ನಾಡೋಜ ಪ್ರಶಸ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search

ನಾಡೋಜ ಪ್ರಶಸ್ತಿಯು ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರತಿವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿ. ನಾಡೋಜ ಎಂಬ ಪದವು ಆದಿಕವಿ ಪಂಪನಿಗೆ ಸಂಬಂಧಿಸಿದ್ದಾಗಿದೆ. ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನದಲ್ಲಿ ನೀಡಲಾಗುತ್ತಿರುವ 'ದೇಶಿಕೋತ್ತಮ' ಪದವಿಯ ಪ್ರೇರಣೆಯಿಂದ ಕನ್ನಡ ವಿವಿ ನಾಡೋಜ ಪದವಿ ನೀಡುತ್ತಿದೆ. ನಾಡೋಜ ಗೌರವ ಪದವಿಯು ಶಾಲು, ಸರಸ್ವತಿ ವಿಗ್ರಹ, ಪ್ರಮಾಣ ಪತ್ರ, ಪ್ರಶಸ್ತಿ ಫಲಕ ಒಳಗೊಂಡಿದೆ.