ಬುದ್ಧ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಗೌತಮಬುದ್ಧ
ಕ್ರಿ.ಶ ೪ ನೇ ಶತಮಾನದಲ್ಲಿ ಸಾರನಾಥ್ ನಿಂದ ಬುದ್ಧನ ಪ್ರತಿಮೆ
ಜನನc. 563 BCE or c. 480 BCE[೧][೨]
ಲುಂಬಿನಿ[note ೧]
ಮರಣc. 483 BCE or c. 400 BCE (aged 80)
ಖುಷಿನಗರ [note ೨]
ಇದಕ್ಕೆ ಖ್ಯಾತರುಬೌದ್ಧಧರ್ಮದ ಸಂಸ್ಥಾಪಕ
Predecessorಕಾಸಪ್ಪ ಬುದ್ಧ
ಉತ್ತರಾಧಿಕಾರಿಮೈತ್ರೇಯ ಬುದ್ಧ
ಪೋಷಕರು
  • ಶುದ್ಧೋಧನ (father)
  • ಮಾಯ (mother)

ಗೌತಮ ಬುದ್ಧ (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೩] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

ಗೌತಮ ಬುದ್ಧನ ಜನನ[ಬದಲಾಯಿಸಿ]

ಗೌತಮ ಬುದ್ಧನ ಹುಟ್ಟು ಸ್ಥಳ ಲುಂಬಿನಿ ಗ್ರಾಮ. ತಂದೆ ಶುದ್ಧೋಧನ ತಾಯಿ ಮಾಯಾದೇವಿ. ಮೊದಲ ಹೆಸರು ಸಿದ್ದಾರ್ಥ. ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡ ಬುದ್ಧನನ್ನು ಗೌತಮಿ ಎಂಬ ಸ್ತ್ರೀಯೊಬ್ಬಳು ಸಾಕುತ್ತಾಳೆ. ಆದುದರಿಂದ ಸಿದ್ದಾರ್ಥ 'ಗೌತಮ'ನೆಂದು ಕರೆಯಲ್ಪಡುತ್ತಾನೆ. ತಂದೆ ಶುದ್ಧೋಧನ ಮಗ ಚಕ್ರವರ್ತಿಯಾಗಬೇಕೆಂಬ ಆಶಯದಿಂದ ಅವನಿಗೆ ದುಃಖದ ಸನ್ನಿವೇಶಗಳೇ ಕಾಣದಂತಹ ಕೃತಕ ವಾತಾವರಣವನ್ನು ಸೃಷ್ಟಿಸಿ, ಅವನನ್ನು ಬೆಳೆಸುತ್ತಾನೆ. ಯಶೋಧರೆ ಎಂಬ ಸುಂದರ ಕನ್ಯೆಯೊಂದಿಗೆ ಅವನ ವಿವಾಹವನ್ನು ಮಾಡುತ್ತಾನೆ. ಗೌತಮನಿಗೆ 'ರಾಹುಲ' ಎಂಬ ಮಗನು ಹುಟ್ಟುತ್ತಾನೆ. ಮಗುವಿಗೆ ವರ್ಷ ತುಂಬುವುದರೊಳಗೆ ಸಿದ್ದಾರ್ಥನಿಗೆ ದುಃಖದ 'ದಿವ್ಯದರ್ಶನ'ವಾಗುತ್ತದೆ. ಇಡೀ ಜಗತ್ತಿನ ಘೋರ ದುಃಖವನ್ನು ಕಂಡು ಬೆಚ್ಚಿಬಿದ್ದ ಸಿದ್ದಾರ್ಥ, ಸೇವಕ ಚೆನ್ನನೊಡನೆ ಜಗವೆಲ್ಲಾ ಮಲಗಿರುವಾಗ ಬುದ್ದನಾಗಲೂ ಹೊರಟು, ದುಃಖಕ್ಕೆ ಶಾಶ್ವತ ಪರಿಹಾರವನ್ನು ಕಂಡು ಹಿಡಿಯಲು ಪ್ರಯತ್ನಿಸುತ್ತಾನೆ.

