ಮುಸುಕು ತೆಗೆಯೆ ಮಾಯಾಂಗನೆ

ವಿಕಿಪೀಡಿಯ ಇಂದ
Jump to navigation Jump to search

ಮುಸುಕ ತೆಗೆಯೇ ಮಾಯಾಂಗನೆಯ ಹೆಸರು ಈ ಕಾದಂಬರಿ ಪತ್ತೇದಾರಿ ಕಥೆಯನ್ನೋ, ರಂಜನೀಯವಾದ ಸುರಸ ಕಥೆಯನ್ನೋ ಹೇಳುತ್ತದೆ ಎನಿಸುವಂತೆ ಮಾಡುತ್ತದೆ. ಬ್ರಿಟಿಷರ ಕೈಯಿಂದ ಮೈಸೂರು ಅರಸೊತ್ತಿಗೆಯನ್ನು ಬಿಡಿಸಿ ಪುನಃ ಅದನ್ನು ಮುಮ್ಮಡಿಯವರ ಕೈಸೇರುವಂತೆ ಮಾಡಲು ಬ್ರಿಟಿಷ್ ಸರದಾರರನ್ನು ತಮ್ಮ ಕಡೆಗೆ ಒಲಿಸಿಕೊಳ್ಳುವ ಒಂದು ಹವಣು ಇಲ್ಲಿ ಕಾಣುತ್ತದೆ. ಅಂದಿನ ಮೈಸೂರಿನ ರಾಜಕೀಯ ಸ್ಥಿತಿಯಲ್ಲಿನ ಒಳಜಗಳಗಳು, ಅಸೂಯೆ, ಪಿತೂರಿ ಮೊದಲಾದ ಎಲ್ಲ ಗೊಂದಲಗಳೂ ಈ ಕಥೆಯಲ್ಲಿ ಸ್ಪಷ್ಟವಾಗಿ ಚಿತ್ರಿತವಾಗಿವೆ.