ಬಲದಿನ್ನಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಬಲದಿನ್ನಿ
ಬಾಳದಿನ್ನಿ
village

ಬಾಳದಿನ್ನಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.

ಭೌಗೋಳಿಕ[ಬದಲಾಯಿಸಿ]

ಗ್ರಾಮವು ಭೌಗೋಳಿಕವಾಗಿ 16* 31' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ[ಬದಲಾಯಿಸಿ]

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - 35°C-43°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - 18°C-30°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ 18 ಕಿಮಿ/ಗಂ (ಜೂನ), 19 ಕಿಮಿ/ಗಂ (ಜುಲೈ)ಹಾಗೂ 17 ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ[ಬದಲಾಯಿಸಿ]

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.

ಸಾಂಸ್ಕೃತಿಕ[ಬದಲಾಯಿಸಿ]

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ[ಬದಲಾಯಿಸಿ]

ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಧರ್ಮ[ಬದಲಾಯಿಸಿ]

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆ[ಬದಲಾಯಿಸಿ]

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ ಹಾಗೂ ಮರಾಠಿ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯ[ಬದಲಾಯಿಸಿ]

  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ವೆಂಕಟೇಶ್ವರ ದೇವಾಲಯ
  • ಶ್ರೀ ಪಾಂಡುರಂಗ ದೇವಾಲಯ
  • ಶ್ರೀ ಹಣಮಂತ ದೇವಾಲಯ

ಮಸೀದಿ[ಬದಲಾಯಿಸಿ]

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ[ಬದಲಾಯಿಸಿ]

ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕೃಷಿ[ಬದಲಾಯಿಸಿ]

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.

ಆರ್ಥಿಕತೆ[ಬದಲಾಯಿಸಿ]

ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.

ಉದ್ಯೋಗ[ಬದಲಾಯಿಸಿ]

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆ[ಬದಲಾಯಿಸಿ]

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಸಸ್ಯ[ಬದಲಾಯಿಸಿ]

ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ[ಬದಲಾಯಿಸಿ]

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.

ಹಬ್ಬ[ಬದಲಾಯಿಸಿ]

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

ಸಾಕ್ಷರತೆ[ಬದಲಾಯಿಸಿ]

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು 67%. ಅದರಲ್ಲಿ 75% ಪುರುಷರು ಹಾಗೂ 55% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ[ಬದಲಾಯಿಸಿ]

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರ ಮತ್ತು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಗ್ರಾಮದ ಧುರೀಣರಾದ ಸಿ.ಎಸ್.ನಾಡಗೌಡರು 5 ಶಾಸಕರಾಗಿ, ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕ, ನವದೆಹಲಿ ವಿಶೇಷ ಪ್ರತಿನಿಧಿಯಾಗಿದ್ದರು.

ಕ್ಷೇತ್ರದ ಇತಿಹಾಸ

ಆಂಗ್ಲರ ಅಧಿಪತ್ಯ ಅಳಿದು 70 ವರ್ಷಗಳಾದರೂ ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಮತದಾರ ಪ್ರಭು ಇನ್ನೂ ದೇಸಗತಿ ಮನೆತನಕ್ಕೆ ಮಣೆ ಹಾಕುತ್ತಿರುವುದು ಕ್ಷೇತ್ರದ ವಿಶೇಷ. ಊಳುವವನೇ ಒಡೆಯ ಕಾಯ್ದೆಯನ್ವಯ ನೂರಾರು ಎಕರೆ ಜಮೀನು ಬಿಟ್ಟುಕೊಟ್ಟ ಶಾಸಕ ಸಿ.ಎಸ್. ನಾಡಗೌಡ ಹಾಗೂ ಜಗದೇವರಾವ ದೇಶಮುಖ ಮನೆತನಕ್ಕೆ ಇಲ್ಲಿನ ಮತದಾರರು ಅಧಿಕಾರದ ಫಲ ನೀಡುತ್ತಲೇ ಇದ್ದಾರೆ. 1978 ರಿಂದ 2018ರವರೆಗೆ ಸುಮಾರು 40 ವರ್ಷಗಳ ಕಾಲ ಚುನಾವಣೆವರೆಗಿನ ಕ್ಷೇತ್ರದ ಇತಿಹಾಸ ಗಮನಿಸಿದಾಗ ಹೆಚ್ಚಿನ ಅಧಿಕಾರ ಅನುಭವಿಸಿದ್ದು ಇದೇ ಎರಡು ಮನೆತಗಳು ಎಂಬುದು ಗಮನಾರ್ಹ.

