ಬಿದರಿ

ವಿಕಿಪೀಡಿಯ ಇಂದ
Jump to navigation Jump to search
ಬಿದರಿ
India-locator-map-blank.svg
Red pog.svg
ಬಿದರಿ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಬಾಗಲಕೋಟ
ನಿರ್ದೇಶಾಂಕಗಳು 16.1833° N 75.7000° E
ವಿಸ್ತಾರ
 - ಎತ್ತರ
೨೦೦ km²
 - 770 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೧೨)
 - ಸಾಂದ್ರತೆ
೨೦೦೦
 - ೫೦/ಚದರ ಕಿ.ಮಿ.


ಬಿದರಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿದೆ. ಜಿಲ್ಲಾ ಕೇಂದ್ರ ಬಾಗಲಕೋಟಯಿಂದ ಸುಮಾರು ೧೦೦ ಕಿ. ಮಿ. ಇದ್ದು ಸಾವಳಗಿ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಗ್ರಾಮದಲ್ಲಿ ಸರಕಾರಿ ಉಪ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ ಮತ್ತು ಅಂಚೆ ಕಚೇರಿ ಇದೆ.

ದೇವಾಲಯಗಳು[ಬದಲಾಯಿಸಿ]

ಶ್ರೀ ಪಾಂಡುರಂಗ ದೇವಾಲಯ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ಸಂಘಟನೆಗಳು[ಬದಲಾಯಿಸಿ]

ಶ್ರೀ ಬಸವೇಶ್ವರ ಯುವಕ ಮಂಡಳಿ ಹಾಗೂ ಕನಕ ಸೇನೆ ಇದೆ.

ನೀರಾವರಿ[ಬದಲಾಯಿಸಿ]

ಗ್ರಾಮದ ಪ್ರತಿಶತ ೬೫ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು[ಬದಲಾಯಿಸಿ]

ಪ್ರತಿವರ್ಷ ಶ್ರೀ ಹನುಮಾನ ಉತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿರುವ ಶಿಕ್ಷಣ ಸಂಸ್ಥೆಗಳು

  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
  • ಶ್ರೀ ಕುಮಾರೇಶ್ವರ ಪ್ರೌಢಶಾಲೆ
Karnataka-icon.jpg
ಬಾಗಲಕೋಟೆ ತಾಲ್ಲೂಕುಗಳು
ಇಳಕಲ್ಲ | ಗುಳೇದಗುಡ್ಡ | ಜಮಖಂಡಿ | ಬಾಗಲಕೋಟೆ | ಬಾದಾಮಿ | ಬೀಳಗಿ | ಮುಧೋಳ | ರಬಕವಿ – ಬನಹಟ್ಟಿ | ಹುನಗುಂದ
"https://kn.wikipedia.org/w/index.php?title=ಬಿದರಿ&oldid=837722" ಇಂದ ಪಡೆಯಲ್ಪಟ್ಟಿದೆ