ಬುದ್ಧನು 'ಬೌದ್ಧ ಧರ್ಮದ ಸ್ಥಾಪಕ' ಎನ್ನುವುದು ಜನಜನಿತವಾಗಿರುವ ಸಂಗತಿಯಾದರೂ ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು ಪಾಲಿ ಭಾಷೆಯಲ್ಲಿ "ಧಮ್ಮ" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ ಮುಕ್ತರಾಗಬಹುದು ಮತ್ತು ತನ್ನಂತೆ ಎಚ್ಚರದ ಸ್ಥಿತಿಯನ್ನು ಹೊಂದಬಹುದು. ಆದರೆ ಈ ಸಿದ್ಧಿಗೆ ಸ್ವಂತ ಪ್ರಯತ್ನ, ಸಾಧನೆ ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬೇಕಾದರೂ ಬುದ್ಧನೆಂದು ಕರೆಯಬಹುದು. ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ ಶಿಷ್ಯರಿಗೆ ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ ನಿದ್ದೆಯಿಂದ ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. "ಆಸೆಯೇ ದುಃಖಕ್ಕೆ ಮೂಲ" ಎಂಬುದು ಅವನ ಪ್ರಸಿದ್ಧ ತತ್ವ.

"ಮುಕ್ತಿ ಮಾರ್ಗ" ವಿಶ್ವದ ಪ್ರಸಿದ್ಧವಾಗಿರುವ ಧಮ್ಮ ಮಾರ್ಗವೇಂದರೆ, ಅದು ಬೌದ್ಧ ಧಮ್ಮ ಇದನ್ನು ಕಂಡುಹಿಡಿದ ಭಾರತದ ಸರಹದ್ದಿನಲ್ಲಿ ಜ್ಞಾನ ಯೋಗಿ ಗೌತಮ ತನ್ನ ಜ್ನಾನೋದಯವನ್ನು ಪಡೆದ ಇದರಿಂದ ಈತನನ್ನು ಬುದ್ಧನೆಂದು ಕರೆಯಲಾಗುತ್ತದೆ. ವಿವಿಧ ಪಂಥಗಳ ಗುರುಗಳ ಹತ್ತಿರ ಸತತವಾಗಿ ೬ವರ್ಷಗಳ ಕಾಲ ಅವರು ಹೇಳಿದಂತೆ ದೇಹ ದಂಡನೆ ಮಾಡಿ ಇದರಿಂದ ಯಾವುದೇ ಪ್ರತಿ ಫಲ ಮತ್ತು ಶಾಂತಿ ಸಿಗದೆ ಅಂತಿಮವಾಗಿ ಪರಮ ಸತ್ಯ ಕಾಣಲು ಮುಂದಿನ ೬ ವರ್ಷಗಳು ಬೋಧಿ ವೃಕ್ಷದ ಕೆಳಗೆ ನಿರಂತರ ಧ್ಯಾನ ತಪಸ್ಸು ಮಾಡುವುದರ ಮೂಲಕ ಪರಿಪೂರ್ಣ ಜ್ನಾನೋದಯ ಪಡೆದುಕೊಂಡನು. ಗೌತಮ ಬುದ್ಧರು ಮುಂದಿನ ೪೫ ವರ್ಷಗಳು ನಿರಂತರವಾಗಿ ಧಮ್ಮೋಪದೇಶಗಳನ್ನು ಜನಸಾಮಾನ್ಯರಿಗೆ ನೀಡುವ ಮೂಲಕ ಮಾನವನ ದುಖ ನಿವಾರಣೆಗೆ ತ್ರಿಸರಣ ಬೋಧನೆ ಮಾಡಿದರು. ಈ ಮೂರು ಬೌದ್ಧ ಧಮ್ಮದ ಮೂಲ ಸಂಕೇತಗಳು.ಇವುಗಳನ್ನು ಪ್ರತಿಯೋಬ್ಬರ ಜೀವನ ಧ್ಯೇಯಗಳಾಗಿ ಒಪ್ಪಿಕೊಂಡು ಸಂತೋಷವಾಗಿರುವುದು. ಅವುಗಳೆಂದರೆ, ಬುದ್ಧಂ ಶರಣಂ ಗಚ್ಚಾಮಿ(ನಾನು ಬುದ್ಧನಿಗೆ ಶರಣಾಗುತ್ತೆನೆ.) ಧಮ್ಮಂ ಶರಣಂ ಗಚ್ಚಾಮಿ(ನಾನು ಧಮ್ಮಕ್ಕೆ ಶರಣಾಗುತ್ತೆನೆ.) ಸಂಘಂ ಶರಣಂ ಗಚ್ಚಾಮಿ(ನಾನು ಸಂಘಕ್ಕೆ ಶರಣಾಗುತ್ತೆನೆ.)