ದೇಶಮುಖ ಮನೆತನದ ನಾಯಕ ಜಗದೇವರಾವ ಸಂಗನಬಸಪ್ಪ ದೇಶಮುಖರು ಸತತ ಮೂರು ಬಾರಿ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸಿದ್ದರು. ಅವರ ಅಕಾಲಿಕ ನಿಧನ ಬಳಿಕ ಕ್ಷೇತ್ರ ಕೈ ತಪ್ಪಿತು. ಮಧ್ಯಂತರದಲ್ಲಿ ಅಧಿಕಾರ ಕಸಿದುಕೊಂಡಿದ್ದ ಸಿ.ಎಸ್. ನಾಡಗೌಡರಿಂದ ಮತ್ತೆ ಕ್ಷೇತ್ರ ಕೈವಶ ಮಾಡಿಕೊಳ್ಳುವಲ್ಲಿ ಜಗದೇವರಾವ ಅವರ ಪತ್ನಿ ವಿಮಲಾಬಾಯಿ ದೇಶಮುಖ ಸಫಲರಾದರು. 1994ರಲ್ಲಿ ಅನುಕಂಪದ ಆಧಾರದ ಮೇಲೆ ವಿಮಲಾದೇವಿ ದೇಶಮುಖ ಭರ್ಜರಿ ಜಯಸಾಧಿಸಿದರು.

ಕ್ಷೇತ್ರದ ವಿಶೇಷತೆ

1957ರಲ್ಲಿ ಸಿದ್ಧಾಂತಿ ಪ್ರಾಣೇಶ ಗುರುಭಟ್ಟ (ಬ್ರಾಹ್ಮಣ), 1972ರಲ್ಲಿ ಮಲ್ಲಪ್ಪ ಮುರಗೆಪ್ಪ ಸಜ್ಜನ(ಗಾಣಿಗ) ಶಾಸಕರಾಗಿ ಆಯ್ಕೆಯಾಗಿದ್ದು ಹೊರತುಪಡಿಸಿದರೆ, ಉಳಿದ ಅವಧಿಗೆ (1978ರಿಂದ 2018ರವರೆಗಿನ ನಾಲ್ಕು ದಶಕಗಳ ಅವಧಿ) ಆಯ್ಕೆಯಾದವರು ಪಂಚಮಸಾಲಿ ಮತ್ತು ರಡ್ಡಿ ಸಮುದಾಯದವರು.

ಸತತ ಮೂರು ಬಾರಿ ಜೆ.ಎಸ್‌.ದೇಶಮುಖ (ಪಂಚಮಸಾಲಿ), 1994ರಲ್ಲಿ ವಿಮಲಾಬಾಯಿ ದೇಶಮುಖ ಆಯ್ಕೆಯಾದರೆ, ಉಳಿದ 25 ವರ್ಷದ ಅವಧಿ ಸಿ.ಎಸ್‌.ನಾಡಗೌಡ (ರಡ್ಡಿ) ಶಾಸಕರು. ಈ ಅವಧಿಯಲ್ಲಿ ಸ್ಪರ್ಧೆ ನಡೆದಿದ್ದು, ಈ ಎರಡೂ ಮನೆತನಗಳ ನಡುವೆಯೇ. ಒಮ್ಮೆ ಮಾತ್ರ ಬಿಜೆಪಿಯ ಮಂಗಳಾದೇವಿ ಬಿರಾದಾರ ಪ್ರಬಲ ಪೈಪೋಟಿ ನೀಡಿದ್ದಾರೆ.

