ಬಂಗಾರದ ಮನುಷ್ಯ (ಆತ್ಮಚರಿತ್ರೆ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಬಂಗಾರದ ಮನುಷ್ಯ ಅ.ನಾ.ಪ್ರಹ್ಲಾದ ರಾವ್ ಅವರು ಬರೆದಿರುವ ಡಾ.ರಾಜ್ ಕುಮಾರ್ ಅವರ ಜೀವನಚರಿತ್ರೆ.ಸುಮಾರು 220 ಪುಟಗಳ ಈ ಪುಸ್ತಕದಲ್ಲಿ ಡಾ.ರಾಜಕುಮಾರ್ ಅಭಿನಯದ ಸುಮಾರು 208 ಚಿತ್ರಗಳ ಬಗ್ಗೆ ಮಾಹಿತಿಯೊಂದಿಗೆ , ಅವರ ಜೀವನದ ಸಾಧನೆಯನ್ನು ವಿವರಿಸಲಾಗಿದೆ. ಸಾಮಾಜಿಕವಾಗಿ ಅವರು ನೀಡಿದ ಕೊಡುಗೆಯ ಬಗ್ಗೆ ಈ ಪುಸ್ತಕ ಉಪಯುಕ್ತ ಮಾಹಿತಿಯನ್ನು ಒಳಗೊಂಡಿದೆ.

ಕನ್ನಡ ಪುಸ್ತಕ 2006ರಲ್ಲಿ ಅಮೆರಿಕದ ವಾಷಿಂಗ್ಟನ್ ನಗರದಲ್ಲಿ ನಡೆದ ಅಕ್ಕ ಸಮ್ಮೇಳನ, 2006ರಲ್ಲಿ ಕುವೈತ್ ಕನ್ನಡ ಸಮ್ಮೇಳನದಲ್ಲಿ ಬಿಡುಗಡೆಗೊಂಡಿತು.

ಈ ಪುಸ್ತಕ ಡಾ.ರಾಜಕುಮಾರ್: ದಿ ಇನಿಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್ ಎಂಬ ಹೆಸರಿನಲ್ಲಿ ಇಂಗ್ಲಿಷ್ ಭಾಷೆಗೆ ಭಾಷಾಂತರಗೊಂಡಿದೆ. ಪ್ರೊ.ಸಿ.ಎನ್.ರಾಮಚಂದ್ರನ್ ಮತ್ತು ಅಲ್ಲಾಡಿ ಜಯಶ್ರೀ ಪುಸ್ತಕವನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರಿಸಿದ್ದಾರೆ.

ಇಂಗ್ಲಿಷ್ ಪುಸ್ತಕ ಬೆಂಗಳೂರಿನಲ್ಲಿ ಶ್ರೀಮತಿ ಪಾವ೯ತಮ್ಮ ರಾಜಕುಮಾರ್ ಅವರಿಂದ ಬಿಡುಗಡೆಗೊಂಡಿತಲ್ಲದೆ, ಲಂಡನ್ ನಗರದಲ್ಲಿ ೨೦೦೮ರ ಆಗಸ್ಟ್ ತಿಂಗಳಿನಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ಅಲ್ಲಿನ ಸೆನೆಟರ್ ಬಿಡುಗಡೆ ಮಾಡಿದರು. ಅಮೆರಿಕದಲ್ಲಿ ಇದು ನ್ಯೂಜಸಿ೯ ನಗರದಲ್ಲಿ ಬಿಡುಗಡೆಗೊಂಡಿತು. ಇದು ಡಾ.ರಾಜಕುಮಾರ್ ಅವರನ್ನು ಕುರಿತಾದ ಮೊದಲ ಇಂಗ್ಲಿಷ್ ಪುಸ್ತಕವೇ ಅಲ್ಲದೆ, ದೇಶದ ಹೊರಗಡ ಬಿಡುಗಡೆ ಆದ ಡಾ.ರಾಜಕುಮಾರ್ ಕುರಿತಾದ ಮೊದಲ ಪುಸ್ತಕವೂ ಹೌದು.

https://m.facebook.com/banavasikannadigaru/posts/248581158949189

ಲೇಖಕರಬಗ್ಯೆ[ಬದಲಾಯಿಸಿ]

ಕನ್ನಡದ ಪದಬಂಧ ಲೇಖಕರು.ಇವರು 40,೦೦೦ ಪದಬಂಧಗಳನ್ನು ರಚಿಸಿದ್ದಾರೆ. ಅ.ನಾ.ಪ್ರಹ್ಲಾದ ರಾವ್‌ರವರು, ಕನ್ನಡದ ಪದಬಂಧ ಲೇಖಕರಲ್ಲಿ ಪ್ರಮುಖರು. ಇವರು ಕನ್ನಡದಲ್ಲಿ ಸುಮಾರು 40,000 ಪದಬಂಧಗಳನ್ನು ರಚಿಸಿದ್ದಾರೆ. ಇದುವರೆವಿಗೂ ಇವರು ರಚಿಸಿರುವ ಪದಬಂಧಗಳಿಗಾಗಿ ಹನ್ನೆರಡು ಲಕ್ಷ ಸುಳುಹುಗಳನ್ನು ನೀಡಿದ್ದಾರೆ. ಇವರ ಪದಬಂಧಗಳು ಕನ್ನದದ ಪ್ರಮುಖ ಪ್ರತ್ರಿಕೆಗಳು ಹಾಗು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಇವರ ಸಾಧನೆಯನ್ನು 2015 ಹಾಗೂ 2016ರ ಲಿಮ್ಕಾ ಪುಸ್ತಕದಲ್ಲಿ ದಾಖಲೆ ಮಾಡಲಾಗಿದೆ. ಪದಬಂಧ ರಚನೆಯಲ್ಲಿ ಭಾರತದಲ್ಲೇ ಇವರು ಅಗ್ರಗಣ್ಯರು ಎಂದು ಹೇಳಲಾಗಿದೆ. ಅ.ನಾ.ಪ್ರಹ್ಲಾದರಾವ್ ಕೋಲಾರ ಜಿಲ್ಲೆಯ ಅಬ್ಬಣಿ ಗ್ರಾಮದಲ್ಲಿ ಜುಲೈ 24,1953ರಂದು ಜನಿಸಿದರು. ತಂದೆ ಎ.ಆರ್.ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ. ಬೆಂಗಳೂರು, ಕೋಲಾರದಲ್ಲಿ ವ್ಯಾಸಂಗ ಮುಗಿಸಿ, ವಿಜ್ಞಾನ ಪದವೀಧರರಾದರು. ಮುಕ್ತ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಗಳಿಸಿದರು. ೧೯೭೫ರಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.