ವಿಷಯಕ್ಕೆ ಹೋಗು

ಮಮದಾಪುರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮಮದಾಪುರ
ಮಮದಾಪುರ
village
Population
 (೨೦೧೧)
 • Total೧೫೦೦೦


ಮಮದಾಪುರ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ. ಮಮದಾಪುರ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ. ಮಮದಾಪುರ ಗ್ರಾಮವು ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 45 ಕಿ.ಮಿ. ಇದೆ.

ಚರಿತ್ರೆ

[ಬದಲಾಯಿಸಿ]

ಗ್ರಾಮದಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಸಿಂಡಿಕೇಟ್ ಬ್ಯಾಂಕ್ ಹಾಗೂ ಇತರೆ ಕಚೇರಿಗಳಿವೆ.

ಭೌಗೋಳಿಕ

[ಬದಲಾಯಿಸಿ]

ಗ್ರಾಮವು ಭೌಗೋಳಿಕವಾಗಿ 16* 32' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

[ಬದಲಾಯಿಸಿ]
  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - 35°C-42°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - 18°C-28°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ 18 ಕಿಮಿ/ಗಂ (ಜೂನ), 19 ಕಿಮಿ/ಗಂ (ಜುಲೈ)ಹಾಗೂ 17 ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ

[ಬದಲಾಯಿಸಿ]

ಗ್ರಾಮದಲ್ಲಿ ಜನಸಂಖ್ಯೆ(2011) ಸುಮಾರು 4814 ಇದೆ. ಅದರಲ್ಲಿ 2407 ಪುರುಷರು ಮತ್ತು 2407 ಮಹಿಳೆಯರು ಇದ್ದಾರೆ.

ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ ಮತ್ತು ಮೊಹರಮ ಹೆಜ್ಜೆ ಕುಣಿತದ ಪದ ಮುಂತಾದವುಗಳು ಗ್ರಾಮದ ಕಲೆಯಾಗಿದೆ.

ಸಂಸ್ಕೃತಿ

[ಬದಲಾಯಿಸಿ]
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಆಹಾರ (ಖಾದ್ಯ)

[ಬದಲಾಯಿಸಿ]

ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ, ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ವಿಜಯಪುರದ ಜೋಳದ ರೊಟ್ಟಿ , ಸೇಂಗಾ ಚಟ್ನಿ, ಎಣ್ಣೆ ಬದನೆಕಾಯಿ ಪಲ್ಯ, ಕೆನೆಮೊಸರು ಲಭ್ಯವಿರುತ್ತದೆ.

ಕೃಷಿ ಮತ್ತು ನೀರಾವರಿ

[ಬದಲಾಯಿಸಿ]

ಗ್ರಾಮದ ಪ್ರತಿಶತ 90 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕಾಲುವೆಗಳು

[ಬದಲಾಯಿಸಿ]

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಉದ್ಯೋಗ

[ಬದಲಾಯಿಸಿ]

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 90% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿಸಾಕಾಣಿಕೆ ಉಪಕಸುಬುಗಳಾಗಿವೆ.

ಬೆಳೆಗಳು

[ಬದಲಾಯಿಸಿ]

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಆರ್ಥಿಕತೆ ಹಾಗೂ ಹಣಕಾಸು

[ಬದಲಾಯಿಸಿ]

ಫಲವತ್ತಾದ ಭೂಮಿ ಹಾಗೂ ನೀರಾವರಿಯಿಂದಗಿ ಗ್ರಾಮದ ಆರ್ಥಿಕತೆ ಹಾಗೂ ಹಣಕಾಸಿನ ಸ್ಥಿತಿ ಉತ್ತಮವಾಗಿದೆ.

ಧರ್ಮಗಳು

[ಬದಲಾಯಿಸಿ]

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆಗಳು

[ಬದಲಾಯಿಸಿ]

ಗ್ರಾಮದ ಪ್ರಮುಖ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ.

ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯಗಳು

[ಬದಲಾಯಿಸಿ]
  • ಶ್ರೀ ಹಣಮಂತ ದೇವಾಲಯ
  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ಸಿದ್ದರಾಮೇಶ್ವರ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಜಟ್ಟಿಂಗೇಶ್ವರ ದೇವಾಲಯ
  • ಶ್ರೀ ಮಲ್ಲಿಕಾರ್ಜುನ್ ದೇವಾಲಯ
  • ಶ್ರೀ ದ್ಯಾಮವ್ವ ದೇವಿ ದೇವಾಲಯ
  • ಶ್ರೀ ಮಡಿವಾಳೇಶ್ವರ ದೇವಾಲಯ

ಮಸೀದಿಗಳು

[ಬದಲಾಯಿಸಿ]

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ಹಬ್ಬಗಳು

[ಬದಲಾಯಿಸಿ]

ಪ್ರತಿವರ್ಷ ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ. ಕಾರಿ ಹುಣ್ಣಿಮೆಯ ದಿನ ಶ್ರೀ ದುರ್ಗಾದೇವಿಯ ಜಾತ್ರೆ ಶ್ರೀ ಸಿದ್ದರಾಮೇಶ್ವರ ಜಾತ್ರೆ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆ ಶ್ರೀ ಜಟ್ಟಿಂಗೇಶ್ವರ ದೇವರ ಜಾತ್ರೆ

ನೀರಾವರಿ

[ಬದಲಾಯಿಸಿ]

ಗ್ರಾಮದ ಪ್ರತಿಶತ ೭೫ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಶಿಕ್ಷಣ

[ಬದಲಾಯಿಸಿ]
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಮದಾಪುರ
  • ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ, ಮಮದಾಪುರ
  • ಸರಕಾರಿ ಪ್ರೌಢ ಶಾಲೆ, ಮಮದಾಪುರ
  • ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಮಮದಾಪುರ
  • ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ಮಮದಾಪುರ
  • ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆ, ಮಮದಾಪುರ

ಆರೋಗ್ಯ

[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ.

ಪಶು ಚಿಕಿತ್ಸಾಲಯ

[ಬದಲಾಯಿಸಿ]

ಗ್ರಾಮದಲ್ಲಿ ಪಶು ಚಿಕಿತ್ಸಾಲಯವಿದೆ.

ಆರಕ್ಷಕ (ಪೋಲಿಸ್) ಠಾಣೆ

[ಬದಲಾಯಿಸಿ]

ಗ್ರಾಮದಲ್ಲಿ ಉಪ ಪೋಲಿಸ್ ಠಾಣೆ ಇದೆ.

ವಿದ್ಯುತ್ ಪರಿವರ್ತನಾ ಕೇಂದ್ರ

[ಬದಲಾಯಿಸಿ]

೧೧೦ ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರವು ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಿಗೆ ವಿದ್ಯುತ್ ಒದಗಿಸುತ್ತದೆ.

ಬ್ಯಾಂಕ್

[ಬದಲಾಯಿಸಿ]
ಕೆನರಾ  ಬ್ಯಾಂಕ್, ಮಮದಾಪುರ
  • ಸಿದ್ದಸಿರಿ ಬ್ಯಾಂಕ, ಮಮದಾಪುರ

ಕೆರೆಗಳು

[ಬದಲಾಯಿಸಿ]

ಊರಿನ ಹತ್ತಿರ ಇತಿಹಾಸ ಪ್ರಸಿದ್ದ ಆದಿಲ್ ಶಾಹಿ ಕಾಲದ ಒಂದು ಸಣ್ಣ ಹಾಗೂ ದೊಡ್ಡ ಕೆರೆಗಳುವೆ.

