ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ (ಚಲನಚಿತ್ರ)
ಈ ಲೇಖನವನ್ನು ಪರಿಷ್ಕರಣೆಗೆ ಹಾಕಲಾಗಿದೆ. ಲೇಖನವನ್ನು ವಿಕಿ ಲೇಖನಗಳಂತೆ ಶುದ್ಧೀಕರಿಸಿದ ನಂತರ ಈ ಸಂದೇಶವನ್ನು ತೆಗೆದುಹಾಕಿ. ಈ ಲೇಖನವನ್ನು ಈ ಕಾರಣಗಳಿಂದಾಗಿ ನಕಲು ಸಂಪಾದನೆಗೆ ಒಳಪಡಿಸಬೇಕಿದೆ {{{ವ್ಯಾಕರಣ, ಶೈಲಿ, ಒಗ್ಗಟ್ಟು, ಸಂಯೋಜನೆ ಧ್ವನಿ ಅಥವಾ ಕಾಗುಣಿತ}}}. |
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ (ಚಲನಚಿತ್ರ) | |
---|---|
ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ | |
ನಿರ್ದೇಶನ | ಸಂತೋಷ್ ಆನಂದ್ ರಾಮ್ |
ನಿರ್ಮಾಪಕ | ಜಯಣ್ಣ ಹಾಗೂ ಭೋಗೇಂದ್ರ |
ಚಿತ್ರಕಥೆ | ಸಂತೋಷ್ ಆನಂದ್ ರಾಮ್ |
ಕಥೆ | ಸಂತೋಷ್ ಆನಂದ್ ರಾಮ್ |
ಸಂಭಾಷಣೆ | ಸಂತೋಷ್ ಆನಂದ್ ರಾಮ್ |
ಪಾತ್ರವರ್ಗ | ಯಶ್ ರಾಧಿಕಾ ಪಂಡಿತ್ ಶ್ರೀನಾಥ್ ,ಅಚ್ಯುತ್ ಕುಮಾರ್,ಮಾಳವಿಕಾ ಅವಿನಾಶ್ |
ಸಂಗೀತ | ವಿ.ಹರಿಕೃಷ್ಣ |
ಛಾಯಾಗ್ರಹಣ | ವೈದಿ.ಎಸ್ |
ಸಂಕಲನ | ಕೆ.ಎಂ.ಪ್ರಕಾಶ್ |
ಬಿಡುಗಡೆಯಾಗಿದ್ದು | ೨೦೧೪ |
ನೃತ್ಯ | ಮುರಳಿ |
ಸಾಹಸ | ರವಿವರ್ಮ |
ಚಿತ್ರ ನಿರ್ಮಾಣ ಸಂಸ್ಥೆ | ಜಯಣ್ಣ ಹಾಗೂ ಭೋಗೇಂದ್ರ |
ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ಕನ್ನಡ ಚಿತ್ರ. ಜಯಣ್ಣ ಹಾಗೂ ಭೋಗೇಂದ್ರ ಈ ಚಿತ್ರದ ನಿರ್ಮಾಪಕರು. ಸಂತೋಷ್ ಆನಂದ್‌ರಾಮ್ ನಿರ್ದೇಶಕರು. ಇವರಿಗಿದು ಮೊದಲ ಚಿತ್ರ. ವಿಶೇಷವೆಂದರೆ ಈ ಚಿತ್ರದಲ್ಲಿ ಯಶ್ ಹಾಡಿದ್ದಾರೆ. ಇದು ಯಶ್ ಹಾಡಿರುವ ಮೊದಲ ಚಿತ್ರ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ವೈದಿ.ಎಸ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಕಥೆ
