ನಾಗೂರ
ನಾಗೂರ
ನಾಗೂರ | |
|---|---|
village | |
| ಜನಸಂಖ್ಯೆ (೨೦೧೨) | |
• ಒಟ್ಟು | ೧೫೦೦ |
ನಾಗೂರ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ.
ಭೌಗೋಳಿಕ
[ಬದಲಾಯಿಸಿ]ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಹವಾಮಾನ
[ಬದಲಾಯಿಸಿ]- ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
- ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
- ಚಳಿಗಾಲ ಮತ್ತು
- ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
- ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
- ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
ಜನಸಂಖ್ಯೆ
[ಬದಲಾಯಿಸಿ]ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
ಸಾಂಸ್ಕೃತಿಕ
[ಬದಲಾಯಿಸಿ]ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಕಲೆ ಮತ್ತು ಸಂಸ್ಕೃತಿ
[ಬದಲಾಯಿಸಿ]ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಧರ್ಮ
[ಬದಲಾಯಿಸಿ]ಭಾಷೆ
[ಬದಲಾಯಿಸಿ]
ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಹಾಗೂ ಇಂಗ್ಲೀಷ್ ಮಾತನಾಡುತ್ತಾರೆ.
ದೇವಾಲಯ
[ಬದಲಾಯಿಸಿ]- ಶ್ರೀ ಮಹಾಲಕ್ಷ್ಮಿ ದೇವಾಲಯ
- ಶ್ರೀ ದುರ್ಗಾದೇವಿ ದೇವಾಲಯ
- ಶ್ರೀ ಹಣಮಂತ ದೇವಾಲಯ
- ಶ್ರೀ ಬೀರಲಿಂಗೇಶ್ವರ ದೇವಾಲಯ
- ಶ್ರೀ ಮಲ್ಲಿಕಾರ್ಜುನ ದೇವಾಲಯ
- ಶ್ರೀ ಯಮನೂರೇಶ್ವರ ದೇವಾಲಯ
ಜಾತ್ರೆ
[ಬದಲಾಯಿಸಿ]ಹೋಳಿ ಹುಣ್ಣಿಮೆಯ 5ದಿನಗಳ ನಂತರ ಯಮನೂರೇಶ್ವ ಜಾತ್ರೆ ಬಹಳ ವಿಜೃಂಭಣೆಯಿಂದ 3ದಿನಗಳ ಕಾಲ ಜರುಗುತ್ತದೆ
ಮಸೀದಿ
[ಬದಲಾಯಿಸಿ]ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ತೊಗರಿಬ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಕೃಷಿ ಮತ್ತು ತೋಟಗಾರಿಕೆ
[ಬದಲಾಯಿಸಿ]ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.
ಉದ್ಯೋಗ
[ಬದಲಾಯಿಸಿ]ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಬೆಳೆ
[ಬದಲಾಯಿಸಿ]ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಹಬ್ಬ
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. ಪ್ರತಿ ವರ್ಷ ಹೋಳಿ ಹುಣ್ಣಿಮೆಯ 5ದಿನಕ್ಕೆ ಯಮನೂರೇಶ್ವ ಜಾತ್ರೆ ಬಹಳ ವಿಜೃಂಭಣೆಯಿಂದ 3ದಿನಗಳ ಕಾಲ ನಡೆಯುತ್ತದೆ
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಖಾಸಗಿ ಪ್ರಾಥಮಿಕ ಶಾಲೆಯೂ ಇದೆ
ಸಾಕ್ಷರತೆ
[ಬದಲಾಯಿಸಿ]ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.
ರಾಜಕೀಯ
[ಬದಲಾಯಿಸಿ]ಗ್ರಾಮವು ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಈ ಲೇಖನವು ಯಾವುದೇ ಮೂಲಗಳನ್ನು ಉಲ್ಲೇಖಿಸಿಲ್ಲ. |
- Pages with non-numeric formatnum arguments
- Pages using infobox mapframe with missing coordinates
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- Articles with unsourced statements
- Articles lacking sources
- All articles lacking sources
- Pages needing interwikilinks
- ಮುದ್ದೇಬಿಹಾಳ ತಾಲ್ಲೂಕಿನ ಹಳ್ಳಿಗಳು
- ಬಸವನ ಬಾಗೇವಾಡಿ ತಾಲ್ಲೂಕಿನ ಹಳ್ಳಿಗಳು
- ಬಿಜಾಪುರ ಜಿಲ್ಲೆ
- ಬಸವನ ಬಾಗೇವಾಡಿ ತಾಲ್ಲೂಕು