ಗಚ್ಚಾಮಿ ಎಂದರೆ, ಸತ್ಯದಿಂದ ಬೌದ್ಧ ಧಮ್ಮ ಸ್ವೀಕರಿಸುತ್ತೆನೆ ಎಂದು ಅರ್ಥೈಸುತ್ತದೆ. ಈ ಮೂರು ಶರಣ್ಯಗಳನ್ನು ಉಪಾಸಕರು ಮೂರು ಬಾರಿ ಉಚ್ಚರಿಸುವ ಮೂಲಕ ತಾವು ಬೌದ್ಧ ಧಮ್ಮಾಚಾರಿಗಳೆಂದು ಘೋಷಿಸುತ್ತಾರೆ.

ಬುದ್ಧ: ಬುದ್ಧನು ದೇವರಲ್ಲ, ದೇವದೂತನೂ ಅಲ್ಲ, ಮತ್ತು ಇತನು ದೈವಸಂಭೂತನೂ ಅಲ್ಲ ಆದರೆ ತನ್ನ ಸ್ವಸಾಮಾರ್ಥ್ಯದಿಂದ , ಅತ್ಯುನ್ನತ ಜ್ಞಾನ ಪಡೆದು ಜಗತ್ತಿನ ಪರಮ ಸತ್ಯವನ್ನು ಬೋಧಿಸಿದ ಮಹಾಗುರು.ಮದ್ಯಮ ಮಾರ್ಗದ ಮೂಲಕ ಮೈತ್ರಿ, ಕರುಣೆ,ದಯೇ , ಸಮತೆ, ಪ್ರೀತಿ, ಅನುಕಂಪ, ಮತ್ತು ಜ್ಙಾನದೂಂದಿಗೆ ಅಷ್ಠಾಂಗ ಮಾರ್ಗಗಳನ್ನು ತೋರಿಸಿಕೊಟ್ಟರು. ಈ ಸತ್ಯ ವನ್ನು ನಾವು ಪರಿಪಾಲಿಸಿದರೆ ಸಮ್ಮ ಜೀವನದಲ್ಲಿ ಬುದ್ಧತ್ವವನ್ನು ಪಡೆಯಬಹುದು. ಧಮ್ಮ: ಬುದ್ಧರು ಧಮ್ಮವನ್ನು ಜೀವನ ಮಾರ್ಗವೆಂದು ಹೇಳಿದ್ದಾರೆ.ಪರಿಶುದ್ದವಾದ ಜೀವನ ನಡೆಸುವುದು ಪ್ರತಿಯೋಬ್ಬರ ಕರ್ತವ್ಯವಾಗಿದೆ.ಇದರಿಂದ ದುಖ್ಖ ನಿವಾರಣೆ ಸಾದ್ಯ. ಧಮ್ಮ ವೆಂದರೆ ಇತರೆ ಧರ್ಮಗಳಲ್ಲಿರುವಂತೆ ಅದು ತತ್ವಶಾಸ್ತ್ರವಲ್ಲ. ಇದು ಎಲ್ಲರಿಗೂ ಮುಕ್ತವಾದ ರೀತಿಯಲ್ಲಿ ಸತ್ಯದ ಬೆಳಕು ಚಲ್ಲುತ್ತದೆ ಇದರಿಂದ ಜೀವನ ಸಾಕ್ಷಾತ್ಕಾರವನ್ನು ಪಡೆಯ ಬಹುದು. ಮನುಷ್ಯರು ಮನಸ್ಸಿನ ಶುದ್ಧಿ ಮತ್ತು ಅಂತರ್ ದೃಷ್ಟಿಯಿಂದ ಅಂತಿಮವಾಗಿ ನಿಬ್ಬಾಣ ಹೊಂದಬಹುದು. ಬುದ್ಧರ ಉಪದೇಶಗಳು ಜ್ಞಾನ ಮಾರ್ಗವನ್ನು ಬೋಧಿಸಿದೆ. ಧಮ್ಮ ಮಾರ್ಗವನ್ನು ಉಪಾಸಕರು ಮತ್ತು ಬೌದ್ಧ ಭಿಕ್ಕು

ಇಬ್ಬರು ಅನುಸರಿಸಲು ತಿಳಿಸಲಾಗಿದೆ.ಸಂರ್ಪೂರ್ಣ ಮುಕ್ತಿ ಮಾರ್ಗ ಸಿದ್ಧಿಗೆ ಭಿಕ್ಕುಗಳ ಮತ್ತು ಸಂಘಗಳು ಜೀವನ ನಡವಳಿಕೆಗೆ ಸಂಬಂಧಿಸಿದಂತೆ ತ್ರಿಪಿಠಕಗಳನ್ನು ಭೋಧಿಸಿದ್ದಾರೆ.