ಆದಿಲ್ ಶಾಹಿ ಅರಸರ ಕಾಲದ ಬಿಜಾಪುರದ (ಈಗಿನ ವಿಜಯಪುರ) ಸೊಬಗು ನಾಡಿನ ಉದ್ದಗಲಕ್ಕೂ ಹಬ್ಬಿತ್ತು. ಮಲೆನಾಡಿನ ಹಸಿರು ವೈಭವವನ್ನು ಅರಿತಿದ್ದ ಆದಿಲ್ ಶಾಹಿ ಅರಸರು ಬಿಜಾಪುರವನ್ನೂ ಸಹ ಮಲೆನಾಡಿಗಿಸಲು ಪ್ರಯತ್ನಿಸಿ ಯಶಸ್ವಿಯೂ ಆಗಿದ್ದರು. ಇದರ ಫಲವಾಗಿ ಮಹಮ್ಮದ್ ಆದಿಲ್ ಶಾಹಿ, ಬರಗಿ, ಖಾಸಬಾಗ ಒಳಗೊಂಡಂತೆ ಏಳು ಹಳ್ಳಿಗಳನ್ನು ಸ್ಥಳಾತರಿಸಿ, 1,000ಕ್ಕೂ ಹೆಚ್ಚಿನ ಎಕರೆಗಳಲ್ಲಿ ಎರಡು ಬೃಹತ್ ಕೆರೆಗಳನ್ನು ನಿರ್ಮಿಸಿ, ಒಂದಕ್ಕೆ ಮಹಮ್ಮದಪುರ ಕೆರೆ (ಈಗಿನ ಮಮದಾಪುರ ಕೆರೆ) ಎಂದು ತನ್ನ ಹೆಸರನ್ನೇ ಇಟ್ಟನು.

ಮಳೆ ಮಾಪನ ಕೇಂದ್ರ

[ಬದಲಾಯಿಸಿ]

ಗ್ರಾಮದಲ್ಲಿ ಮಳೆ ಮಾಪನ ಕೇಂದ್ರವಿದೆ.

ಹಾಲು ಉತ್ಪಾದಕ ಸಹಕಾರಿ ಸಂಘ

[ಬದಲಾಯಿಸಿ]

ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘವಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

[ಬದಲಾಯಿಸಿ]

ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವಿದೆ.

ನೆಮ್ಮದಿ (ಹೋಬಳಿ) ಕೇಂದ್ರ

[ಬದಲಾಯಿಸಿ]

ಗ್ರಾಮದಲ್ಲಿ ನೆಮ್ಮದಿ ಕೇಂದ್ರವಿದೆ.

ನಾಡ ಕಚೇರಿ

[ಬದಲಾಯಿಸಿ]

ಗ್ರಾಮದಲ್ಲಿ ನಾಡ ಕಚೇರಿಯಿದೆ.

ಕಂದಾಯ ಕಚೇರಿ

[ಬದಲಾಯಿಸಿ]

ಗ್ರಾಮದಲ್ಲಿ ಕಂದಾಯ ಕಚೇರಿಯಿದೆ.

ದೂರವಾಣಿ ವಿನಿಮಯ ಕೇಂದ್ರ

[ಬದಲಾಯಿಸಿ]

ಗ್ರಾಮದಲ್ಲಿ ದೂರವಾಣಿ ವಿನಿಮಯ ಕೇಂದ್ರ(ಬಿ.ಎಸ್.ಎನ್.ಎಲ್)ವಿದೆ.

ಅಂಚೆ ಕಚೇರಿ

[ಬದಲಾಯಿಸಿ]

ಗ್ರಾಮದಲ್ಲಿ ಅಂಚೆ ಕಚೇರಿಯಿದೆ.

ರೈತ ಸಂಪರ್ಕ ಕೇಂದ್ರ

[ಬದಲಾಯಿಸಿ]

ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರವಿದೆ.

"https://kn.wikipedia.org/w/index.php?title=ಮಮದಾಪುರ&oldid=1169697" ಇಂದ ಪಡೆಯಲ್ಪಟ್ಟಿದೆ