪಿ ಅಥವಾ ಬಿಳಿ/ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆಯನ್ನು ಧರಿಸುತ್ತಾರೆ.

ಕಲೆ[ಬದಲಾಯಿಸಿ]

ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ, ಜಾನಪದ, ಡೊಳ್ಳು ಕುಣಿತ, ಕರಡಿ ಮಜಲು, ಮೊಹರಮ ಹೆಜ್ಜೆ ಕುಣಿತ, ಹರಿ ಭಜನೆ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ.

ಧರ್ಮ[ಬದಲಾಯಿಸಿ]

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆ[ಬದಲಾಯಿಸಿ]

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಟವಾದ ಕನ್ನಡ.

ದೇವಾಲಯ[ಬದಲಾಯಿಸಿ]

  • ತೊರವಿ ಲಕ್ಷ್ಮಿ ನರಸಿಂಹ ದೇವಾಲಯ
  • ತೊರವಿ ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ಹಣಮಂತ ದೇವಾಲಯ

ಮಸೀದಿ[ಬದಲಾಯಿಸಿ]

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ಪ್ರವಾಸ[ಬದಲಾಯಿಸಿ]

  • ಸಂಗೀತ ಮಹಲ್

ಸಂಗೀತ ಮಹಲ್ ವಿಜಯಪುರ ನಗರದ ಹೊರ ವಲಯದ ತೊರವಿ ಗ್ರಾಮದಲ್ಲಿದ್ದು ಇಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಆಚರಿಸುತ್ತಿದ್ದರು. ಕಮಾನದ ರಚನೆ ಹೊಂದಿದ ಭವ್ಯ ಕಟ್ಟಡದ ಅವಶೇಷಗಳಿರುವ ಮಹಲ್. ಇದನ್ನು ಎರಡನೇ ಇಬ್ರಾಹಿಮ್ ಆದಿಲ್ಶಾಹಿಯು ಸಂಗೀತ ಕಚೇರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಸಲುವಾಗಿ ನಿರ್ಮಿಸಿದ್ದ.

ಈಗಲೂ ಜಿಲ್ಲಾಡಳಿತ ನವರಸಪುರ ಸಂಗೀತ ಉತ್ಸವ ಎಂಬ ಜಿಲ್ಲಾ ಮಟ್ಟದ ಉತ್ಸವವನ್ನು ನಡೆಸುತ್ತದೆ. ಬಿಜಾಪುರಿನ ಪಶ್ಚಿಮಕ್ಕೆ ಸುಮಾರು 8 ಕಿ.ಮೀ ದೂರದಲ್ಲಿರುವ ತೊರವಿ ಎಂಬ ಗ್ರಾಮದಲ್ಲಿ ನೆಲೆಸಿದೆ ಈ ಸಂಗೀತ ಮಹಲ್. ಹಿಂದೆ ಇದೊಂದು ಸಂಗೀತ ಹಾಗು ನೃತ್ಯಗಳಿಗೆ ಮೀಸಲಾಗಿದ್ದ ಅರಮನೆಯಾಗಿತ್ತೆಂದು ಊಹಿಸಲಾಗಿದೆ.

ಅಲ್ಲದೆ ಇದೆ ಸ್ಥಳದಲ್ಲೆ ಪ್ರತಿ ವರ್ಷ ಪ್ರಸಿದ್ಧ ನವರಸಪುರ ಸಂಗೀತ ಉತ್ಸವವನ್ನು ಆಯೋಜಿಸಲಾಗುತ್ತದೆ. ಅಲ್ಲದೆ ತೊರವಿಯ ಈ ಸಂಗೀತ್ ಮಹಲ್ ಬಳಿಯಲ್ಲೆ ಭೂಗತವಾದ ನರಸಿಂಹನ ದೇವಾಲಯ ಹಾಗು ಲಕ್ಷ್ಮಿ ದೇವಿಯ ದೇವಸ್ಥಾನಗಳಿವೆ. ವಿಜಯಪುರದ ಜನರು ಪ್ರತಿ ಶನಿವಾರ ಈ ಎರಡೂ ದೇವಸ್ಥಾನಗಳಿಗೆ ಭೇಟಿ ನೀಡುವುದು ರೂಢಿ.

ಹಬ್ಬ[ಬದಲಾಯಿಸಿ]

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಕೃಷಿ[ಬದಲಾಯಿಸಿ]

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ.

ನೀರಾವರಿ[ಬದಲಾಯಿಸಿ]

ಗ್ರಾಮದಲ್ಲಿ ಬಹುಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಉದ್ಯೋಗ[ಬದಲಾಯಿಸಿ]

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡು(ಮೇಕೆ) ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ.

ಬೆಳೆ[ಬದಲಾಯಿಸಿ]

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಸಸ್ಯ[ಬದಲಾಯಿಸಿ]

ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ[ಬದಲಾಯಿಸಿ]

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ.

ಆರ್ಥಿಕತೆ[ಬದಲಾಯಿಸಿ]

ಗ್ರಾಮದ ಆರ್ಥಿಕ ಪರಿಸ್ಥಿತಿ ಮಧ್ಯಮ ತರಗತಿಯಲ್ಲಿದೆ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

ಸಾಕ್ಷರತೆ[ಬದಲಾಯಿಸಿ]

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು 75%. ಅದರಲ್ಲಿ 85% ಪುರುಷರು ಹಾಗೂ 68% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ[ಬದಲಾಯಿಸಿ]

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಗ್ರಾಮ ಪಂಚಾಯತಿ[ಬದಲಾಯಿಸಿ]

ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯವಿದೆ.

ಅಂಚೆ ಕಚೇರಿ[ಬದಲಾಯಿಸಿ]

ಗ್ರಾಮದಲ್ಲಿ ಅಂಚೆ ಕಚೇರಿಯಿದೆ.

  • ವಿಜಯಪುರ ತೊರವಿ - 586108

ಉತ್ಪಾದಕ ಸಹಕಾರಿ ಸಂಘ[ಬದಲಾಯಿಸಿ]

ಗ್ರಾಮದಲ್ಲಿ ಉತ್ಪಾದಕ ಸಹಕಾರಿ ಸಂಘವಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ[ಬದಲಾಯಿಸಿ]

ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವಿದೆ.

ಶೀತಲಿಕರಣ ಘಟಕಗಳು[ಬದಲಾಯಿಸಿ]

  • ರುಣವಾಲ ಅಗ್ರಿ ಟೆಕ್ ಶೀತಲಿಕರಣ ಘಟಕ, ತೊರವಿ, ವಿಜಯಪುರ

ಬ್ಯಾಂಕುಗಳು[ಬದಲಾಯಿಸಿ]

  • ಎಸ್.ಬಿ.ಐ.ಬ್ಯಾಂಕ್, ತೊರವಿ
  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ತೊರವಿ
  • ಸಿಂಡಿಕೇಟ್ ಬ್ಯಾಂಕ್, ತೊರವಿ
"https://kn.wikipedia.org/w/index.php?title=ತೊರವಿ&oldid=1174134" ಇಂದ ಪಡೆಯಲ್ಪಟ್ಟಿದೆ