ಅವುಗಳೆಂದರೆ: ೧.ವಿನಯ ಪಿಟಕ: ಭಿಕ್ಕು ಮತ್ತು ಭಿಕ್ಕು ಸಂಘಗಳ ನಡವಳಿಕೆಗಳಿದೆ ಸಂಬಂಧಿಸಿದ ನಿಯಮಗಳನ್ನು ಕ್ರೋಢೀಕರಿಸಲಾಗಿದ ಗ್ರಂಥವಾಗಿದೆ. ೨.ಸುತ್ತ ಪಿಟಕ: ನಾಲ್ಕು ಆರ್ಯ ಸತ್ಯಗಳಿಗೆ ಸಂಬಂಧಿಸಿದಂತೆ ಅನೇಕ ಸಂಭಾಷಣೆಗಳು, ಗೀತೆಗಳು, ಕಥೆ ಉಪಕಥೆಗಳು ಮುಂತಾದವುಗಳನ್ನು ಸಂಗ್ರಹಿಸಿದ ಗ್ರಂಥವಾಗಿದೆ. ೩. ಅಭಿಧಮ್ಮ ಪಿಟಕ : ಸುತ್ತ ಪಿಟಕದಲ್ಲಿನ ಬೋಧನೆಗಳನ್ನು ಮೂಲ ತತ್ವಗಳನ್ನು ವಿಶಾದೀಕರಿಸಿದ ಗ್ರಂಥವಾಗಿದೆ. ಸಂಘ: ಬೌದ್ಧ ಸಂಘಗಳು ಬುದ್ಧನ ಕಾಲದಿಂದಲು ಸ್ಥಾಪಿಸಲ್ಪಟ್ಟಿದ್ದರು ಅವುಗಳಿಗೆ ನಿಜವಾದ ಮಾರ್ಗ ಸೂಚಿಯನ್ನು ಭಗವಾನ್ ಬುದ್ಧರು ತಮ್ಮ ಭೋಧನೆಯ ಮಾರ್ಗದಿಂದ ತಿಳಿಸಿದರು. ಇಂತಹ ಭಿಕ್ಕು ಸಂಘಗಳು ಇಂದಿಗೂ ವಿಶ್ವದ್ಯಾಂತ ಸಂಘಟಿತವಾಗಿ ಬರ್ಮಾ, ಥೈಲ್ಯಾಂಡ್,ಶ್ರೀಲಂಕಾ, ಕ್ಯಾಂಬೋಡಿಯಾ, ಲಾವೋಸ್, ಚಿತ್ತಗಾಂಗ್, ಜಪಾನ್,ಚೀನಾ,ಟಿಬೆಟ್, ಇಂದಿಗೂ ತನ್ನ ಮೂಲಸ್ವರೂಪದಲ್ಲಿ ಸಂಘಟನೆ ಇವೆ. ಬೌದ್ಧ ಭಿಕ್ಕು ಮತ್ತು ಭಿಕ್ಕಿಣಿ ಸಂಘಗಳು ಅಮೆರಿಕಾ , ರಷ್ಯ, ಕ್ಯಾನಡ, ಪ್ರಾನ್ಸ್ ,ಜರ್ಮನ್ ರಾಷ್ಟ್ರಗಳಲ್ಲಿ ಧಮ್ಮದ ಉನ್ನತಿಗಾಗಿ ಸೇವೆ ಮಾಡುತ್ತಿವೆ.

  1. Cousins 1996, pp. 57–63.
  2. Norman 1997, p. 33.
  3. http://www.dhamma.org
  1. ಉಲ್ಲೇಖ ದೋಷ: Invalid <ref> tag; no text was provided for refs named birthplace
  2. According to Mahaparinibbana Sutta,[web ೧] Gautama died in Kushinagar, which is located in present day Uttar Pradesh, ಭಾರತ.


ಉಲ್ಲೇಖ ದೋಷ: <ref> tags exist for a group named "web", but no corresponding <references group="web"/> tag was found

"https://kn.wikipedia.org/w/index.php?title=ಬುದ್ಧ&oldid=1196848" ಇಂದ ಪಡೆಯಲ್ಪಟ್ಟಿದೆ