ಪಕ್ಷವಾರು ಸಾಧನೆ ಪರಿಗಣಿಸಿದರೆ ಸದರಿ ಕ್ಷೇತ್ರ ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದೆ. 1957ರ ಸಾರ್ವತ್ರಿಕ ಚುನಾವಣೆ ಗಣನೆಗೆ ತೆಗೆದುಕೊಳ್ಳುವುದಾದರೆ ಅಂದಿನ ಭಾರತೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತಿ ಪ್ರಾಣೇಶ ಗುರುಭಟ್ಟರು, ಆ ಬಳಿಕ ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿ, ಹಾಗೂ ಮಲ್ಲಪ್ಪ ಮುರಗೆಪ್ಪ ಸಜ್ಜನ ಸಾಲಾಗಿ ಆಯ್ಕೆಯಾಗಿದ್ದು ಕಾಂಗ್ರೆಸ್ ಸಾಧನೆ. ಪ್ರಪ್ರಥಮ ಬಾರಿಗೆ ಜನತಾ ಪಕ್ಷದಿಂದ ಜಗದೇವರಾವ ಅವರು ಅಧಿಕಾರ ಕಸಿದುಕೊಂಡು ಹ್ಯಾಟ್ರಿಕ್ ಸಾಧನೆ ಮೆರೆದರು.

1966ರಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆಯಾದ ಬಳಿಕ ತಾಳಿಕೋಟೆ ಕ್ಷೇತ್ರವು ಮುದ್ದೇಬಿಹಾಳ ಕ್ಷೇತ್ರದಲ್ಲಿ ವಿಲೀನವಾಯಿತು. ಮೊದಲೆರಡು ಚುನಾವಣೆಯಲ್ಲಿ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗಿದ್ದ ತಾಳಿಕೋಟೆಯಿಂದ 1957ರಲ್ಲಿ ಕುಮಾರಗೌಡ ಅಡಿವೆಪ್ಪಗೌಡ ಪಾಟೀಲರು ಸ್ವತಂತ್ರ ಅಭ್ಯರ್ಥಿಯಾಗಿ(15,200) ಗೆಲುವು ಸಾಧಿಸಿದರು. ಇವರ ವಿರುದ್ಧ ಭಾರತೀಯ ಕಾಂಗ್ರೆಸ್ ಪಕ್ಷದಿಂದ ಶರಣಯ್ಯ ಬಸಲಿಂಗಯ್ಯ ವಸ್ತ್ರದ (12,804) ಪರಾಜಯಗೊಂಡರು. ಆ ಬಳಿಕ 1962ರಲ್ಲಿ ಗದಿಗೆಪ್ಪಗೌಡ ನಿಂಗನಗೌಡ ಪಾಟೀಲ ಭಾರತೀಯ ಕಾಂಗ್ರೆಸ್​ನಿಂದ ಅವಿರೋಧ ಆಯ್ಕೆಯಾದರು.

ಜಗದೇವರಾವ ಅವರು ವಿದ್ಯುತ್ ಖಾತೆ ಸಚಿವರು, ಅವರ ಪತ್ನಿ ವಿಮಲಾಬಾಯಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಶಾಸಕ ಸಿ.ಎಸ್.ನಾಡಗೌಡರು ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕ, ನವದೆಹಲಿ ವಿಶೇಷ ಪ್ರತಿನಿಧಿಯಾಗಿದ್ದು ಕ್ಷೇತ್ರದ ಮೈಲಿಗಲ್ಲು.

ಜನಪ್ರತಿನಿಧಿಗಳ ವಿವರ

ವರ್ಷ ವಿಧಾನ ಸಭಾ ಕ್ಷೆತ್ರ ವಿಜೇತ ಪಕ್ಷ ಮತಗಳು ಉಪಾಂತ ವಿಜೇತ ಪಕ್ಷ ಮತಗಳು
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಕರ್ನಾಟಕ ರಾಜ್ಯ
2013 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ ಕಾಂಗ್ರೆಸ್ 34747 ವಿಮಲಾಬಾಯಿ ದೇಶಮುಖ ಕೆ.ಜೆ.ಪಿ 22545
2008 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ ಕಾಂಗ್ರೆಸ್ 24065 ಮಂಗಳಾದೇವಿ ಬಿರಾದಾರ ಬಿ.ಜೆ.ಪಿ 21662
2004 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ ಕಾಂಗ್ರೆಸ್ 30203 ವಿಮಲಾಬಾಯಿ ದೇಶಮುಖ ಜೆ.ಡಿ.ಎಸ್. 27776
1999 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ ಕಾಂಗ್ರೆಸ್ 43662 ವಿಮಲಾಬಾಯಿ ದೇಶಮುಖ ಜೆ.ಡಿ.ಯು. 32632
1994 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ವಿಮಲಾಬಾಯಿ ದೇಶಮುಖ ಜೆ.ಡಿ. 39149 ಸಿ.ಎಸ್.ನಾಡಗೌಡ ಕಾಂಗ್ರೆಸ್ 21756
1989 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿ.ಎಸ್.ನಾಡಗೌಡ ಕಾಂಗ್ರೆಸ್ 31933 ಜಗದೇವರಾವ್ ದೇಶಮುಖ ಜೆ.ಡಿ. 29840
1985 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಜಗದೇವರಾವ್ ದೇಶಮುಖ ಜೆ.ಎನ್.ಪಿ. 35056 ಬಸವರಾವ್ ಜಗ್ಗಲ ಕಾಂಗ್ರೆಸ್ 16052
1983 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಜಗದೇವರಾವ್ ದೇಶಮುಖ ಜೆ.ಎನ್.ಪಿ. 21885 ರಾಮರಾವ್ ಭಗವಂತ ಸ್ವತಂತ್ರ 9530
1978 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಜಗದೇವರಾವ್ ದೇಶಮುಖ ಜೆ.ಎನ್.ಪಿ. 28857 ಮಲ್ಲಪ್ಪ ಸಜ್ಜನ ಕಾಂಗ್ರೆಸ್ 11486
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಮೈಸೂರು ರಾಜ್ಯ
1972 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಮಲ್ಲಪ್ಪ ಸಜ್ಜನ ಕಾಂಗ್ರೆಸ್ 17778 ಶಿವಶಂಕರಪ್ಪ ಗುರಡ್ಡಿ ಎನ್.ಸಿ.ಓ 17021
1967 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಶಿವಶಂಕರಪ್ಪ ಗುರಡ್ಡಿ ಕಾಂಗ್ರೆಸ್ 19452 ಶ್ರೀಶೈಲಪ್ಪ ಮಸಳಿ ಎಸ್.ಡ್ಬ್ಲೂ.ಎ 14740
1962 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಶಿವಶಂಕರಪ್ಪ ಗುರಡ್ಡಿ ಕಾಂಗ್ರೆಸ್ 13969 ಶ್ರೀಶೈಲಪ್ಪ ಮಸಳಿ ಎಸ್.ಡ್ಬ್ಲೂ.ಎ 10680
1957 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿದ್ಧಾಂತಿ ಪ್ರಾಣೇಶ ಭಟ್ ಕಾಂಗ್ರೆಸ್ 12888 ಶಿವಬಸವಸ್ವಾಮಿ ವಿರಕ್ತಮಠ ಸ್ವತಂತ್ರ 11657
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಬಾಂಬೆ ರಾಜ್ಯ
1951 ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಸಿದ್ಧಾಂತಿ ಪ್ರಾಣೇಶ ಭಟ್ ಕಾಂಗ್ರೆಸ್ 16627 ಭೀಮನಗೌಡ ಪಾಟೀಲ ಕೆ.ಎಂ.ಪಿ.ಪಿ 7745

ವಿಜಯಪುರ ಶ್ರೀಮಂತ ಪೃಥ್ವಿರಾಜ ನಾಡಗೌಡ ಶ್ರೀಮಂತ ರಾಹುಲ್ (ಚಿನ್ನುಧಣಿ) ನಾಡಗೌಡ

ಕರ್ನಾಟಕ