ಪ್ರಕಾಶ ಖಾಡೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಡಾ.ಪ್ರಕಾಶ ಗಣಪತಿ ಖಾಡೆಯವರು ಕನ್ನಡದ ಹೆಸರಾಂತ ಕವಿಗಳು,ಜಾನಪದ ವಿದ್ವಾಂಸರು.

ಜನನ[ಬದಲಾಯಿಸಿ]

ಡಾ.ಪ್ರಕಾಶ ಗಣಪತಿ ಖಾಡೆ ಅವರು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ 10-06-1965 ರಂದು ಜನಿಸಿದರು.

ಶಿಕ್ಷಣ[ಬದಲಾಯಿಸಿ]

ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ 2005ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ "ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ" ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು.

ವೃತ್ತಿ[ಬದಲಾಯಿಸಿ]

ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ ಸಕ್ರಿ ಪತ್ರಿಕೋದ್ಯಮ ವಿಭಾಗ ಮತ್ತು ಇಳಕಲ್ಲ ವಿಜಯ ಚಿತ್ರಕಲಾ ಸ್ನಾತಕೋತ್ತರ ಕಾಲೇಜು ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ.

ಸಾಹಿತ್ಯ[ಬದಲಾಯಿಸಿ]

ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ಜಾನಪದ, ಶಿಕ್ಷಣ, ಸಂಶೋಧನೆ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಸದಾ ಕ್ರಿಯಾಶೀಲ ವ್ಯಕ್ತಿತ್ವ, ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ, ಆಕಾಶವಾಣಿ, ದೂರದರ್ಶನಗಳಲ್ಲಿ ನಿರಂತರವಾಗಿ ಲೇಖನ, ಕವಿತೆ, ಕಥೆ, ವಿಮರ್ಶೆ ಪ್ರಕಟ ಮತ್ತು ಪ್ರಸಾರ.

 ಈವರೆಗೆ ಗೀತ ಚಿಗಿತ, ಪ್ರೀತಿ ಬಟ್ಟಲು, ತೂಕದವರು, ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ, ಕೃಷ್ಣಾ ತೀರದ ಜನಪದ ಒಗಟುಗಳು, ಮುನ್ನುಡಿ ತೋರಣ, ಜತ್ತಿ ಕಾವ್ಯಾಭಿವಂದನ, ನೆಲಮೂಲ ಸಂಸ್ಕøತಿ, ಕನ್ನಡ ಪತ್ರಿಕೆ ಮತ್ತು ಸಾಹಿತ್ಯ, ಜಾನಪದ ಕೋಗಿಲೆ ಗೌರಮ್ಮ ಚಲವಾದಿ, ಸಾಹಿತ್ಯ ಸಂಗತಿ ,ಮೌನ ಓದಿನ ಬೆಡಗು ,ಕಣ್ಣುಗಳಿಗೆ ಮೌನ ಅರ್ಥವಾಗುತ್ತದೆ,ಶಾಂತಿ ಬೀಜಗಳ ಜತನ,ಬಸವ ಸಂಪದ,ಬಸವ ಸಿರಿ,ಜಾನಪದ ಹೆಬ್ಬಾಗಿಲು,ಕೊರೊನಾ ಕಾಲದ ಕವಿತೆಗಳು,ಬೇಂದ್ರೆ ಕಾವ್ಯದ ದೇಸಿಯತೆ,ಬಾಗಲಕೋಟೆ ಹೋಳಿ, ಕಾವ್ಯ ನಾದದ ಧ್ಯಾನ   ಮೊದಲಾದ 33 ಕೃತಿಗಳು ಪ್ರಕಟ.2021 ರಲ್ಲಿ ಇವರ 'ಚೆಲುವಿ ಚಂದ್ರಿ' ಕಥಾ ಸಂಕಲನ ಬಂದಿದೆ. ಮುಧೋಳ, ಶಿವಮೊಗ್ಗ ಮತ್ತು ವಿಜಾಪುರ,ಮೈಸೂರುಗಳಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಕೇರಳದಲ್ಲಿ ಜರುಗಿದ ಕನ್ನಡ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ. ಉತ್ತಮ ವಾಗ್ಮಿ, ಅಪರೂಪದ ಶಿಕ್ಷಣ ಚಿಂತಕ ಡಾ. ಪ್ರಕಾಶ ಖಾಡೆ  ಬಾಗಲಕೋಟ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಜಾನಪದ ವಿದ್ವಾಂಸ ಸಾಲಿನಲ್ಲಿ ಡಾ.ಖಾಡೆ ಅವರದು ಎದ್ದು ತೋರುವ ಹೆಸರು.