ಭಾಸ್ಕರಾಚಾರ್ಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಭಾಸ್ಕರಾಚಾರ್ಯ
ಜನನ೧೧೧೪
ಬಿಜ್ಜಡಬೀಡ,(ಈಗಿನ ಬಿಜ್ಜರಗಿ ) ವಿಜಯಪುರ ಜಿಲ್ಲೆ, ಕರ್ನಾಟಕ
ಮರಣ೧೧೮೫
ವೃತ್ತಿಗಣಿತಜ್ಞ, ಖಗೋಳಶಾಸ್ತ್ರಜ್ಞ
ರಾಷ್ಟ್ರೀಯತೆಭಾರತೀಯ
ವಿಷಯಗಣಿತ, ಖಗೋಳಶಾಸ್ತ್ರ
ಮಕ್ಕಳುಲೀಲಾವತಿ

ಭಾಸ್ಕರಾಚಾರ್ಯ ಅಥವಾ ಎರಡನೆಯ ಭಾಸ್ಕರ (೧೧೧೪ - ೧೧೮೫), ಭಾರತದ ಗಣಿತಜ್ಞ ಹಾಗೂ ಖಗೋಳ ಶಾಸ್ತ್ರಜ್ಞ.

ಜೀವನ ಸಾಧನೆ[ಬದಲಾಯಿಸಿ]

ಕರ್ನಾಟಕ ರಾಜ್ಯದ ವಿಜಯಪುರ ಬಳಿ ಬಿಜ್ಜಡಬೀಡ ಎಂಬಲ್ಲಿ ಜನಿಸಿದ. ಇವನ ಕಾಲಘಟ್ಟ ಕ್ರಿ ಶ 1114. ತಂದೆ ಮಹೇಶ್ವರೋಪಾಧ್ಯಾಯ. ತಂದೆಯೂ ಗಣಿತಜ್ಞ. ಅವರಿಂದಲೇ ಮೊದಲ ಪಾಠ. ಭಾಸ್ಕರಾಚಾರ್ಯ ಉಜ್ಜಯಿನಿಯ ಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ ವರಾಹಮಿಹಿರ ಮತ್ತು ಬ್ರಹ್ಮಗುಪ್ತರ ಗಣಿತ ಸಂಪ್ರದಾಯವನ್ನು ಮುಂದುವರೆಸಿದನು. ದಶಮಾನ ಪದ್ದತಿ ಹಾಗೂ ಆಧುನಿಕ ಬೀಜಗಣಿತದಲ್ಲಿ ಉಪಯೋಗಿಸಲ್ಪಡುವ ಅಕ್ಷರಪದ್ದತಿಯನ್ನು ಮೊದಲಿಗೆ ಬಳಕೆಗೆ ತಂದವರು ಇವರು. ಇವರು ಒಟ್ಟು ಆರು ಗ್ರಂಥಗಳನ್ನು ರಚಿಸಿದರು. ಸಿದ್ಧಾಂತ ಶರೋಮಣಿ ಎಂಬುದು ಖಗೋ-ಗಣಿತದ ಗ್ರಂಥ. ಇದರಲ್ಲಿ ಆಕಾಶ, ಸೂರ್ಯ, ಚಂದ್ರ ಹಾಗು ಗ್ರಹಗಳ ಸಂಪೂರ್ಣ ವಿವರಣೆ ಇದೆ. 'ಲೀಲಾವತಿ' ಎಂಬುದು ತನ್ನ ಮಗಳ ವಿನೋದಕ್ಕಾಗಿ ಬರೆದುದೆಂದು ಹೇಳಲಾಗುತ್ತಿದೆಯಾದರೂ ಅಂಕ ಗಣಿತವೇ ಇದರ ಜೀವಾಳ. ಈಗಿನ ಕ್ಯಾಲ್ ಕುಲಸ್ ಗಣಿತದ ಮೂಲ ತತ್ವ. ದಶಮಾಂಶ ಪದ್ಧತಿಯನ್ನು ಈತನೇ ಅಭಿವೃದ್ಧಿಪಡಿಸಿದನೆಂದು ನಂಬಲಾಗಿದೆ. ಕ್ರಿ ಶ 1185ರಲ್ಲಿ ಮರಣಹೊಂದಿದ.

ಮುಖ್ಯ ಕೃತಿಗಳು[ಬದಲಾಯಿಸಿ]

  • ಲೀಲಾವತಿ ಗಣಿತ (ಮುಖ್ಯವಾಗಿ ಅಂಕಗಣಿತದ ಬಗ್ಗೆ, ತನ್ನ ಮಗಳ ಮನೋರಂಜನೆಗಾಗಿ ಬರೆದದ್ದೆಂದು ಹೇಳಲಾಗುತ್ತದೆ).
  • ಬೀಜಗಣಿತ
  • ಸಿದ್ಧಾಂತಶಿರೋಮಣಿ: ಇದರಲ್ಲಿ ಎರಡು ಭಾಗಗಳಿವೆ:
    • ಗೋಳಾಧ್ಯಾಯ
    • ಗ್ರಹಗಣಿತ

ಹೆಚ್ಚಿನ ಮಾಹಿತಿಗಾಗಿ[ಬದಲಾಯಿಸಿ]

  1. ಭಾಸ್ಕರಾಚಾರ್ಯ ವಿರಚಿತ ಲೀಲಾವತಿ 108 ಆಯ್ದ ಲೆಕ್ಕಗಳು

ಇವನ್ನೂ ನೋಡಿ[ಬದಲಾಯಿಸಿ]

ಹೊರಗಿನ ಸಂಪರ್ಕಗಳು[ಬದಲಾಯಿಸಿ]