[ಬದಲಾಯಿಸಿ]ನಾಗರಹಾವು ಸಿನೆಮಾದ ನಾಯಕ ಪಾತ್ರ ರಾಮಾಚಾರಿ(ವಿಷ್ಣುವರ್ಧನ್) ಅವನನ್ನು ಆರಾಧಿಸುವ ಈ ನೂತನ ರಾಮಾಚಾರಿ (ಯಶ್), ಮೂಲ ರಾಮಾಚಾರಿಯ ಸಿಟ್ಟನ್ನು ತನ್ನಲ್ಲಿ ಅವಗಾಹಿಸಿಕೊಂಡಿರುತ್ತಾನೆ. ಅವನ ರೀತಿಯಲ್ಲೆ ಪರೀಕ್ಷೆಯಲ್ಲಿ ಕಾಪಿ ಹೊಡೆದು ಸಿಕ್ಕಿ ಬಿದ್ದು ಪ್ಯಾಂಟ್ ಬಿಚ್ಚುವ ಶಿಕ್ಷೆ ಪಡೆಯುತ್ತಾನೆ. ಆ ಸಿಟ್ಟು ಮತ್ತು ಈ ಘಟನೆ ಬಿಟ್ಟರೆ ಹಳೆಯ ರಾಮಚಾರಿಗೂ ಈ ರಾಮಾಚಾರಿಗೂ ಹೆಚ್ಚೇನೂ ಸಾಮ್ಯತೆ ಇಲ್ಲ. ಇವನ ಅಣ್ಣ ಬುದ್ಧಿವಂತ. ಓದಿನಲ್ಲಿ ಚುರುಕು. ಇವರ ಅಪ್ಪನಿಗೆ ಚುರುಕು ಮಗನ ಮೇಲೆ ವಿಶೇಷ ಪ್ರೀತಿ. ಒರಟ ಮಗನನ್ನು ಕಂಡರೆ ಪೊಲೀಸ್ ಠಾಣೆಯಲ್ಲಿ ದೂರು ಕೊಡುವಷ್ಟು ಕೋಪ. ರಾಮಾಚಾರಿಗೆ ದತ್ತು ಮತ್ತು ಚಿಕ್ಕಪ್ಪ ಆತ್ಮೀಯ ಗೆಳೆಯರು. ತಾನು ವಿರಳವಾಗಿ ಹೋಗುವ ಕಾಲೇಜಿನಲ್ಲಿ ಮೊದಲ ನೋಟದಲ್ಲೇ ನಾಯಕ ನಟಿಯನ್ನು(ರಾಧಿಕಾ ಪಂಡಿತ್) ನೋಡಿ ಲವ್ ಆಗುತ್ತದೆ. ಅವಳನ್ನು ರ್‍ಯಾಗಿಂಗ್‍ನಿಂದ ತಪ್ಪಿಸಲು ಒಂದು ಫೈಟ್. ನಾಯಕಿ ತನ್ನ ಆತ್ಮೀಯ ಗೆಳೆಯ ದತ್ತುವಿನ ತಂಗಿ ಎಂದು ತಿಳಿದು ಕೊನೆಗೆ ಸ್ನೇಹವೇ ದೊಡ್ದದು ಎಂದು ಸುಮ್ಮನಾಗುತ್ತಾನೆ. ಆದರೆ ನಾಯಕಿ ಅಣ್ಣನನ್ನು ಒಪ್ಪಿಸಿ, ತನ್ನ ತಾಯಿಯನ್ನು(ಮಾಳವಿಕ) ಎದುರು ಹಾಕಿಕೊಂಡು ತನ್ನ ಪ್ರೀತಿಯನ್ನು ಸಮರ್ಪಿಸುತ್ತಾಳೆ. ರಾಮಾಚಾರಿ 'ಬಾಗಿನ' ಕೊಟ್ಟು ಹುಡುಗಿಯ ಹತ್ತಿರ ಪ್ರೀತಿಯನ್ನು ಸಂವೇದಿಸಿಕೊಳ್ಳುತ್ತಾನೆ. ಇವನು ರಾಮಾಚಾರಿಯಾದ ಮೇಲೆ ನಾಯಕಿಯನ್ನು "ಮಾರ್ಗರೆಟ್" ಎಂದು ನಾಮಕರಣ ಮಾಡುತ್ತಾನೆ. ಇವರ ಮಧುರ ಪ್ರೀತಿಯ ನವಿರು ಕ್ಷಣಗಳು, ಹಾಡುಗಳೊಂದಿಗೆ ಮುಂದುವರೆಯುವ ಕಥೆ, ರಾಮಾಚಾರಿಯ 'ಮಿಸ್ ಕಮ್ಮ್ಯುನಿಕೇಶನ್' ನಿಂದ ಇಬ್ಬರಲ್ಲೂ ವಿರಸ ಉಂಟಾಗುತ್ತದೆ. ಈ ಮಧ್ಯದಲ್ಲಿ ರಾಮಾಚಾರಿಯ ಅಣ್ಣನನ್ನು ಓದಿಸಿದ್ದ, ತನ್ನ ಕುಟುಂಬ ಗೆಳೆಯನ(ಶ್ರೀನಾಥ್) ಮಗಳನ್ನು ತನ್ನ ಅಣ್ಣ ವರಿಸಬೇಕಿರುತ್ತದೆ. ಆದರೆ ಅಣ್ಣ ಓಡಿ ಹೋಗುತ್ತಾನೆ. ಇದರಿಂದ ನೊಂದ ಅಪ್ಪ ಆಸ್ಪತ್ರೆ ಸೇರುತ್ತಾನೆ. ಈ ಮಧ್ಯೆದಲ್ಲಿ ಮಾರ್ಗರೆಟಳ ಹುಟ್ಟುಹಬ್ಬಕ್ಕೆ ವಿಶ್ ಮಾಡುವುದನ್ನು ಮರೆಯುತ್ತಾನೆ. ಇವರಿಂದ ವಿರಸ ವಿಪರೀತಗೊಂಡು, ಸಂಬಂಧ ಕಡಿತಗೊಳ್ಳುತ್ತದೆ. ಮಾರ್ಗರೆಟ್ ಮತ್ತೆ ದಿವ್ಯ(ಮೂಲ ಹೆಸರು) ಆಗಿಬಿಡುತ್ತಾಳೆ. ಆಗ ತನ್ನ ಅಣ್ಣ ವರಿಸಬೇಕಿದ್ದ ಹುಡುಗಿಯನ್ನು ತನ್ನ ತಂದೆಯ(ಈಗ ಸಂಬಂಧ ಉತ್ತಮಗೊಂಡಿರುತ್ತದೆ) ಒತ್ತಡದಿಂದ ರಾಮಾಚಾರಿ ವರಿಸಲು ಒಪ್ಪಿಕೊಳ್ಳುತ್ತಾನೆ. ಅಲ್ಲಿ ಮಾರ್ಗರೆಟಿಗೂ ಅಮೇರಿಕಾದ ಸಂಬಂಧ(ಧ್ಯಾನ್) ಒಲಿದು ಬರುತ್ತದೆ. ಚಿತ್ರದುರ್ಗದಲ್ಲಿ ಎರಡೂ ಸಂಬಂಧಗಳ ಮದುವೆ ಒಂದೇ ದಿನ ನಿಗದಿಯಾಗುತ್ತದೆ. ಮುಂದೇನಾಗುತ್ತದೆ ಎಂಬುದೇ ಉಳಿದ ಸಿನಿಮಾ.
ತಾರಾಗಣ
[ಬದಲಾಯಿಸಿ]- ಯಶ್
- ರಾಧಿಕಾ ಪಂಡಿತ್
- ಶ್ರೀನಾಥ್
- ಅಚ್ಯುತ್ ಕುಮಾರ್
- ಮಾಳವಿಕಾ ಅವಿನಾಶ್
- ಸಾಧು ಕೋಕಿಲ
- ಹೊನ್ನವಳ್ಳಿ ಕೃಷ್ಣ
- ಧ್ಯಾನ್
- ಅರುಣಾ ಬಾಲರಾಜ್
- ಗಿರೀಶ್
- ರಾಕ್ಲೈನ್ ಸುಧಾಕರ್
- ಮೈಸೂರು ನಾಯ್ಡು
- ಅಶೋಕ್ ಶರ್ಮಾ
- ವಿಶಾಲ್ ಹೆಗ್ಡೆ
ಬಾಕ್ಸ್ ಆಫೀಸ್
[ಬದಲಾಯಿಸಿ]ಚಿತ್ರ ಬಿಡುಗಡೆಯಾದ ಮೊದಲ ಆರು ದಿನಗಳಲ್ಲಿ ‘ರಾಮಾಚಾರಿ’ ಚಿತ್ರದ ಒಟ್ಟು ಗಳಿಕೆ 14 ಕೋಟಿ ರೂಪಾಯಿ. ರಾಜ್ಯದ ಒಟ್ಟು 200 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿತ್ತು. ಗುರುವಾರ (ಡಿ.25) ಚಿತ್ರ ಬಿಡುಗಡೆಯಾದ ಎರಡು ದಿನಕ್ಕೆ ಹತ್ತು ಚಿತ್ರಮಂದಿರಗಳು ಹೊಸದಾಗಿ ಸೇರ್ಪಡೆಯಾದವು.